Money Hike: ಈ ರೈತರ ಖಾತೆಗೆ ಕೇಂದ್ರದಿಂದ ಜಮಾ ಆಗಲಿದೆ 8000 ರೂ, ಹೊಸ ಯೋಜನೆಗೆ ಕೇಂದ್ರದ ಸಿದ್ಧತೆ
ರೈತರಿಗೆ ಭರ್ಜರಿ ಕೊಡುಗೆ ನೀಡುತ್ತಿರುವ ಸರ್ಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಲ್ಲಿ ಏರಿಕೆ
PM Kisan Samman Nidhi Amount Hike 2024: ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗಲಿದ್ದು, ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 31 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ಕೇಂದ್ರ ಸರಕಾರ ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಿದೆ. ಅದ್ರಲ್ಲೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಕೃಷಿ ಮಹಿಳೆಯರಿಗೆ ಆರ್ಥಿಕ ನೆರವು ದ್ವಿಗುಣಗೊಳ್ಳಬಹುದು ಎಂದು ಹೇಳಲಾಗುತ್ತದೆ. ಅಲ್ಲದೇ ಈ ಬಾರಿಯ ಬಜೆಟ್‌ನಲ್ಲಿ ಹೊಸ ಯೋಜನೆಗಳ ಘೋಷಣೆ ಆಗುವ ಸಾಧ್ಯತೆಯಿದೆ.
ಕೃಷಿ ಮಹಿಳೆಯರಿಗೆ ಆರ್ಥಿಕ ನೆರವು ದ್ವಿಗುಣಗೊಳ್ಳಬಹುದು
ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (ಪಿಎಂ ಕಿಸಾನ್ ಯೋಜನೆ) ಮಹಿಳಾ ಫಲಾನುಭವಿಗಳಿಗೆ ಆರ್ಥಿಕ ಸಹಾಯವನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ. ಮಧ್ಯಂತರ ಬಜೆಟ್‌ನಲ್ಲಿ ಪ್ರಮುಖ ಘೋಷಣೆಗಳ ಸಾಧ್ಯತೆ ಕಡಿಮೆ ಇದ್ದರೂ ಕೂಡ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಕೃಷಿ ಮಹಿಳೆಯರಿಗೆ ಆರ್ಥಿಕ ನೆರವು ದ್ವಿಗುಣಗೊಳ್ಳಬಹುದು ಎಂದು ಹೇಳಲಾಗುತ್ತದೆ.
ಫೆಬ್ರವರಿ 1 ರ ಬಜೆಟ್ ನಲ್ಲಿ ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ. ಪಿಎಂ ಕಿಸಾನ್ ಯೋಜನೆಯಡಿ ಈಗ ವಾರ್ಷಿಕ ರೂ 6,000 ನೀಡಲಾಗುತ್ತಿದೆ. ಮಹಿಳಾ ರೈತರಿಗೆ ಇದು 12,000 ರೂ.ಗೆ ಹೆಚ್ಚಾಗಬಹುದು. ಅಂದರೆ, ಭೂಮಿ ಹೊಂದಿರುವ ಮಹಿಳೆಯರು ಹೆಚ್ಚಿನ ಹಣವನ್ನು ಪಡೆಯಬಹುದು.
ಪಿಎಂ ಕಿಸಾನ್ ಯೋಜನೆಯಲ್ಲಿ ಅನುದಾನದ ಮೊತ್ತವನ್ನು ಹೆಚ್ಚಿಸಬಹುದು
ಮಾಧ್ಯಮಗಳ ವರದಿಗಳ ಪ್ರಕಾರ, ಪಿಎಂ ಕಿಸಾನ್ ಯೋಜನೆಯಲ್ಲಿ ಹಣವನ್ನು ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹೇಳಲಾಗಿದೆ. 6,000 ಅನುದಾನದ ಮೊತ್ತವನ್ನು 8,000 ರೂ.ಗೆ ಹೆಚ್ಚಿಸಬಹುದು. ಬಜೆಟ್ ಮಂಡನೆಗೆ ಒಂದು ದಿನ ಮುಂಚಿತವಾಗಿ ಅಂದರೆ ಜನವರಿ 31 ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುತ್ತದೆ. ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಇಂಡಿಯಾ ಟುಡೇ ವರದಿ ಪ್ರಕಾರ ಫೆಬ್ರವರಿ 9ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಜನವರಿ 31ರಿಂದ 11 ದಿನಗಳ ಕಾಲ ಅಧಿವೇಶನ ನಡೆಯುವ ಸಾಧ್ಯತೆ ಇದೆ.