Post Office Scheme: ಪೋಸ್ಟ್ ಆಫೀಸ್ ನ ಈ 2 ಯೋಜನೆ ಮಹಿಳೆಯರನ್ನ ಲಕ್ಷಾಧಿಪತಿಗಳನ್ನಾಗಿ ಮಾಡುತ್ತದೆ, ಇಂದೇ ಅರ್ಜಿ ಹಾಕಿ.

ಪೋಸ್ಟ್ ಆಫೀಸ್ ನ ಈ 2 ಯೋಜನೆ ಮಹಿಳೆಯರನ್ನ ಲಕ್ಷಾಧಿಪತಿಗಳನ್ನಾಗಿ ಮಾಡುತ್ತದೆ

Post Office Best 2 investment Scheme For Ladies: ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರದ ಮೋದಿ ಸರ್ಕಾರ ವಿಶೇಷವಾಗಿ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸಿದೆ. ಮಹಿಳೆರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ಮಹಿಳೆಯರು ಆರ್ಥಿಕವಾಗಿ ಸ್ಥಿರತೆ ಕಾಣಲು ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಉತ್ತಮ. ಇದೀಗ ನಾವು ಕೇಂದ್ರದ ಮೋದಿ ಸರ್ಕಾರ ಪರಿಚಯಿಸಿರುವ ಎರಡು ಉತ್ತಮ ಹೂಡಿಕೆಯ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಈ ಯೋಜನೆಗಳಲ್ಲಿನ ಹೂಡಿಕೆಯು ಮಹಿಳೆಯರನ್ನು ಹೆಚ್ಚು ಆರ್ಥಿಕ ಸಬಲರನ್ನಾಗಿ ಮಾಡುತ್ತದೆ ಎಂದರೆ ತಪ್ಪಾಗಲಾರದು.

Sukanya Samriddhi Yojana Details
Image Credit: Times Now

ಪೋಸ್ಟ್ ಆಫೀಸ್ ನ ಈ 2 ಯೋಜನೆ ಮಹಿಳೆಯರನ್ನ ಲಕ್ಷಾಧಿಪತಿಗಳನ್ನಾಗಿ ಮಾಡುತ್ತದೆ
ಇನ್ನು ಕೇಂದ್ರದ ಮೋದಿ ಸರ್ಕಾರ ವಿಶೇಷವಾಗಿ ಮಹಿಳೆಯರಿಗೆಂದು Sukanya Samriddhi Yojana ಹಾಗೂ Mahila Samman Saving Certificate ಅನ್ನು ಆರಂಭಿಸಿದೆ. ಕೇಂದ್ರದ ಈ ಎರಡು ಯೋಜನೆಗಳಲ್ಲಿ ಲಕ್ಷಾಂತರ ಮಹಿಳೆಯರು ಹೂಡಿಕೆಯನ್ನು ಆರಂಭಿಸಿದ್ದಾರೆ. ಇನ್ನು ಸಣ್ಣ ಉಳಿತಾಯ ಯೋಜನೆಗಳ ಹೂಡಿಕೆಗೆ ಮೋದಿ ಸರ್ಕಾರ 8 % ಬಡ್ಡಿದರವನ್ನು ನೀಡುವುದರ ಜೊತೆಗೆ ಹೆಚ್ಚಿನ ಸೌಲಭ್ಯವನ್ನು ಮಾಡಿಕೊಟ್ಟಿದೆ. ಸದ್ಯ ನಾವೀಗ ಮೋದಿ ಸರ್ಕಾರ SSY ಹಾಗೂ MSSC ಯೋಜನೆಗಳ ಬಗ್ಗೆ ವಿವರ ತಿಳಿಯೋಣ.

1. Sukanya Samriddhi Yojana
ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರವು 8 ಪ್ರತಿಶತದಷ್ಟು ಬಡ್ಡಿಯನ್ನು ನೀಡಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಮಗುವಿನ ವಯಸ್ಸು 10 ವರ್ಷವಾಗಿರಬೇಕು. ಮೋದಿ ಸರ್ಕಾರ ತನ್ನ ಮೊದಲ ಅವಧಿಯಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದೆ, ಇದರಲ್ಲಿ ಕನಿಷ್ಠ 250 ರೂ.ಗಳಿಂದ ಗರಿಷ್ಠ 1.50 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು.

Mahila Samman Saving Certificate
Image Credit: Informal News

ಮೋದಿ ಸರ್ಕಾರ ನಡೆಸುತ್ತಿರುವ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ನೀವು ಪ್ರತಿ ತಿಂಗಳು 12,500 ರೂಪಾಯಿಗಳನ್ನು ಹೂಡಿಕೆ ಮಾಡಬೇಕಾಗುತ್ತದೆ. ಇದರಲ್ಲಿ ಈ ಮೊತ್ತವು ಒಂದು ವರ್ಷದಲ್ಲಿ 1.5 ಲಕ್ಷ ಆಗುತ್ತದೆ. ಇದರಲ್ಲಿ ಪ್ರಮುಖವಾದ ವಿಷಯವೆಂದರೆ ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಮುಕ್ತಾಯದ ಮೇಲೆ 8% ಬಡ್ಡಿಯ ಲಾಭವನ್ನು ಪಡೆಯುತ್ತೇವೆ. ಮಗಳ ವಯಸ್ಸು 21 ವರ್ಷವಾದಾಗ, ಮೆಚ್ಯೂರಿಟಿ ಆದ ಮೇಲೆ ಒಟ್ಟು 63,79,634 ರೂ. ಲಾಭವನ್ನು ಪಡೆಯಬಹುದು.

Join Nadunudi News WhatsApp Group

2. Mahila Samman Saving Certificate
ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ ಮಹಿಳೆಯರು ಮತ್ತು ಹುಡುಗಿಯರು ಎರಡು ವರ್ಷಗಳ ಅವಧಿಗೆ 2 ಲಕ್ಷ ರೂ. ವರೆಗಿನ ಹೂಡಿಕೆಯ ಮೇಲೆ ಶೇ. 7.5 ರಷ್ಟು ನಿಶ್ಚಿತ ಬಡ್ಡಿಯನ್ನು ಪಡೆಯುತ್ತಾರೆ. ಸರಕಾರದ ಅಧಿಸೂಚನೆಯ ಪ್ರಕಾರ, MSSC ಮೇಲಿನ ಬಡ್ಡಿಯನ್ನು ತ್ರೈಮಾಸಿಕ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ ಮತ್ತು ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಮೊದಲ ವರ್ಷದ ನಂತರ ಖಾತೆದಾರರು ಮೊತ್ತದ 40 % ವರೆಗೆ ಹಿಂಪಡೆಯಬಹುದು.

Join Nadunudi News WhatsApp Group