Petrol Price: ಬೆಲೆ ಏರಿಕೆಯಿಂದ ಬೇಸತ್ತ ಜನರಿಗೆ ಕೇಂದ್ರದಿಂದ ಗುಡ್ ನ್ಯೂಸ್, ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಷ್ಟು ಇಳಿಕೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ ಸರ್ಕಾರ.
Petrol And Diesel Price Down: ಸದ್ಯ ದೇಶದಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ದಿನಕ್ಕೆ ಒಂದಾದರು ನಿತ್ಯ ಬಳಕೆಯ ವಸ್ತುವಿನ ಬೆಲೆ ಏರಿಕೆ ಕಾಣುತ್ತಿದೆ. ಪ್ರಸ್ತುತ ಜನರು ಯಾವುದೇ ವಸ್ತುಗಳನ್ನು ಖರೀದಿಸಬೇಕಿದ್ದರು ಹೆಚ್ಚಿನ ಹಣ ನೀಡಬೇಕಾಗಿದೆ. ಈ ಬಾರಿ ಹಣಕಾಸು ವರ್ಷ ಜನರ ಜೇಬಿಗೆ ಬಾರಿ ಪ್ರಮಾಣದಲ್ಲಿ ಕತ್ತರಿ ಹಾಕಿದೆ.
ಗ್ಯಾಸ್ ಸಿಲಿಂಡರ್ ( Gas Cylinder), ಪೆಟ್ರೋಲ್(Petrol), ಡೀಸೆಲ್(Diesel) ಸೇರಿದಂತೆ ಇನ್ನಿತರ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ. ಇತ್ತೀಚೆಗಂತೂ ಸೊಪ್ಪು, ತರಕಾರಿ, ಹಾಲು, ಅಡುಗೆ ಎಣ್ಣೆ, ಬೇಳೆಕಾಳು ಸೇರಿದಂತೆ ಇನ್ನಿತರ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ. ಸದ್ಯ ಬೆಲೆ ಏರಿಕೆಯ ಪರಿಣಾಮದಿಂದ ತತ್ತರಿಸುತ್ತಿರುವ ಜನತೆಗೆ ಕೇಂದ್ರ ಸರ್ಕಾರ ಇದೀಗ ಕಚ್ಚಾತೈಲಗಳ ಬೆಲೆಯಲ್ಲಿ ಇಳಿಕೆ ಮಾಡಲು ಮುಂದಾಗಿದೆ.
ಬೆಲೆ ಏರಿಕೆಯ ಬೇಸರದಲ್ಲಿದ್ದ ಜನತೆಗೆ ಕೇಂದ್ರದಿಂದ ದೀಪಾವಳಿ ಗಿಫ್ಟ್
ಸದ್ಯ ಕಚ್ಚಾ ತೈಲಗಳ ಬೆಲೆಯ ಏರಿಕೆಯಿಂದಾಗ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಪಡೆಯುತ್ತಿವೆ. ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳು ಬೇಡಿಕೆ ಕಳೆದುಕೊಳ್ಳುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಅನಿವಾರ್ಯವಾಗಿದೆ. ಬೆಲೆ ಏರಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವ ಮೂಲಕ ಜನರಿಗೆ ಸ್ವಲ್ಪ ಪ್ರಮಾಣದ ಆರ್ಥಿಕ ಹೊರೆ ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ
November 12 ರಂದು ಎಲ್ಲೆಡೆ ದೀಪಾವಳಿ ಹಬ್ಬದ ಸಡಗರ ಮನೆ ಮಾಡಲಿದೆ. ಜನರಿಗೆ ಈ ದೀಪಾವಳಿ ಹಬ್ಬದ ಉಡುಗೊರೆಯಾಗಿ ಕೇಂದ್ರದ ಮೋದಿ ಸರ್ಕಾರ ಬಿಗ್ ಗಿಫ್ಟ್ ಅನ್ನು ನೀಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಳಿಕೆ ಕಾಣದಿರುವ Petrol, Diesel ಬೆಲೆಯಲ್ಲಿ ಇಳಿಕೆ ಮಾಡಲಿ ಮೋದಿ ಸರ್ಕಾರ ನಿರ್ಧರಿಸಿದೆ. ದೀಪಾವಳಿ ಉಡುಗೊರೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸರಿಸುಮಾರು 10 ರೂ. ಗಳನ್ನೂ ಇಳಿಕೆ ಮಾಡಲು ಕೇಂದ್ರ ಸರ್ಕಾರ ಯೋಜನೆ ಹೊಂದಿದೆ. ಹಾಗೆಯೆ ಅಬಕಾರಿ ಸುಂಕವನ್ನು ಕೂಡ ಕಡಿಮೆ ಮಾಡಲು ಸರ್ಕಾರ ನಿರ್ಧರಿಸಿದೆ.
ಇನ್ನು ದೇಶದಲ್ಲಿ 2021 ರ ದೀಪಾವಳಿಯ ಸಮಯದಲ್ಲಿ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆಯಾಗಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಗೆ 5 ರೂ. ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್ ಗೆ 10 ರೂ. ಗಳನ್ನೂ ಕಡಿಮೆ ಮಾಡಿತ್ತು. ಇದರಂತೆ ಈ ವರ್ಷ ಕೂಡ ಪೆಟ್ರೋಲ್, ಡೀಸೆಲ್ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿ ಜನರು ಕಾಯುತ್ತಿದ್ದಾರೆ. November 12 ರೊಳಗೆ ಕೇಂದ್ರ ಸರ್ಕಾರ ಕಚ್ಚಾ ತೈಲಗಳ ಬೆಲೆಯನ್ನು ಪರಿಷ್ಕರಿಸಬೇಕಿದೆ. ಸದ್ಯ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡುತ್ತದಾ ಎನ್ನುವುದನ್ನು ಕಾದು ನೋಡಬೇಕಿದೆ.