Petrol And Diesel Price: ವಾಹನ ಸವಾರರಿಗೆ ಇನ್ನೊಂದು ಗೂಸ್ ನ್ಯೂಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 10 ರೂ ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರದ ಹೊಸ ಪ್ಲಾನ್

Petrol And Diesel Price Down In India: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗು ಡಿಸೇಲ್ ಬೆಲೆ ಏರಿಕೆ ಆಗುತ್ತಿದ್ದು, ಜನರು ಈ ಬೆಲೆ ಏರಿಕೆಯಿಂದ ಬೇಸತ್ತು ಹೋಗಿದ್ದಾರೆ. ಈಗ ಈ ವರ್ಷದ ಚುನಾವಣೆಯಾ ನಿಮಿತ್ತ ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಇಳಿಕೆ ಆಗುತ್ತಿದೆ ಎನ್ನಬಹುದು. ತೈಲ ಕಂಪನಿಗಳಿಗೆ ಭಾರಿ ಲಾಭ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ 5 ರಿಂದ 10 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇಲ್ಲಿದೆ ಪೆಟ್ರೋಲ್ ಹಾಗು ಡೀಸೆಲ್ ಬೆಲೆಯ ಬಗ್ಗೆ ಸಂಪೂರ್ಣ ಮಾಹಿತಿ.

Petrol And Diesel Price Down
Image Credit: NDTV

ಪೆಟ್ರೋಲ್ ಹಾಗು ಡೀಸೆಲ್ ಬೆಲೆಯಲ್ಲಿ ಇಳಿಕೆ

ಪೆಟ್ರೋಲ್ ಹಾಗು ಡೀಸೆಲ್ ಬೆಲೆ ಇಳಿಕೆಯ ಕುರಿತು ತೈಲ ಮಾರಾಟ ಕಂಪನಿಗಳು ಮೂರನೇ ತ್ರೈಮಾಸಿಕ ವರದಿ ಬಿಡುಗಡೆ ಮಾಡಿದ ನಂತರ ಖಚಿತ ಆಗಲಿದ್ದು, ವರದಿಯ ಪ್ರಕಾರ ತೈಲ ಮಾರಾಟ ಕಂಪನಿಗಳು ಮೂರನೇ ತ್ರೈಮಾಸಿಕ ವರದಿ ಬಿಡುಗಡೆ ಮಾಡಿದ ನಂತರ ಪೆಟ್ರೋಲ್, ಡೀಸೆಲ್ ದರ ಲೀಟರ್ ಗೆ 5ರಿಂದ 10 ರೂಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಬೆಲೆ ಇಳಿಕೆ ಬಗ್ಗೆ ತೈಲ ಮಾರಾಟ ಕಂಪನಿಗಳು ಯಾವುದೇ ಸ್ಪಷ್ಟ ಮಾಹಿತಿಯನ್ನು ಹೊರಹಾಕಿಲ್ಲ ಎನ್ನಬಹುದು.

Petrol And Diesel Price Down In India
Image Credit: The Indian Express

ಲೋಕಸಭಾ ಚುನಾವಣೆ ಹಿನ್ನೆಲೆ ಬೆಲೆ ಇಳಿಕೆ

ಮೊದಲ ಮತ್ತು ಎರಡನೇ ತ್ರೈಮಾಸಿಕದಲ್ಲಿ ಗಣನೀಯವಾಗಿ ನಿವ್ವಳ ಲಾಭಗಳಿಸಿದ್ದ ಪ್ರಮುಖ ತೈಲ ಕಂಪನಿಗಳು ಮೂರನೇ ತ್ರೈಮಾಸಿಕದಲ್ಲಿಯೂ ಲಾಭದಲ್ಲಿ ಮುಂದುವರೆಯುವ ಸಾಧ್ಯತೆ ಇದೆ. ಕಂಪನಿಗಳಿಗೆ ನಿವ್ವಳ 75,000 ಕೋಟಿ ರೂ. ಲಾಭದ ಸಾಧ್ಯತೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬಹುದು. ದರ ಇಳಿಕೆ ಹಣದುಬ್ಬರ ನಿವಾರಣೆ ಮತ್ತು ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಲಾಗಿದೆ.

Join Nadunudi News WhatsApp Group

Join Nadunudi News WhatsApp Group