Students ID Card: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ, “ಒಂದು ರಾಷ್ಟ್ರ ಒಂದು ID” ಯೋಜನೆ.

ಶಾಲಾ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದ ಹೊಸ ಯೋಜನೆ.

One Nation One Student ID: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಶಿಕ್ಷಣ ನೀತಿಯಲ್ಲಿ ಸಾಕಷ್ಟು ಬದಲಾವಣೆಯನ್ನು ತಂದಿದೆ. 2023 -24 ರ ಸಾಲಿನ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯಲ್ಲಿ ಅಡಿಯಲ್ಲಿ ವ್ಯಾಸಂಗ ಪಡೆಯುತ್ತಿದ್ದಾರೆ ಎನ್ನಬಹುದು.

ಈಗಾಗಲೇ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶಿಕ್ಷಣ ಇಲಾಖೆ ಹೆಚ್ಚಿನ ಕ್ರಮ ಕೈಗೊಂಡಿದೆ. ಶಿಕ್ಷಣ ಇಲಾಖೆಯು ಇದೀಗ ಶಾಲಾ ವಿದ್ಯಾರ್ಥಿಗಳಿಗೆ ಹೊಸ ನಿಯಮವನ್ನು ಅಳವಡಿಸಿದೆ. ಈ ಮೂಲಕ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ ಗುಡ್ ನ್ಯೂಸ್ ನೀಡಿದೆ.

One Nation, One Student ID
Image Credit: News24online

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
ಪೋಷಕರು ಒಪ್ಪಿಗೆ ಮೇರೆಗೆ ಶಾಲಾ ವಿದ್ಯಾರ್ಥಿಗಳು ಶೀಘ್ರದಲ್ಲೇ ತಮ್ಮದೇ ಆದ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರ ಭಾಗವಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಪ್ರತಿ ವಿದ್ಯಾರ್ಥಿಗೆ ‘ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ (ಎಪಿಎಎಆರ್) ಎಂಬ ‘One Nation, One Student ID’ ರಚಿಸಲು ಯೋಜಿಸಿದೆ ಎನ್ನಲಾಗಿದೆ.

Modi government gave good news to school children
Image Credit: Sarkarnama

One Nation, One Student ID
APAAR ID, ಎಜುಕೇಶನ್ ಇಕೋಸಿಸ್ಟಮ್ ರಿಜಿಸ್ಟ್ರಿ ಅಥವಾ ಎಜುಲಾಕರ್ ಅನ್ನು ಜೀವಮಾನದ ID ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣ ಮತ್ತು ಸಾಧನೆಗಳನ್ನು ಟ್ರ್ಯಾಕ್ ಮಾಡುತ್ತದೆ. ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿದ್ಯಾರ್ಥಿಗಳಿಗೆ APAR ID ಗಳನ್ನು ರಚಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ದೇಶಿಸಿದೆ.

APAAR ಮತ್ತು National Credit Framework ಭಾರತದಾದ್ಯಂತ ಕ್ಲಿಯುವವರಿಗೆ QR Code ಆಗಿರುತ್ತದೆ. ಅವರು ತೆಗೆದುಕೊಳ್ಳುವ ಪ್ರತಿಯೊಂದು ಕೌಶಲ್ಯವನ್ನು ಇಲ್ಲಿ ಕ್ರೆಡಿಟ್ ಮಾಡಲಾಗುತ್ತದೆ ಎಂದು AICTE ಅಧ್ಯಕ್ಷ T.G ಸೀತಾರಾಮನ್ ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group