PM Kisan Samman: ಇಂತಹ ಜನರಿಗೆ ಸಿಗಲ್ಲ ಕಿಸಾನ್ ಸಮ್ಮಾನ್ 15 ಕಂತಿನ ಹಣ, ಇಂದೇ ಬ್ಯಾಂಕಿಗೆ ಭೇಟಿ ನೀಡಿ ಈ ಕೆಲಸ ಮಾಡಿ.

ಈ ಕೆಲಸ ಮಾಡದಿದ್ದರೆ ಕಿಸಾನ್ ಸಮ್ಮಾನ್ ಯೋಜನೆಯ 15 ಕಂತಿನ ಹಣ ಜಮಾ ಆಗಲ್ಲ.

PM Kisan e-KYC Latest Update: ಕೇಂದ್ರ ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ ರೈತರು ಮೋದಿ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ಇನ್ನು ಈಗಾಗಲೇ ರೈತರಿಗಾಗಿ ಪಿಎಂ ಕಿಸಾನ್ ಯೋಜನೆ (PM Kisan Samman Yojana) ರೂಪುಗೊಂಡಿದ್ದು ಈ ಯೋಜನೆಯಡಿ ಸಾಕಷ್ಟು ರೈತರು ಸಹಾಯ ಪಡೆಯುತ್ತಿದ್ದಾರೆ. ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

PM Kisan e-KYC Latest Update
Image Credit: India

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮೋದಿ ಸರ್ಕಾರ ರೂ. 6 ಸಾವಿರ ಉಚಿತವಾಗಿ ಹಣ ನೀಡುತ್ತದೆ. ಆದರೆ ಈ ಹಣ ಒಂದೇ ಬಾರಿ ಬರುವುದಿಲ್ಲ ಮತ್ತು ಕಂತುಗಳಲ್ಲಿ ಬರುತ್ತದೆ. ನಾಲ್ಕು ತಿಂಗಳಿಗೊಮ್ಮೆ ವರ್ಷಕ್ಕೆ ಮೂರು ಬಾರಿ 2 ಸಾವಿರ ರೂಪಾಯಿಯಂತೆ 6 ಸಾವಿರ ದೊರೆಯಲಿದೆ. PM Kisan pmkisan.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

PM Kisan ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಡಿ 14 ನೇ ಕಂತಿನ ಪಾವತಿಯನ್ನು ಫಲಾನುಭವಿ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರು 15 ನೇ ಕಂತಿನ ಹಣ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇದೀಗ 15 ನೇ ಕಂತಿನ ಹಣ ಪಡೆಯುವ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಸರ್ಕಾರ ಇದೀಗ ಮಹತ್ವದ ಮಾಹಿತಿಯನ್ನು ನೀಡಿದೆ.

Pradan Mantri Kisan Samman Nidhi Yojana
Image Credit: Cbpacs

ಪಿಎಂ ಕಿಸಾನ್ ಯೋಜನೆಗೆ ಇ-ಕೆವೈಸಿ ಅಗತ್ಯ
ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

Join Nadunudi News WhatsApp Group

ಇನ್ನು 2023 ರ ಬಾಕಿ ಉಳಿಸಿಕೊಂಡಿರುವ 15 ನೇ ಕಂತಿನ ಸಹಾಯಧನ ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಕಾರಣದಿಂದ ಇನ್ನು ಕೂಡ ಪಿಎಂ ಕಿಸಾನ್ ಯೋಜನೆಗೆ E-KYC Update ಮಾಡಿಸದೇ ಇರುವ ರೈತರು ಇ-ಕೆವೈಸಿ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ.

ಇನ್ನು ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಇ -ಕೆವೈಸಿ ಅಪ್ಡೇಟ್ ಮಾಡಬಹುದು. ಸಕ್ರಿಯ ಬ್ಯಾಂಕ್ ಖಾತೆಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಿ.
ನಿಮ್ಮ ಇ-ಕೆವೈಸಿ ಪೂರ್ಣಗೊಳಿಸಿ

Join Nadunudi News WhatsApp Group