PM Modi: ಪ್ರಜ್ವಲ್ ರೇವಣ್ಣ ಬಗ್ಗೆ ಇದೆ ಮೊದಲ ಬಾರಿ ಮಾತನಾಡಿದ ಮೋದಿ, ಮೋದಿ ಹೇಳಿದ್ದೇನು ನೋಡಿ

ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಮಾತನಾಡಿದ ಮೋದಿ

PM Modi About Prajwal Revanna Case: ಹಾಸನ ಸಂಸದ ಪಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯದೆಲ್ಲೆಡೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಪ್ರಕರಣ ಬೆಳಕಿಗೆ ಬಂದು ಸಾಕಷ್ಟು ದಿನ ಕಳೆದ್ರೂ ಕೂಡ ಇನ್ನು ಪ್ರಕರಣ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತಿಲ್ಲ.

ಪೊಲೀಸರು ಈ ಪ್ರಕರಣದ ಆಬಗ್ಗೆ ತನಿಖೆ ನಡೆಸುತ್ತಲೇ ಇದ್ದಾರೆ. ದಿನಕ್ಕೊಂದು ಹೊಸ ಹೊಸ ತಿರುವನ್ನು ಪಡೆಯುತ್ತಲೇ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಎನ್‌ಡಿಎ ಅಭ್ಯರ್ಥಿಯಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಅವರು ಈ ಪ್ರಕರಣದ ಬಗ್ಗೆ ಏನು ಹೇಳಿದ್ದಾರೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

PM Modi About Prajwal Revanna Case
Image Credit: Marathijagran

ಪ್ರಜ್ವಲ್ ರೇವಣ್ಣ ಬಗ್ಗೆ ಇದೆ ಮೊದಲ ಬಾರಿ ಮಾತನಾಡಿದ ಮೋದಿ
ಪಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಬಗ್ಗೆ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರಂತಹವರ ವಿರುದ್ಧ ನಮ್ಮದು ಶೂನ್ಯ ಸಹನೆ. ಅಂತಹವರ ವಿರುದ್ಧ ಸಹನೆ ತೋರುವ ಅಗತ್ಯವಿಲ್ಲ. ನಾವು ನಿರ್ಣಾಯಕ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನೊಂದೆಡೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದ್ದಾರೆ. ಈ ಮೂಲಕ ಪ್ರಜ್ವಲ್ ಪ್ರಕರಣದ ಬಗ್ಗೆ ಮೋದಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮೋದಿ ಹೇಳಿದ್ದೇನು ನೋಡಿ
ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಮಾತನಾಡಿದ ಮೋದಿ, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಕ್ರಮ ಕೈಗೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಲಕ್ಕೆ ಸೇರಿದ ಸಾವಿರಾರು ವಿಡಿಯೋಗಳು ಇರುವುದು ಗೊತ್ತೇ ಇದೆ. ಅವರು ಅಧಿಕಾರದಲ್ಲಿದ್ದಾಗ ಆ ವಿಡಿಯೋಗಳನ್ನು ಸಂಗ್ರಹಿಸಿ ಈಗ ಲೋಕಸಭೆ ಚುನಾವಣೆ ವೇಳೆ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದರು. ಅವರು ದೇಶ ತೊರೆದ ನಂತರ ಈ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ಬೆಳವಣಿಗೆ ಅನುಮಾನಾಸ್ಪದವಾಗಿದೆ.

Prajwal Revanna Case
Image Credit: News 18

ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಕಿಡಿಕಾರಿದ್ದಾರೆ. ಬಿಜೆಪಿಗೆ ಸಂಬಂಧಿಸಿದಂತೆ, ನಮ್ಮ ಸಂವಿಧಾನಕ್ಕೆ ಸಂಬಂಧಿಸಿದಂತೆ, ಅವರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕೆಂದು ನಾನು ಸ್ಪಷ್ಟಪಡಿಸುತ್ತೇನೆ. ಲಭ್ಯವಿರುವ ಕಾನೂನು ಆಯ್ಕೆಗಳಲ್ಲಿ ಅಂತಹ ಜನರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು. ನಾವು ಅವನನ್ನು ಮರಳಿ ತರಬೇಕು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೋದಿ ಸ್ಪಷ್ಟ ನಿಲುವು ನೀಡಿದ್ದಾರೆ.

Join Nadunudi News WhatsApp Group

PM Modi And Prajwal Revanna
Image Credit: News24online

Join Nadunudi News WhatsApp Group