Post Office Job: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ಉದ್ಯೋಗ ಖಾಲಿ, ಇಂದೇ ಅರ್ಜಿ ಸಲ್ಲಿಸಿ

Post Office ನಲ್ಲಿ 10 ನೇ ತರಗತಿ ಪಾಸ್ ಆದವರಿಗೆ ಬಂಪರ್ ಉದ್ಯೋಗಾವಕಾಶ

Post Office Recruitment 2024: ಭಾರತೀಯ ಅಂಚೆ ಇಲಾಖೆಯು ಆಗಾಗ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ನೀಡುತ್ತಾ ಬರುತ್ತಿದೆ. SSLC ಯಲ್ಲಿ ಉತ್ತಮ ಅಂಕವನ್ನು ಗಳಿಸಿದರೆ Post office ನಲ್ಲಿ ಬೆಸ್ಟ್ ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ಪ್ರತಿಯೊಬ್ಬರಲ್ಲೂ ಇರುತ್ತದೆ.

ದೇಶದಲ್ಲಿ ಸಾಕಷ್ಟು ವಿದ್ಯಾವಂತರು ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಇನ್ನು ಉದ್ಯೋಗಕ್ಕೆ ಅರ್ಜಿ ಆಹ್ವಾನವಾದಾಗ ಮಹಿತಿ ಇಲ್ಲದೆ ಸಾಕಷ್ಟು ಜನರು ಅವಕಾಶವನ್ನು ಕಳೆದುಕೊಳ್ಳುತ್ತಾರೆ.ಇದೀಗ ನಾವು Post Office ನಲ್ಲಿ ಖಾಲಿ ಇರುವ ಹುದ್ದೆಯ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ.

Post Office Recruitment 2024
Image Credit: Herzindagi

ನೀವು 10 ನೇ ಕ್ಲಾಸ್ ಪಾಸ್ ಆಗಿದ್ದು ಉದ್ಯೋಗ ಹುಡುಕುತ್ತಿದ್ದಿರಾ..?
ಇದೀಗ Indian Post Office 10 ನೇ ತರಗತಿ ಪಾಸ್ ಆದವರಿಗೆ ಬಂಪರ್ ಉದ್ಯೋಗದ ಅವಕಾಶವನ್ನು ನೀಡುತ್ತಿದೆ. ಸ್ಟಾಫ್ ಕಾರ್ ಡ್ರೈವರ್ ಹುದ್ದಗೆ ಅಂಚೆ ಇಲಾಖೆಯು ಡಿಸೆಂಬರ್ 20 2023 ರಿಂದಲೇ ಅರ್ಜಿ ಸಲ್ಲಿಕೆಗೆ ಅವಕ್ಷ ನೀಡಿತ್ತು. ಆಸಕ್ತರು ಜನವರಿ 20 2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಇದೀಗ ನಾವು ಹೂಡದೇ ವಿವರ, ವಯೋಮಿತಿ, ವಿದ್ಯಾರ್ಹತೆ, ವೇತನ ಎಲ್ಲದರ ಬಗ್ಗೆ ಮಾಹಿತಿ ತಿಳಿಯೋಣ.

ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 20, 2024 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಮೀರಬಾರದು.

Join Nadunudi News WhatsApp Group

•ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Post Office Job Updates
Image Credit: NDTV

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 19,900 ದಿಂದ 63,200 ಮಾಸಿಕ ವೇತನವನ್ನು ನೀಡಲಾಗುತ್ತದೆ.

•SC /ST ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳು ರೂ. 100 ಅನ್ನು ಇ ಚಲನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

•ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಲಾಸ್ಪುರ್, ರಾಯ್ಗಢ್, ರಾಯ್ಪುರ್, ಸರ್ಗುಜಾದಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ.

•ಅಭ್ಯರ್ಥಿಗಳು ಭರ್ತಿಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

Assistant Director (Staff)
O/o ಮುಖ್ಯ ಪೋಸ್ಟ್‌ ಮಾಸ್ಟರ್ ಜನರಲ್
ಛತ್ತೀಸ್‌ ಗಢ ವೃತ್ತ
ರಾಯಪುರ-492001

Join Nadunudi News WhatsApp Group