Petrol And Diesel: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 10 ರೂಪಾಯಿ ಇಳಿಕೆ, ಸುದ್ದಿಗೆ ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯ ವದಂತಿಗಳಿಗೆ ಪೂರ್ಣ ವಿರಾಮ ನೀಡಿದ ಕೇಂದ್ರ ಸರ್ಕಾರ

Central Government About Petrol And Diesel Price Down: ದೇಶದಲ್ಲಿ ಪೆಟ್ರೋಲ್ ಹಾಗು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗಿ ಈಗ ಜನರು ಎಲೆಕ್ಟ್ರಿಕ್ ವಾಹನಗಳಿಗೆ ಮೊರೆ ಹೋಗುವ ಪರಿಸ್ಥಿತಿ ಬಂದಿದೆ. ಆದರೆ ಈಗ ಇನ್ನುಮುಂದೆ ಪೆಟ್ರೋಲ್ ಹಾಗು ಡಿಸೇಲ್ ಬೆಲೆ ಇಳಿಕೆ ಆಗುವುದು ಎಂಬ ಮಾಹಿತಿ ಹೊರಬೀಳುತ್ತಿದೆ. 2024 ರ ಲೋಕಸಭೆ ಚುನಾವಣೆಯ ನಿಮಿತ್ತ ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಇಳಿಕೆ ಕುರಿತು ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದೆ. ಪೆಟ್ರೋಲ್ ಹಾಗು ಡೀಸೆಲ್ ಬೆಲೆಯಲ್ಲಿ ಇಳಿಕೆ ಸುದ್ದಿ ವೈರಲ್ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ಹರಿದಾಡುತ್ತಿರುವ ಸುದ್ದಿಗೆ ಸ್ಪಷ್ಟನೆ ನೀಡಿದೆ.

Petrol And Diesel Price Down
Image Credit: NDTV

ಪೆಟ್ರೋಲ್‌ ಹಾಗು ಡೀಸೆಲ್‌ ಬೆಲೆಯಲ್ಲಿ ಇಳಿಕೆ

ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಇಳಿಕೆ ಕುರಿತು ಮಾಹಿತಿ ಹೊರಬಿದ್ದಿದೆ ಎಂಬ ಮಾಹಿತಿ ಹರಿದಾಡುತ್ತಿದ್ದಂತೆ ಈ ವಿಚಾರವಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಪೆಟ್ರೋಲ್‌, ಡೀಸಲೆ ಬೆಲೆಯಲ್ಲಿ ಇಳಿಕೆ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ವದಂತಿಯಷ್ಟೇ ಎಂದು ಹೇಳಿದ್ದಾರೆ.

Petrol And Diesel Price Update
Image Credit: Spinny

ಕೇಂದ್ರ ಸರ್ಕಾರವು ತೈಲ ಕಂಪನಿಗಳೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ

ಲೋಕಸಭೆ ಚುನಾವಣೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಲಿದೆ ಎಂಬ ಸುದ್ದಿ ಹರಿದಾಡಿತ್ತು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಪೆಟ್ರೋಲ್‌, ಡೀಸೆಲ್‌ ಇಳಿಕೆ ಸಂಬಂಧ ಕೇಂದ್ರ ಸರ್ಕಾರವು ತೈಲ ಕಂಪನಿಗಳೊಂದಿಗೆ ಯಾವುದೇ ಮಾತುಕತೆಯೂ ನಡೆಸಿಲ್ಲ. ದರ ಇಳಿಕೆಯ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸುದರ ಮೂಲಕ ಈ ವದಂತಿಗೆ ತೆರೆಎಳೆದಿದ್ದಾರೆ. ಈ ರೀತಿ ಹೇಳಿಕೆ ನೀಡುವುದರ ಮೂಲಕ ಪೆಟ್ರೋಲ್ ಮತ್ತಿ ಡೀಸೆಲ್ ಬೆಲೆ ಇಳಿಕೆಯ ಸುದ್ದಿಗೆ ಬ್ರೇಕ್ ಹಾಕಿದ್ದಾರೆ ಸಚಿವರು.

Join Nadunudi News WhatsApp Group

Join Nadunudi News WhatsApp Group