Panic Button: ಉಚಿತ ಬಸ್ ಬೆನ್ನಲ್ಲೇ ರಾಜ್ಯ ಮಹಿಳೆಯರಿಗೆ ಇನ್ನೊಂದು ಯೋಜನೆ ಜಾರಿಗೆ, ಸರ್ಕಾರದ ಆದೇಶ.
ಉಚಿತ ಪ್ರಯಾಣದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.
Panic Button In KSRTC Bus: ರಾಜ್ಯದ ಮಹಿಳೆಯರು ಜೂನ್ 11 ರಿಂದ ಶಕ್ತಿ ಯೋಜನೆಯ (Shakti Scheme) ಲಾಭ ಪಡೆಯುತ್ತಿದ್ದಾರೆ. ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಮೊದಲು ಜಾರಿಗೆ ಬಂದಿದೆ. ರಾಜ್ಯ ಸರ್ಕಾರ ಈ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ದಿನನಿತ್ಯ ಲಕ್ಷಾಂತರ ಮಹಿಳಾ ಪ್ರಯಾಣಿಕರು ಉಚಿತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ.
ವಿದ್ಯಾರ್ಥಿಗಳಿಗಂತೂ ಉಚಿತ ಬಸ್ ಪ್ರಯಾಣ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಇನ್ನು ಕಾಂಗ್ರೆಸ್ ನ ಐದು ಗ್ಯಾರಂಟಿಗಳ ಲಾಭ ರಾಜ್ಯದ ಜನತೆ ಪಡೆಯಲಿದ್ದಾರೆ. ಪ್ರಸ್ತುತ ರಾಜ್ಯದ ಗೃಹಣಿಯರು ಮಾಸಿಕ 2000 ಹಣ ಪಡೆಯಲು ಕಾಯುತ್ತಿದ್ದಾರೆ. ಆಗಸ್ಟ್ 27 ಕ್ಕೆ ಗೃಹ ಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು ಎಂದು ಘೋಷಣೆ ಹೊರಡಿಸಲಾಗಿದೆ.
ಇನ್ನು ಉಚಿತ ವಿದ್ಯುತ್ ಹಾಗೂ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇನ್ನೇನು ಸದ್ಯದಲ್ಲೇ ಯುವ ನಿಧಿ ಯೋಜನೆಯ ಅರ್ಜಿ ಸಲ್ಲಿಕೆಯ ಬಗ್ಗೆ ಕೂಡ ಘೋಷಣೆ ಆಗಲಿದೆ.
ಶಕ್ತಿ ಯೋಜನೆಯ ಬೆನ್ನಲ್ಲೇ ಹೊಸ ಸೌಲಭ್ಯ ಜಾರಿ
ಇನ್ನು ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಹೆಚ್ಚಾಗಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿಲಾಗಿದೆ. ಮಹಿಳೆಯರಿಗೆ ಆರ್ಥಿಕವಾಗಿ ನೆರವಾಗುವುದು ಸರ್ಕಾರದ ಗುರಿಯಾಗಿದೆ. ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಬೇಕು ಎನ್ನುವ ದೃಷ್ಟಿಯಿಂದ ಹೆಚ್ಚಿನ ಸೌಲಭ್ಯವನ್ನು ಮಹಿಳೆಯರಿಗೆ ನೀಡಲಾಗುತ್ತಿದೆ. ಇದೀಗ ಶಕ್ತಿ ಯೋಜನೆಯ ಸಂಪೂರ್ಣ ಲಾಭ ಪಡೆಯುತ್ತಿರುವ ಮಹಿಳೆಯರಿಗೆ ಸರ್ಕಾರ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಮಹಿಳೆಯರು ಈ ಹೊಸ ಯೋಜನೆಯ ಲಾಭ ಪಡೆಯಬಹುದಾಗಿದೆ.
ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
ಉಚಿತ ಪ್ರಯಾಣದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವಾಹನದ ಟ್ರಾಕಿಂಗ್ ವ್ಯವಸ್ಥೆ ಅಳವಡಿಸೋದಕ್ಕೆ ಒಪ್ಪಿಗೆ ನೀಡಲಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ಸುಗಳ ಸಂಚಾರ ನಿಗಾ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆಯೊಂದಿಗೆ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸ್ಥಾಪಿಸೋದಕ್ಕಾಗಿ 30.74 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ.
ಮಹಿಳೆಯರ ಸುರಕ್ಷತೆಗಾಗಿ ಸರ್ಕಾರದ ಮಹತ್ವದ ನಿರ್ಧಾರ
ಈ ಯೋಜನೆ ಜಾರಿಯಿಂದ ಸಾರಿಗೆ ಬಸ್ಸುಗಳ ನೈಜ ಸಮಯದಲ್ಲಿ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಸುಧಾರಿತ ನಿರ್ವಹಣಾ ಮಾಹಿತಿ ವ್ಯವಸ್ಥೆ, ಬಸ್ ಗಾಗಿ ಕಾಯುವ ಅನಿಶ್ಚಿತತೆ ಕೂಡ ಕಡಿಮೆಯಾಗಲಿದೆ. ಈ ಹೊಸ ಸೌಲಭ್ಯವು ಅವಘಡವನ್ನು ತಡೆಯಲಿದೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡುತ್ತಿರುವ ಮಹಿಳೆಯರು ತುರ್ತು ಸಂದರ್ಭಗಳಲ್ಲಿ ಪ್ಯಾನಿಕ್ ಬಟನ್ ಅನ್ನು ಬಳಸಬಹುದಾಗಿದೆ. ರಾಜ್ಯದ ಮಹಿಳೆಯರು ಹಾಗು ಸಾರ್ವಜನಿಕರ ಸುರಕ್ಷತೆಗಾಗಿ ಈ ನಿರ್ಧಾರವನ್ನು ಕೈಗೊಂಡಿದೆ.