Old Pension: ಇನ್ನುಮುಂದೆ ಈ ನೌಕರರು ಹಳೆಯ ಪಿಂಚಣಿ ಯೋಜನೆಯ ಲಾಭ ಪಡೆಯಲಿದ್ದಾರೆ, ಪಿಂಚಣಿ ನಿಯಮ ಬದಲಾವಣೆ.

ಇನ್ನುಮುಂದೆ ಈ ನೌಕರರು ಹಳೆಯ ಪಿಂಚಣಿಯ ಲಾಭವನ್ನು ಪಡೆಯಬಹುದು.

Old Pension Scheme Update: ಸದ್ಯ ದೇಶದಲ್ಲಿ 7 ನೇ ವೇತನದಡಿ ತುಟ್ಟಿಭತ್ಯೆ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ. ಹೊಸ ವರ್ಷದಿಂದ ಸರ್ಕಾರೀ ನೌಕರರು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದಾರೆ. ತುಟ್ಟಿಭತ್ಯೆ ಹೆಚ್ಚಳ ಘೋಷಣೆಯ ಬೆನ್ನಲೇ ಇದೀಗ ಸರ್ಕಾರೀ ನೌಕರರು ಹಳೆಯ ಪಿಂಚಣಿ (Old Pension Scheme) ಜಾರಿಮಾಡುವ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸರ್ಕಾರ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಮಾಡುವ ಕುರಿತು ಮಹತ್ವದ ಚರ್ಚೆ ನಡೆಸುತ್ತಿದೆ. ಈಗಾಗಲೇ ಕೆಲ ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾಗಿದೆ. ಇದೀಗ ಸರ್ಕಾರ ಇಂತಹ ನೌಕರರಿಗೆ ಮಾತ್ರ ಹಳೆಯ ಪಿಂಚಣಿ ಯೋಜನೆಯನ್ನು ಪರಿಚಯಿಸಿದೆ. ಇನ್ನುಮುಂದೆ ಸರ್ಕಾರೀ ನೌಕರರು ಹಳೆಯ ಪಿಂಚಣಿಯ ಲಾಭವನ್ನು ಪಡೆಯಬಹುದು.

Old Pension Scheme
Image Credit: Goodreturns

ಪಿಂಚಣಿ ನಿಯಮ ಬದಲಾವಣೆ
ಸರ್ಕಾರಕ್ಕೆ ನೌಕರರು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಇನ್ನು ಈ ವರ್ಷದಲಿ ಲೋಕಸಭಾ ಚುನಾವಣೆ ಎದುರಾಗಲಿದೆ. ಲೋಕಸಭಾ ಚುನಾವಣೆಗೂ ಮುನ್ನ ಸರ್ಕಾರ ಹಳೆಯ ಪಿಂಚಣಿ ಜಾರಿ ಮಾಡುವ ಬಗ್ಗೆ ಘೋಷಿಸಲಿದೆ. ಹೊಸ ವರ್ಷದ ಆರಂಭದಲ್ಲಿ ಈ ರಾಜ್ಯದಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಘೋಷಿಸಲಾಗಿದೆ. ಈ ಮೂಲಕ ಸರ್ಕಾರೀ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ.

Old Pension Scheme Latest Update
Image Credit: Businessleague

ಇನ್ನುಮುಂದೆ ಈ ನೌಕರರು ಹಳೆಯ ಪಿಂಚಣಿ ಯೋಜನೆಯ ಲಾಭ ಪಡೆಯಲಿದ್ದಾರೆ
ನವೆಂಬರ್ 2005 ರ ಮೊದಲು ಸರ್ಕಾರಿ ಉದ್ಯೋಗಗಳ ನೇಮಕಾತಿಗಾಗಿ ಹೊರಡಿಸಲಾದ ಜಾಹೀರಾತಿನ ಅಡಿಯಲ್ಲಿ, ನವೆಂಬರ್ 1, 2005 ರಂದು ಅಥವಾ ನಂತರ ಸರ್ಕಾರಿ ಕೆಲಸಕ್ಕೆ ಸೇರಿದ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯ ಆಯ್ಕೆಯನ್ನು ನೀಡಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಹಳೆಯ ಪಿಂಚಣಿ ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.ರಾಜ್ಯದಲ್ಲಿ ಈ ವರ್ಷ ನಡೆಯಲಿರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೂ ಮುನ್ನ ಹಳೆಯ ಪಿಂಚಣಿ ಜಾರಿಯಾಗಲಿದೆ.

ಅದೇ ರೀತಿಯಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ಹಳೆಯ ಪಿಂಚಣಿ ನಿಯಮ ಜಾರಿಗೆ ತರಲಾಗುವುದು ಮತ್ತು ಅದರ ಬಗ್ಗೆ ನಿರ್ಧಾರ ತಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಸದ್ಯ ನಮ್ಮ ರಾಜ್ಯದಲ್ಲಿ ನೌಕರರ ಪಿಂಚಣಿ ನಿಯಮದಲ್ಲಿ ಬದಲಾವಣೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಬಹುದು.

Join Nadunudi News WhatsApp Group

Join Nadunudi News WhatsApp Group