PM Poshan: ಶಾಲಾ ಮಕ್ಕಳ ಬಿಸಿಯೂಟದ ಕುರಿತಾಗಿ ಮಹತ್ವದ ಘೋಷಣೆ, ಸಿದ್ದರಾಮಯ್ಯ ಸರ್ಕಾರದ ದೊಡ್ಡ ನಿರ್ಧಾರ

ಬಿಸಿಯೂಟದ ವಿಷಯವಾಗಿ ಇನ್ನೊಂದು ಘೋಷಣೆ ಮಾಡಿದ ಸರ್ಕಾರ

PM Poshan Scheme: ಸದ್ಯ ರಾಜ್ಯ ಸರ್ಕಾರ ಕರ್ನಾಟಕದ ಜನತೆಗಾಗಿ ಸಾಕಷ್ಟು ಸೌಲಭ್ಯವನ್ನು ಮಾಡಿಕೊಡುತ್ತಿದೆ. ಚುನಾವಣಾ ಸಮಯದಲ್ಲಿ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನಷ್ಟು ಕಲ್ಯಾಣ ಯೋಜನೆಯನ್ನು ರಾಜ್ಯ ಸರ್ಕಾರ ಪರಿಚಯಿಸಿದೆ.

ಈವರೆಗೆ ಸರ್ಕಾರ ಘೋಷಿಸಿರುವ ಯೋಜನೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಈ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎನ್ನಬಹುದು. ಸದ್ಯ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಶೇಷ ಸೌಲಭ್ಯ ಜಾರಿಯಾಗಿದೆ. ರಾಜ್ಯ ಸರ್ಕಾರದ ಈ ಹೊಸ ಸೌಲಭ್ಯವು ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನ ನೀಡಲಿದೆ.

PM Poshan scheme
Image Credit: Hindustantimes

ಶಾಲಾ ಮಕ್ಕಳ ಬಿಸಿಯೂಟದ ಕುರಿತಾಗಿ ಮಹತ್ವದ ಘೋಷಣೆ
ಇನ್ನ್ನು ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡಲಾಗುತ್ತದೆ. ಇದೀಗ ರಾಜ್ಯ ಸರ್ಕಾರ ಈ ಮಧ್ಯಾಹ್ನದ ಬಿಸಿಯೂಟದ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಲ್ಲಿ ಮಹತ್ವದ ಬದಲಾವಣೆ ಆಗಲಿದೆ.

ಕರ್ನಾಟಕ ಸರ್ಕಾರವು 2023-24 ರ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳನ್ನು ಘೋಷಿಸಿದೆ. ಏಪ್ರಿಲ್ 2024 ಮತ್ತು ಮೇ 2024 ತಿಂಗಳುಗಳ ರಾಜ ದಿನಗಳಲ್ಲಿ ರಾಜ್ಯ ಸರ್ಕಾರವು ಪಿಎಂ ಪೋಷಣ್ -ಮಧ್ಯಾಹ್ನ ಊಟ ಯೋಜನೆಯಡಿ ಶಾಲಾ ಮಕ್ಕಳಿಗೆ ಆಹಾರವನ್ನು ವಿತರಿಸಲು ಆದೇಶವನ್ನು ಹೊರಡಿಸಿದೆ.

Pradhan Mantri Poshan Shakti Nirman
Image Credit: Sunyaias

ಇನ್ನುಮುಂದೆ ಬೇಸಿಗೆ ರಜೆಯಲ್ಲಿಯೂ ಸಿಗಲಿದೆ ಬಿಸಿಯೂಟ
ರಾಜ್ಯ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ಸರ್ಕಾರದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ನು ಜಿಲ್ಲಾಧಿಕಾರಿಗಳಿಂದ ಬೆಳೆ ಹನಿ ಸಮೀಕ್ಷೆಯ ವರದಿಯನ್ವಯ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿನ ರಾಜ್ಯದ 31 ಜಿಲ್ಲೆಯ 236 ತಾಲೂಕುಗಳ ಪೈಕಿ ಉಲ್ಲೇಖ (4 ) ರಲ್ಲಿ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಸರ್ಕಾರವು ಘೋಷಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸಲಾಗಿದೆ. ಇನ್ನುಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿಯೂ ಬಿಸಿಯೂಟ ಸೌಲಭ್ಯ ಲಭ್ಯವಾಗಲಿದೆ. ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳಲಿದೆ.

Join Nadunudi News WhatsApp Group

Join Nadunudi News WhatsApp Group