PM Mudra Loan: ಮುದ್ರಾ ಯೋಜನೆಯ ಸಾಲ ಪಡೆಯಲು ಯಾವ ಯಾವ ದಾಖಲೆಗಳು ಕಡ್ಡಾಯ, ಸಿಗಲಿದೆ 10 ಲಕ್ಷ ರೂ ಸಾಲ

ಸ್ವಂತ ಉದ್ಯೋಗದ ಕನಸಿಗೆ ಈ ಯೋಜನೆಯಡಿ ಕಡಿಮೆ ಬಡ್ಡಿಗೆ ಸಿಗಲಿದೆ 10 ಲಕ್ಷ ಸಾಲ.

Pradhan Mantri Mudra Loan Scheme: ಪುರುಷರು, ಮಹಿಳೆಯರು ಮತ್ತು ಸಣ್ಣ ವ್ಯಾಪಾರ ಮಾಲೀಕರಿಗೆ ಸಾಲವನ್ನು ಹಣಕಾಸಿನ ನೆರವು ರೂಪದಲ್ಲಿ ನೀಡಲು ಕೇಂದ್ರ ಸರ್ಕಾರ Pradhan Mantri Mudra ಯೋಜನೆಯನ್ನು ರೂಪಿಸಿದೆ. ಈ ಯೋಜನೆಯನ್ನು ಸರ್ಕಾರ 2015 ರಲ್ಲಿಯೇ ಪ್ರಾರಂಭಿಸಿದ್ದು, ಈಗಾಗಲೇ ಈ ಯೋಜನೆಯಡಿ ಸಾಕಷ್ಟು ಜನರು ಸೌಲಭ್ಯವನ್ನು ಪಡೆದಿದ್ದಾರೆ.

ಜನಸಾಮಾನ್ಯರ ಸ್ವಂತ ಉದ್ಯೋಗದ ಕನಸಿಗೆ PM Mudra ಯೋಜನೆಯು ನೆರವಾಗುತ್ತದೆ. ಇದೀಗ ನಾವು Mudra ಯೋಜನೆಯಡಿ ಸಾಲವನು ಪಡೆಯಲು ಅರ್ಹತೆಗಳೇನು..? ಯೋಜನೆಯಡಿ ಎಷ್ಟು ಸಾಲ ಸೌಲಭ್ಯ ಸಿಗಲಿದೆ ಹಾಗೆಯೆ ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳು ಯಾವುವು..? ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Pradhan Mantri Mudra Loan
Image Credit: tneaonline

ಈ ಯೋಜನೆಯಡಿ ಕಡಿಮೆ ಬಡ್ಡಿಗೆ ಸಿಗಲಿದೆ 10 ಲಕ್ಷ ಸಾಲ
ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡಲು ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯನ್ನು ಮೂರು ಹಂತಗಳಾಗಿ ವರ್ಗೀಕರಿಸಲಾಗಿದೆ. ಇದರ ಅಡಿಯಲ್ಲಿ ಅರ್ಹ ಮಹಿಳೆಯರು ಮುದ್ರಾ ಸಾಲವನ್ನು ತೆಗೆದುಕೊಳ್ಳುವ ಮೂಲಕ ತಮ್ಮ ವ್ಯವಹಾರವನ್ನು ಪ್ರಾರಂಭಿಸಬಹುದು.

ಹಂತ 1: ಮೊದಲನೆಯದಾಗಿ ಶಿಶು ಸಾಲದಡಿ 50 ಸಾವಿರ ರೂಪಾಯಿಗಳ ಖಾತರಿ ಸಾಲ ನೀಡಲಾಗುತ್ತಿದೆ.

ಹಂತ 2: ಕಿಶೋರ್ ಸಾಲದ ಅಡಿಯಲ್ಲಿ 5 ಲಕ್ಷದ ವರೆಗೆ ಮೊತ್ತವನ್ನು ನೀಡಲಾಗುತ್ತಿದೆ.

Join Nadunudi News WhatsApp Group

ಹಂತ 3: ಇನ್ನು ದೊಡ್ಡ ಕೆಲಸ ಮಾಡಬೇಕೆಂದರೆ ತರುಣ್ ಯೋಜನೆಯಡಿ 10 ಲಕ್ಷ ರೂಪಾಯಿಯ ವರೆಗೆ ಸಾಲವನ್ನು ನೀಡಲಾಗುತ್ತಿದೆ.

ಮುದ್ರಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯ
•ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಗೆ 24 ರಿಂದ 70 ವರ್ಷದ ಭಾರತೀಯರು ಅರ್ಜಿ ಸಲ್ಲಿಸಬಹುದಾಗಿದೆ.

•ಸಾಲದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್, ಪಾಸ್ ಪೋರ್ಟ್, ವಿಳಾಸ ಪುರಾವೆ ನೀಡುವ ಮೂಲಕ ನೀವು PMMY ಅರ್ಜಿ ಸಲ್ಲಿಸಿ ಸಾಲವನ್ನು ಪಡೆಯಬಹುದು.

Pradhan Mantri Mudra Loan Scheme Update
Image Credit: weebly

ಈ ರೀತಿಯಾಗಿ ನೀವು PM ಮುದ್ರಾ ಯೋಜನೆಯಡಿ ಸಾಲವನ್ನು ಪಡೆದುಕೊಳ್ಳಬಹುದು
•ನೀವು ಮುದ್ರಾ ಯೋಜನೆಯಡಿ ಸಾಲವನ್ನು ಪಡೆಯಲು ಬಯಸಿದರೆ ಬ್ಯಾಂಕ್ ಅಧಿಕಾರಿಗಳಿಗೆ ವ್ಯವಹಾರದ ಮಾದರಿಯನ್ನು ತೋರಿಸಬೇಕಾಗುತ್ತದೆ.

•ವ್ಯವಹಾರದ ಮೂಲ ಮಾದರಿಯ ಆಧಾರದ ಮೇಲೆ ಬ್ಯಾಂಕ್ ನಿಮಗೆ 10 ಲಕ್ಷ ಸಾಲವನ್ನು ನೀಡುತ್ತದೆ.

•ನಿಮ್ಮ ವ್ಯವಹಾರಕ್ಕೆ ನೀವು ಕೇವಲ 25 % ಹಣವನ್ನು ಖರ್ಚು ಮಾಡಿದರೆ ಬ್ಯಾಂಕ್ ನಿಮಗೆ 75 % ಸಾಲವನ್ನು ನೀಡುತ್ತದೆ.

•ಸೂಕ್ಷ ಮತ್ತು ಸಣ್ಣ ಕೈಗಾರಿಕೆಗಳಿಗೆ ಈ ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ ಸಹಾಯವಾಗುತ್ತದೆ.

•ಇನ್ನು mudra.org.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸಾಲದ ಅರ್ಜಿಯನ್ನು ಭರ್ತಿಮಾಡಿ ಹತ್ತಿರದ ಬ್ಯಾಂಕ್ ಶಾಖೆಗೆ ಅರ್ಜಿಯನ್ನು ಸಲ್ಲಿಸಿದರೆ ಬ್ಯಾಂಕ್ ನಿಮಗೆ ಸಾಲವನ್ನು ನೀಡುತ್ತದೆ.

Join Nadunudi News WhatsApp Group