Petrol Diesel Price: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ, ನಿಮ್ಮ ಊರಿನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟು ನೋಡಿ

ನಿಮ್ಮ ಊರಿನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿದೆ...? ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

Petrol Diesel Price In India: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗು ಡಿಸೇಲ್ ಬೆಲೆ ಏರಿಕೆ ಆಗುತ್ತಿದ್ದು, ಜನರು ಈ ಬೆಲೆ ಏರಿಕೆಯಿಂದ ಬೇಸತ್ತು ಹೋಗಿದ್ದಾರೆ. ಮೊದಲೇ ಹಣದುಬ್ಬರತೆಯ ಪರಿಸ್ಥಿಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಚ್ಚಾತೈಲಗಳ ಬೆಲೆ ಏರಿಕೆ ಇನ್ನಷ್ಟು ನಷ್ಟವನ್ನು ನೀಡಲಿದೆ.

ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್‌ ಅಗತ್ಯವಾಗಿರುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್‌ ದರದ ಮೇಲೆ ಗಮನಹರಿಸುತ್ತಾರೆ.

Petrol Diesel Price In India
Image Credit: Indianexpress

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್‌ ಬಿದ್ದಿದೆ. ಆದರೆ ಹಲವು ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇದೀಗ ನಾವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಎಷ್ಟಿದೆ ಎನ್ನುವ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.

ನಿಮ್ಮ ಊರಿನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿದೆ…?
*ದೆಹಲಿಯಲ್ಲಿ ಪೆಟ್ರೋಲ್ ಬೆಲೆ 96.72 ರೂಪಾಯಿ ಮತ್ತು ಡಿಸೇಲ್ ಬೆಲೆ 89.62 ರೂಪಾಯಿ.

*ಮುಂಬೈ ನಲ್ಲಿ ಪೆಟ್ರೋಲ್ ಬೆಲೆ 106.31 ರೂಪಾಯಿ ಮತ್ತು ಡಿಸೇಲ್ ಬೆಲೆ 94.24 ರೂಪಾಯಿ.

Join Nadunudi News WhatsApp Group

*ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 106.03 ರೂಪಾಯಿ ಮತ್ತು ಡಿಸೇಲ್ ಬೆಲೆ 92.76 ರೂಪಾಯಿ.

*ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ 102.74 ರೂಪಾಯಿ ಮತ್ತು ಡಿಸೇಲ್ ಬೆಲೆ 94.66 ರೂಪಾಯಿ.

*ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 101.94 ರೂಪಾಯಿ ಮತ್ತು ಡಿಸೇಲ್ ಬೆಲೆ 87.89 ರೂಪಾಯಿ.

Petrol Diesel Price Today
Image Credit: Indian Express

*ಛತ್ತೀಸ್ಗಢದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 0.60 ಪೈಸೆ ಗಳಷ್ಟು ದುಬಾರಿಯಾಗಿದೆ.

*ನೋಯ್ಡಾದಲ್ಲಿ ಪೆಟ್ರೋಲ್ ಬೆಲೆ 97.00 ರೂಪಾಯಿ ಮತ್ತು ಡಿಸೇಲ್ ಬೆಲೆ 89.86 ರೂಪಾಯಿ.

*ಗಾಜಿಯಾಬಾದ್ನಲ್ಲಿ ಪೆಟ್ರೋಲ್ ಬೆಲೆ 96.58 ರೂಪಾಯಿ ಮತ್ತು ಡಿಸೇಲ್ ಬೆಲೆ 89.42 ರೂಪಾಯಿ.

*ಲಕ್ನೋದಲ್ಲಿ ಪೆಟ್ರೋಲ್ ಬೆಲೆ 96.47 ರೂಪಾಯಿ ಮತ್ತು ಡಿಸೇಲ್ ಬೆಲೆ 89.77 ರೂಪಾಯಿ.

*ಪಾಟ್ನಾದಲ್ಲಿ ಪೆಟ್ರೋಲ್ ಬೆಲೆ 107.24 ರೂಪಾಯಿ ಮತ್ತು ಡಿಸೇಲ್ ಬೆಲೆ 94.04 ರೂಪಾಯಿ.

*ಇದಲ್ಲದೆ ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಾಗಿದೆ. ಆದರೆ

*ಅಸ್ಸಾಂ, ಆಂಧ್ರಪ್ರದೇಶ, ಬಿಹಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ     ಇಳಿಕೆಯಾಗಿದೆ.

Join Nadunudi News WhatsApp Group