Petrol Price: ವಾಹನ ಸವಾರರಿಗೆ ಸಿಹಿಸುದ್ದಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದ ಕೇಂದ್ರ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ, ವಾಹನ ಸವಾರರಿಗೆ ಸಿಹಿಸುದ್ದಿ

Petrol – Diesel Price Down: ಪ್ರಸ್ತುತ ದೇಶದಲ್ಲಿ ಕಚ್ಚಾ ತೈಲಗಳ ಬೆಲೆ ಬಾರಿ ಏರಿಕೆ ಕಾಣುತ್ತಿದೆ. ಜನಸಾಮಾನ್ಯರು ತಮ್ಮ ವಾಹನಗಳಿಗೆ ಹೆಚ್ಚಿನ ಹಣವನ್ನು ಇಡೀ ಇಂಧನವನ್ನು ಹಾಕಿಸಿಕೊಳ್ಳಬೇಕೆಗಿದೆ. ಹೆಚ್ಚಿನ ಹಣ ಕೊಟ್ಟು ವಾಹನವನ್ನು ಖರೀದಿಸುವುದರ ಜೊತೆಗೆ ಇಂಧನ ಖರ್ಚು ಜನರಿಗೆ ಹೆಚ್ಚಾಗಿದೆ ಎನ್ನಬಹುದು. ಒಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವ ಕಾರಣ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಬೇಡಿಕೆಯನ್ನು ಪಡೆಯುತ್ತಿದೆ ಎನ್ನಬಹುದು.

ಜನರು ತಮ್ಮ ಇಂಧನ ಖರ್ಚನ್ನು ಉಳಿಸಲು ಹೆಚ್ಚಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುತ್ತಿದ್ದಾರೆ. ಇಂಧನದ ಬೆಲೆಯ ಏರಿಕೆಯ ಕಾರಣ ಮಾರುಕಟ್ಟೆಯಲ್ಲಿ ಇಂಧನ ಚಾಲಿತ ವಾಹನಗಳ ಮಾರಾಟದ ಮೇಲು ಸ್ವಲ್ಪ ಪರಿಣಾಮ ಬೀರುತ್ತಿದೆ ಎನ್ನಬಹುದು. ಇದನ್ನೆಲ್ಲ ಗಮನಿಸಿದ ಸರ್ಕಾರ ಇದೀಗ ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ನಿರ್ಚರಿಸಿದೆ.

petrol and diesel price down
Image Credit: Original Source

ವಾಹನ ಸವಾರರಿಗೆ ಕೇಂದ್ರದಿಂದ ಸಿಹಿಸುದ್ದಿ
ಸದ್ಯ ದೇಶದಲ್ಲಿ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾಗುತ್ತದೆ. ಚುನಾವಣೆಯ ಕಾರಣ ವಿವಿಧ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಸದ್ಯ ಲೋಕಾಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೂಲಕ ವಾಹನ ಸವಾರರಿಗೆ ಕೇಂದ್ರ ಸರರ್ಕಾರ ಸಿಹಿಸುದ್ದಿ ನೀಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದ ಕೇಂದ್ರ
ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ ಗೆ 2 ರೂ. ಕಡಿತಗೊಳಿಸಿದೆ. ಇತ್ತೀಚೆಗೆ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಮತ್ತು ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಗಳಲ್ಲಿ ಇಳಿಕೆ ಮಾಡಿದೆ. ಇದರೊಂದಿಗೆ ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಬಹುದು ಎನ್ನುವ ಬಗ್ಗೆಸುದ್ದಿ ಹರಿದಾಡುತ್ತಿದೆ. ಕೇಂದ್ರ ಸರ್ಕಾರ ಪ್ರತಿ ಲೀಟರ್ ಗೆ 2 ರೂ. ಕಡಿಮೆ ಮಾಡಲು ನಿರ್ಧಾರ ಕೈಗೊಂಡಿದೆ. ಸದ್ಯದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆಯ ಇಳಿಕೆಯ ಬಗ್ಗೆ ಘೋಷಣೆ ಹೊರಬೀಳಲಿದೆ.

central govt down price of diesel and petrol
Image Credit: original Source

Join Nadunudi News WhatsApp Group

Join Nadunudi News WhatsApp Group