Maandhan Yojana: 60 ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೆ ಕೇಂದ್ರದಿಂದ ಪ್ರತಿ ತಿಂಗಳು 3000 ರೂ, ಇಂದೇ ಅರ್ಜಿ ತುಂಬಿ ಸೇರಿಕೊಳ್ಳಿ.

60 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರದ ಹೊಸ ಯೋಜನೆ.

Pradhan Mantri Kisan Maandhan Yojana: ಕೇಂದ್ರ ಸರ್ಕಾರ ದೇಶದ ಬಡ ನಾಗರೀಕರಿಗಾಗಿ ವಿವಿಧ ರೀತಿಯ ಯೋಜನೆಯನ್ನು ಬಿಡುಗಡೆ ಮಾಡುತ್ತಿದೆ. ಇನ್ನು ಕೇಂದ್ರ ಸರ್ಕಾರ ಹಲವು ರೀತಿಯ ಪಿಂಚಣಿ ಯೋಜನೆಯನ್ನು ಕೂಡ ಜಾರಿಗೊಳಿಸುತ್ತಿದೆ.

ಇದೀಗ ಕೇಂದ್ರದ ಮೋದಿ ಸರ್ಕಾರ ವೃದ್ಧರಿಗಾಗಿ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. 60 ವರ್ಷ ಮೇಲ್ಪಟ್ಟವರು ಈ ಹೊಸ ಯೋಜನೆಯಡಿಯಲ್ಲಿ ಮಾಸಿಕ ಪಿಂಚಣಿಯನ್ನು ಪಡೆಯಬಹುದು.

Pradhan Mantri Kisan Maandhan Yojana updates
Image Credit: Gstsuvidhakendra

ಪ್ರಧಾನ ಮಂತ್ರಿ ಕಿಸಾನ್ ಮನ್ ಧನ್ ಯೋಜನಾ (Pradhan Mantri Kisan Maandhan Yojana) 
ದೇಶದಲ್ಲಿನ ಬಡ ವೃದ್ಧರಿಗೆ ಆರ್ಥಿಕ ನೆರವಾಗಲು ಪ್ರಧಾನ ಮಂತ್ರಿ ಮನ್ ಧನ್ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ. ಈ ಯೋಜನೆಯ ಅಡಿಯಲ್ಲಿ ವೃದ್ಧರಿಗೆ ನಿಗದಿತ ಪಿಂಚಣಿಯ ಮೊತ್ತವನ್ನು ನೀಡಲಾಗುತ್ತದೆ.ಇನ್ನು 18  ವರ್ಷ ಮೇಲ್ಪಟ್ಟವರು ಈ ಪ್ರಧಾನ ಮಂತ್ರಿ ಕಿಸಾನ್ ಮನ್ ಧನ್ ಯೋಜನೆಯ ಲಾಭವನ್ನು ಪಡೆಯಬಹುದು. ನೀವು ಈ ಯೋಜನೆಯ ಲಾಭ ಪಡೆಯಲು ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿರಬೇಕು.

ಈ ಯೋಜನೆಯಲ್ಲಿ ಸಿಗಲಿದೆ ಮಾಸಿಕ 3000 ಪಿಂಚಣಿ
ಈ ಯೋಜನೆಯಲ್ಲಿ ವಯಸ್ಸಿಗೆ ಅನುಗುಣವಾಗಿ ಹೂಡಿಕೆ ಮುಖ್ಯವಾಗಿರುತ್ತದೆ. ನೀವು 18 ವರ್ಷದಲ್ಲಿ ಹೂಡಿಕೆ ಪ್ರಾರಂಭಿಸಿದೆ ತಿಂಗಳಿಗೆ 55 ರೂ. ಇನ್ನು 40 ವಯಸ್ಸಿನಲ್ಲಿ ಯೋಜನೆಗೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 220 ರೂ. ಹೂಡಿಕೆ ಮಾಡಬೇಕು.

ನಿಮ್ಮ ವಯಸ್ಸು 60 ವರ್ಷ ದಾಟಿದ ಮೇಲೆ ಪ್ರತಿ ತಿಂಗಳು ಪಿಂಚಣಿಯ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ಕಿಸಾನ್ ಮನ್ ಧನ್ ಯೋಜನೆಯಡಿಯಲ್ಲಿ ವೃದ್ಧರಿಗೆ ಮಾಸಿಕ 3000 ರೂಪಾಯಿ ಪಿಂಚಣಿ ನೀಡಲಾಗುತ್ತದೆ. ಅಂದರೆ ವಾರ್ಷಿಕವಾಗಿ ರೂ. 36000 ಮೊತ್ತವನ್ನು ಪಡೆಯುತ್ತಾರೆ.

Join Nadunudi News WhatsApp Group

People above 60 years can get monthly pension under this new scheme.
Image Credit: Zeenews

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮೋದಿ ಸರ್ಕಾರ ರೂ. 6 ಸಾವಿರ ಉಚಿತವಾಗಿ ಹಣ ನೀಡುತ್ತದೆ. ಆದರೆ ಈ ಹಣ ಒಂದೇ ಬಾರಿ ಬರುವುದಿಲ್ಲ. ಕಂತುಗಳಲ್ಲಿ ಬರುತ್ತದೆ. ನಾಲ್ಕು ತಿಂಗಳಿಗೊಮ್ಮೆ ವರ್ಷಕ್ಕೆ ಮೂರು ಬಾರಿ 2 ಸಾವಿರ ರೂಪಾಯಿಯಂತೆ 6 ಸಾವಿರ ದೊರೆಯಲಿದೆ.

ಸಾಮಾನ್ಯವಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರು ತಲಾ 2000 ರೂಪಾಯಿಗಳನ್ನು ಸ್ವೀಕರಿಸುತ್ತಾರೆ. ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯ 14 ನೇ ಕಂತಿನ ಹಣದ ಪಾವತಿ ಮಾಡುವ ಬಗ್ಗೆ ಅಧಿಕೃತ ಟ್ವೀಟ್ ನ ಮೂಲಕ ಮಾಹಿತಿ ನೀಡಲಾಗಿದೆ. ಸರ್ಕಾರ ಜುಲೈ 27 ರೊಳಗೆ 14 ನೇ ಕಂತಿನ ಹಣ ಬಿಡುಗಡೆ ಆಗಲಿದೆ.

Join Nadunudi News WhatsApp Group