Ads By Google

Pm Loan Scheme: ಸ್ವಂತ ವ್ಯಾಪಾರ ಮಾಡುವವರಿಗೆ ಕೇಂದ್ರದಿಂದ ಕಡಿಮೆ ಬಡ್ಡಿಗೆ ಸಿಗಲಿದೆ 10 ಲಕ್ಷ ಸಾಲ, ಈ ರೀತಿ ಅರ್ಜಿ ಸಲ್ಲಿಸಿ.

PM mudra loan application

Image Credit: Original Source

Ads By Google

Pradhan Mantri Mudra Yojana Loan:  ಏಪ್ರಿಲ್ 2015 ರಲ್ಲಿ ಭಾರತ ಸರ್ಕಾರ Pradhan Mantri Mudra Yojana ಯನ್ನು ಪರಿಚಯಿಸಿದೆ. ಸರ್ಕಾರದ ಅನೇಕ ಯೋಜನೆಗಳಲ್ಲಿ PM Mudra ಸಾಲ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಪುರುಷರು, ಮಹಿಳೆಯರು ಮತ್ತು ಸಣ್ಣ ವ್ಯಾಪಾರ ಮಾಲೀಕರಿಗೆ ಸಾಲವನ್ನು ಹಣಕಾಸಿನ ನೆರವು ರೂಪದಲ್ಲಿ ನೀಡಲಾಗುತ್ತಿದೆ. ಇದೀಗ ಮೋದಿ ಸರ್ಕಾರ ಮುದ್ರಾ ಸಾಲದ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಯೋಣ.

Image Credit: Original Source

ಸ್ವಂತ ವ್ಯಾಪಾರ ಮಾಡುವವರಿಗೆ ಕೇಂದ್ರದಿಂದ ಕಡಿಮೆ ಬಡ್ಡಿಗೆ ಸಿಗಲಿದೆ 10 ಲಕ್ಷ ಸಾಲ
ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯನ್ನು ಮೂರು ಹಂತಗಳಾಗಿ ವರ್ಗೀಕರಿಸಲಾಗಿದೆ. ಇದರ ಅಡಿಯಲ್ಲಿ ಅರ್ಹ ಮಹಿಳೆಯರು ಮುದ್ರಾ ಸಾಲವನ್ನು ತೆಗೆದುಕೊಳ್ಳುವ ಮೂಲಕ ತಮ್ಮ ವ್ಯವಹಾರವನ್ನು ಪ್ರಾರಂಭಿಸಬಹುದು. ಮೊದಲನೆಯದಾಗಿ ಶಿಶು ಸಾಲದಡಿ 50 ಸಾವಿರ ರೂಪಾಯಿಗಳ ಖಾತರಿ ಸಾಲ ನೀಡಲಾಗುತ್ತಿದೆ. ಇದಲ್ಲದೆ ಕಿಶೋರ್ ಸಾಲದ ಅಡಿಯಲ್ಲಿ 5 ಲಕ್ಷದ ವರೆಗೆ ಮೊತ್ತವನ್ನು ನೀಡಲಾಗುತ್ತಿದೆ.

ಇನ್ನು ದೊಡ್ಡ ಕೆಲಸ ಮಾಡಬೇಕೆಂದರೆ ತರುಣ್ ಯೋಜನೆಯಡಿ 10 ಲಕ್ಷ ರೂಪಾಯಿಯ ವರೆಗೆ ಸಾಲವನ್ನು ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಗೆ 24 ರಿಂದ 70 ವರ್ಷದ ಭಾರತೀಯರು ಅರ್ಜಿ ಸಲ್ಲಿಸಬಹುದಾಗಿದೆ. ಸಾಲದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ಪಾಸ್ ಪೋರ್ಟ್, ವಿಳಾಸ ಪುರಾವೆ ನೀಡುವ ಮೂಲಕ ನೀವು PMMY ಅರ್ಜಿ ಸಲ್ಲಿಸಿ ಸಾಲವನ್ನು ಪಡೆಯಬಹುದು.

Image Credit: Original Source

ಈ ರೀತಿಯಾಗಿ ನೀವು PM ಮುದ್ರಾ ಯೋಜನೆಯಡಿ ಸಾಲವನ್ನು ಪಡೆದುಕೊಳ್ಳಬಹುದು
•ನೀವು ಮುದ್ರಾ ಯೋಜನೆಯಡಿ ಸಾಲವನ್ನು ಪಡೆಯಲು ಬಯಸಿದರೆ ಬ್ಯಾಂಕ್ ಅಧಿಕಾರಿಗಳಿಗೆ ವ್ಯವಹಾರದ ಮಾದರಿಯನ್ನು ತೋರಿಸಬೇಕಾಗುತ್ತದೆ.

•ವ್ಯವಹಾರದ ಮೂಲ ಮಾದರಿಯ ಆಧಾರದ ಮೇಲೆ ಬ್ಯಾಂಕ್ ನಿಮಗೆ 10 ಲಕ್ಷ ಸಾಲವನ್ನು ನೀಡುತ್ತದೆ.

•ನಿಮ್ಮ ವ್ಯವಹಾರಕ್ಕೆ ನೀವು ಕೇವಲ 25 % ಹಣವನ್ನು ಖರ್ಚು ಮಾಡಿದರೆ ಬ್ಯಾಂಕ್ ನಿಮಗೆ 75 % ಸಾಲವನ್ನು ನೀಡುತ್ತದೆ.

•ಇನ್ನು 24 ರಿಂದ 70 ವರ್ಷದವರು ಯೋಜನೆಗೆ ಅರ್ಜಿ ಸಲ್ಲಿಸಬಹುದು.

•ಸೂಕ್ಷ ಮತ್ತು ಸಣ್ಣ ಕೈಗಾರಿಕೆಗಳಿಗೆ ಈ ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ ಸಹಾಯವಾಗುತ್ತದೆ.

•ಇನ್ನು mudra.org.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸಾಲದ ಅರ್ಜಿಯನ್ನು ಭರ್ತಿಮಾಡಿ ಹತ್ತಿರದ ಬ್ಯಾಂಕ್ ಶಾಖೆಗೆ ಅರ್ಜಿಯನ್ನು ಸಲ್ಲಿಸಿದರೆ ಬ್ಯಾಂಕ್ ನಿಮಗೆ ಸಾಲವನ್ನು ನೀಡುತ್ತದೆ.

Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in