Awas Yojana: ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್, ಇಂದೇ ಈ ಯೋಜನೆಗೆ ಅರ್ಜಿ ಸಲ್ಲಿಸಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿದಾರರಿಗೆ ಶೀಘ್ರವೇ ಮನೆ ಲಭ್ಯವಾಗುವ ಬಗ್ಗೆ ಮಾಹಿತಿ ಲಭಿಸಿದೆ.
Pradhan Mantri Awas Yojana: ದೇಶದಲ್ಲಿರುವ ನಿರ್ಗತಿಕರಿಗಾಗಿ ಮನೆ ನಿರ್ಮಿಸುವ ಸಲುವಾಗಿ ಪ್ರಧಾನ ಮಂತ್ರಿ ಅವರ ಆವಾಸ್ ಯೋಜನೆ (Pradhan Mantri Awas Yojana) ಈಗಾಗಲೇ ಚಾಲ್ತಿಯಲ್ಲಿದೆ. ಈ ಯೋಜನೆಯ ಅಡಿಯಲ್ಲಿ ಅರ್ಜಿದಾರರು ಹಣವನ್ನು ಪಡೆಯುತ್ತಿದ್ದಾರೆ.
ಕೇಂದ್ರದ ಮೋದಿ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಜನಸಾಮಾನ್ಯರು ಎಲ್ಲ ಯೋಜನೆಯನ್ನು ಲಾಭವನ್ನು ಪಡೆಯುತ್ತಿದ್ದಾರೆ. ಇದೀಗ ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್ ಲಭಿಸಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ
ಮೂರು ಲಕ್ಷಕ್ಕಿಂತ ಕಡಿಮೆ ಆದಾಯವನ್ನು ಹೊಂದಿರುವ ಯಾವುದೇ ವ್ಯಕ್ತಿಯು ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಬಹುದು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮೂರು ಕಂತುಗಳಲ್ಲಿ ಹಣವನ್ನು ನೀಡಲಾಗುತ್ತದೆ. ಮೊದಲನೆಯ ಕಂತಿನಲ್ಲಿ 50,000 ,ಎರಡನೆಯ ಕಂತಿನಲ್ಲಿ 1.50 ಲಕ್ಷ, ಮೂರನೆಯಾ ಕಂತಿನಲ್ಲಿ 50,000 ಹಣವನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿದಾರರಿಗೆ ಶೀಘ್ರವೇ ಮನೆ ಲಭ್ಯವಾಗುವ ಬಗ್ಗೆ ಮಾಹಿತಿ ಲಭಿಸಿದೆ.
ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಮೋದಿ ಸರ್ಕಾರ 1.19 ಕೋಟಿ ಮನೆಗಳನ್ನು ಮಂಜೂರು ಮಾಡಿದೆ ಮತ್ತು ಈಗಾಗಲೇ 75 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಮಾಹಿತಿ ನೀಡಿದ್ದಾರೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಮನೆಯನ್ನು ಮಂಜೂರು ಮಾಡಲಾಗಿದೆ. ಇನ್ನು ಆನ್ಲೈನ್ ನ ಮೂಲಕ ಸುಲಭವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಈ ಸುಲಭ ವಿಧಾನದ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
*pmaymis.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
*ಅಲ್ಲಿ ಸಿಟಿಜನ್ ಅಸೆಸ್ಮೆಂಟ್ ಆಯ್ಕೆಯನ್ನು ಆರಿಸಿ ಆಧಾರ್ ಕಾರ್ಡ್ ಸಂಖ್ಯೆಯನ್ನು ಭರ್ತಿಮಾಡಿ ಚೆಕ್ ಮೇಲೆ ಕ್ಲಿಕ್ ಮಾಡಬೇಕು.
*ನಂತರ ಆನ್ಲೈನ್ ಫಾರ್ಮ್ ತೆರೆಯುತ್ತದೆ.
*ಅಲ್ಲಿ ಕೇಳಿದ ಮಾಹಿತಿಯನ್ನು ಭರ್ತಿ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
*ಅರ್ಜಿ ಸಲ್ಲಿಕೆಯ ನಂತರ ಅಲ್ಲಿ ಅಪ್ಲಿಕೇಶನ್ ಸಂಖ್ಯೆ ಕಾಣಿಸುತ್ತದೆ. ಈ ಮೂಲಕ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.