PMAY Update: ಇಂತವರಿಗೆ ಮಾತ್ರ ಬಿಡುಗಡೆ ಆಗಿದೆ PM ಆವಾಸ್ ಯೋಜನೆಯ ಮನೆ , ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ.
ಇಂತವರಿಗೆ ಮಾತ್ರ ಸಿಗಲಿದೆ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆ.
PM Awas Yojana Latest Update: ಕೇಂದ್ರದ ಮೋದಿ ಸರ್ಕಾರ ದೇಶದಲ್ಲಿರುವ ನಿರ್ಗತಿಕರ ಮನೆ ನಿರ್ಮಾಣಕ್ಕಾಗಿ Pradhan Mantri Awas ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯ ಅಡಿಯಲ್ಲಿ ದೇಶದ ಬಡ ಜನರು ಅರ್ಜಿ ಸಲ್ಲಿಸುವ ಮೂಲಕ ಮನೆ ನಿರ್ಮಾಣಕ್ಕೆ ಹಣವನ್ನು ಪಡೆದುಕೊಳ್ಳಬಹುದು.
ಕೇಂದ್ರದ ಮೋದಿ ಸರ್ಕಾರವು ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು ಈಗಾಗಲೇ 75 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗಿದೆ. ಸದ್ಯ PMAY ಯೋಜನೆಗೆ ಇಂತವರು ಮಾತ್ರ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
Pradhan Mantri Awas Yojana
ಮೂರು ಲಕ್ಷಕ್ಕಿಂತ ಕಡಿಮೆ ಆದಾಯವನ್ನು ಹೊಂದಿರುವ ಯಾವುದೇ ವ್ಯಕ್ತಿಯು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಬಹುದು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮೂರು ಕಂತುಗಳಲ್ಲಿ ಹಣವನ್ನು ನೀಡಲಾಗುತ್ತದೆ. ಮೊದಲನೆಯ ಕಂತಿನಲ್ಲಿ 50,000 ,ಎರಡನೆಯ ಕಂತಿನಲ್ಲಿ 1.50 ಲಕ್ಷ, ಮೂರನೆಯಾ ಕಂತಿನಲ್ಲಿ 50,000 ಹಣವನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿದಾರರಿಗೆ ಶೀಘ್ರವೇ ಮನೆ ಲಭ್ಯವಾಗುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಸುಲಭ ವಿಧಾನದ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
*pmaymis.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
*ಅಲ್ಲಿ ಸಿಟಿಜನ್ ಅಸೆಸ್ಮೆಂಟ್ ಆಯ್ಕೆಯನ್ನು ಆರಿಸಿ ಆಧಾರ್ ಕಾರ್ಡ್ ಸಂಖ್ಯೆಯನ್ನು ಭರ್ತಿಮಾಡಿ ಚೆಕ್ ಮೇಲೆ ಕ್ಲಿಕ್ ಮಾಡಬೇಕು.
*ನಂತರ ಆನ್ಲೈನ್ ಫಾರ್ಮ್ ತೆರೆಯುತ್ತದೆ.
*ಅಲ್ಲಿ ಕೇಳಿದ ಮಾಹಿತಿಯನ್ನು ಭರ್ತಿಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
*ಅರ್ಜಿ ಸಲ್ಲಿಕೆಯ ನಂತರ ಅಲ್ಲಿ ಅಪ್ಲಿಕೇಶನ್ ಸಂಖ್ಯೆ ಕಾಣಿಸುತ್ತದೆ. ಈ ಮೂಲಕ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಆವಾಸ್ ಯೋಜನೆಯ ಅರ್ಹತೆ ಪರಿಶೀಲಿಸಿಕೊಳ್ಳುವ ವಿಧಾನ
*ಇನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪರಿಶೀಲಿಸಿಕೊಳ್ಳಬಹುದು.
*ಸಿಟಿಜನ್ ಅಸೆಸ್ಮೆಂಟ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು.
*ನಂತರ ಟ್ರ್ಯಾಕ್ ಯುವರ್ ಅಸ್ಸೇಸ್ಮೆಂಟ್ ಸ್ಟೇಟಸ್ ಆಯ್ಕೆಯ ಮೇಲೆ ಮಾಡಬೇಕು.
*ನಂತರ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸ್ಟಿಯನ್ನು ಪರಿಶೀಲಿಸಲು ಕೇಳುವ ಎಲ್ಲ ಮಾಹಿತಿಯನ್ನು ನೀಡಬೇಕು.
*ಇದಾದ ನಂತರ ನೀವು ನಿಮ್ಮ ರಾಜ್ಯ, ಜಿಲ್ಲೆ ಮತ್ತು ನಗರ ಇತ್ಯಾದಿಗಳನ್ನು ಆಯ್ಕೆ ಮಾಡಿ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿದರೆ ವಿವರ ತಿಳಿದುಕೊಳ್ಳಬಹುದು.