Price Hike: ವಾಹನ ಸವಾರರಿಗೆ ಹೊಸ ವರ್ಷದ ಮೊದಲ ವಾರವೇ ಬೇಸರದ ಸುದ್ದಿ, ಇಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ಪೆಟ್ರೋಲ್ ಹಾಗು ಡಿಸೇಲ್ ಬೆಲೆಯಲ್ಲಿ ಬಾರಿ ಬದಲಾವಣೆ, ಇಲ್ಲೆಲ್ಲಾ ಪೆಟ್ರೋಲ್ ಬೆಲೆಯಲ್ಲಿ ಏರಿಳಿತ

Petrol And Diesel Price Hike: ಜನರಲ್ಲಿ ಹೊಸ ವರ್ಷದ ಸಂಭ್ರಮ, ಎಲ್ಲಾ ಕಡೆ ಪಾರ್ಟಿ, ಸೆಲೆಬ್ರೇಷನ್ ಎಂದು ಸುತ್ತಾಡುತ್ತಿರುವ ಜನರಿಗೆ ಒಂದು ಬಿಸಿ ಬಿಸಿ ಸುದ್ದಿ ಇದೆ, ಅದೇನೆಂದರೆ ಪೆಟ್ರೋಲ್ ಡಿಸೇಲ್ ಬೆಲೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ದುಪ್ಪಟ್ಟು ಆಗುತ್ತದೆ. ಹಾಗಾದರೆ ಪೆಟ್ರೋಲ್ ಹಾಗು ಡಿಸೇಲ್ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ.

Petrol And Diesel Price Hike
Image Credit: Hindustantimes

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ

ಸೋಮವಾರ ಬೆಳಿಗ್ಗೆ ಸುಮಾರು 6 ಗಂಟೆಗೆ, WTI ಕಚ್ಚಾ ತೈಲವು ಬಹುತೇಕ ನಿನ್ನೆಯಷ್ಟೇ ಇತ್ತು. ಪ್ರತಿ ಬ್ಯಾರೆಲ್‌ಗೆ $71.65 ಕ್ಕೆ ಮಾರಾಟವಾಗುತ್ತಿದೆ. ಇತ್ತ, ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ $ 77.04 ತಲುಪಿದೆ. ಈ ಮಧ್ಯೆ, ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ.

ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.ದೆಹಲಿಯಲ್ಲಿ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ಲೀಟರ್‌ಗೆ ರೂ 90.08 , ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ರೂ 101.94 ಮತ್ತು ಡೀಸೆಲ್‌ ಬೆಲೆ ಲೀಟರ್‌ಗೆ ರೂ 87.89 ,ಮುಂಬೈನಲ್ಲಿ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 94.27 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ರೂ. 106.03 ಮತ್ತು ಡೀಸೆಲ್ ಲೀಟರ್‌ಗೆ 94.24 ರೂಗಳಾಗಿವೆ.

Join Nadunudi News WhatsApp Group

Petrol And Diesel Price Hike In 2024
Image Credit: Moneycontrol

ಹಲವು ಕಡೆ ಪೆಟ್ರೋಲ್ ಹಾಗು ಡಿಸೇಲ್ ಬೆಲೆಯಲ್ಲಿ ಏರಿಳಿತ 

ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 27 ಪೈಸೆಗಳಷ್ಟು ಹೆಚ್ಚಾಗಿದೆ. ಬಿಹಾರದಲ್ಲಿ ಪೆಟ್ರೋಲ್ ಬೆಲೆ 36 ಪೈಸೆ ಮತ್ತು ಡೀಸೆಲ್ ಬೆಲೆ 34 ಪೈಸೆ ಏರಿಕೆಯಾಗಿದೆ. ಇದಲ್ಲದೇ ಹಿಮಾಚಲ ಪ್ರದೇಶ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ.

ಮತ್ತೊಂದೆಡೆ, ಪಂಜಾಬ್‌ನಲ್ಲಿ ಪೆಟ್ರೋಲ್ 28 ಪೈಸೆ ಮತ್ತು ಡೀಸೆಲ್ 27 ಪೈಸೆ ಅಗ್ಗವಾಗಿದೆ. ರಾಜಸ್ಥಾನದಲ್ಲಿ ಪೆಟ್ರೋಲ್ 34 ಪೈಸೆ ಮತ್ತು ಡೀಸೆಲ್ 31 ಪೈಸೆ ಕಡಿಮೆಯಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ 37 ಪೈಸೆ ಮತ್ತು ಡೀಸೆಲ್ ಬೆಲೆ 36 ಪೈಸೆ ಇಳಿಕೆಯಾಗಿದೆ. ಉತ್ತರಾಖಂಡ, ಒಡಿಶಾ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.

Petrol And Diesel Price Latest Update
Image Credit: Outlookindia

ಈ ನಗರದಲ್ಲಿ ಪೆಟ್ರೋಲ್ ಹಾಗು ಡಿಸೇಲ್ ಬೆಲೆ

ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.47 ರೂ ಮತ್ತು ಡೀಸೆಲ್ ರೂ 89.66 ಆಗಿದೆ. ಪಾಟ್ನಾದಲ್ಲಿ, ಪೆಟ್ರೋಲ್ ಲೀಟರ್‌ಗೆ 107.24 ರೂ ಮತ್ತು ಡೀಸೆಲ್ ರೂ 94.36 ಆಗಿದೆ. ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ. ನೋಯ್ಡಾದಲ್ಲಿ ಪೆಟ್ರೋಲ್ 96.65 ರೂ ಮತ್ತು ಡೀಸೆಲ್ ಲೀಟರ್‌ಗೆ 89.82 ರೂ ಆಗಿದೆ. ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ.

Join Nadunudi News WhatsApp Group