Post Office: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗಾವಕಾಶ, 63,000 ಸಂಬಳ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Post Office Recruitment 2023: ಕೇಂದ್ರ ಸರ್ಕಾರ (Central Government)ದ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ ಒದಗಿಬಂದಿದೆ. ಅಂಚೆ ಇಲಾಖೆ (Post Office)ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆದಷ್ಟು ಬೇಗ ಅರ್ಜಿ ಸಲ್ಲಿಸುವ ಮೂಲಕ ಪೋಸ್ಟ್ ಆಫೀಸ್ ಉದ್ಯೋಗವನ್ನು ಪಡೆದುಕೊಳ್ಳಿ.
ಅಂಚೆ ಇಲಾಖೆಯಲ್ಲಿ ಉದ್ಯೋಗ ಮಾಡುವವರಿಗೆ ಅಗತ್ಯ ಮಾಹಿತಿ
ಭಾರತೀಯ ಅಂಚೆ ಇಲಾಖೆಯಲ್ಲಿ ಜಾಬ್ ಹುಡುಕುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಹೊರ ಬಿದ್ದಿದೆ. ಪೋಸ್ಟ್ ಆಫೀಸ್ ನಲ್ಲಿ ಒಟ್ಟು 28 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು ಅವುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಇವೆಲ್ಲದರ ಕುರಿತು ಮಾಹಿತಿ ತಿಳಿದುಕೊಳ್ಳುದು ಉತ್ತಮ. ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ಅನ್ನು ನೀಡಲಾಗುತ್ತದೆ.
ಕರ್ನಾಟಕದಲ್ಲಿ ಪೋಸ್ಟಿಂಗ್ಚಿ ನೀಡಲಾಗುವ ಜಿಲ್ಲೆಗಳೆಂದರೆ, ಚಿಕ್ಕೋಡಿ-1 , ಕಲಬುರ್ಗಿ-1 , ಧಾರವಾಡ-1 , ಗದಗ-1 , ಕಾರವಾರ-1MMS , ಬೆಂಗಳೂರು-15 , ಮಂಡ್ಯ-1 , ಮೈಸೂರು-3 , ಪುತ್ತೂರು-1 ಶಿವಮೊಗ್ಗ-1 ಉಡುಪಿ-1 , ಕೋಲಾರ-1 .
ಅಂಚೆ ಇಲಾಖೆ ನೇಮಕಾತಿಯಲ್ಲಿ ಆಯ್ಕೆ ಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 19,900 ರಿಂದ 63,200 ರವರೆಗೆ ಸಂಬಳವನ್ನು ನೀಡಲಾಗುತ್ತದೆ. ಅಭ್ಯರ್ಥಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು, ಹಾಗೆ ಡ್ರೈವಿಂಗ್ ಟೆಸ್ಟೆಡ್ ಸಂದರ್ಶನ ಮಾಡಲಾಗುತ್ತದೆ.
ಅಂಚೆ ಇಲಾಖೆ ಹುದ್ದೆ ಬೇಕಾಗುವ ವಯೋಮಿತಿ
ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಸೆಪ್ಟೆಂಬರ್ 15 , 2023 ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ಅಂಚೆ ಇಲಾಖೆ ಹುದ್ದೆ ಬೇಕಾಗುವ ವಿದ್ಯಾರ್ಹತೆ
ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10 ನೇ ತರಗತಿ ಉತ್ತೀರ್ಣವಾಗಿರಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ (12 /08 /2023). ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಆಫೀಸ್ ಮೂಲಕ ಅರ್ಜಿ ಸಲ್ಲಿಸಬೇಕು.