Kisan Yojana: ಕಿಸಾನ್ ಖಾತೆ ಇದ್ದವರಿಗೆ ಕೇಂದ್ರದಿಂದ ಗುಡ್ ನ್ಯೂಸ್, ಈ ದಿನದಿಂದ ಖಾತೆಗೆ ಬರಲಿದೆ 15 ನೇ ಕಂತಿನ ಹಣ .

ಪಿಎಂ ಕಿಸಾನ್ 15 ನೇ ಕಂತಿನ ಹಣ ವರ್ಗಾವಣೆಗೆ ದಿನಾಂಕ ಫಿಕ್ಸ್.

Pradhan Mantri Kisan Samman Nidhi 15 Installment Release Date: ಕೇಂದ್ರ ಸರ್ಕಾರ ಈಗಾಗಲೇ ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ ರೈತರು ಮೋದಿ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ರಾಜ್ಯದ ರೈತರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೀಗ Kisan Yojana ಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

Pradhan Mantri Kisan Samman Nidhi Yojana
Image Credit: PM Kisan

Pradhan Mantri Kisan Samman Nidhi Yojana
ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮೋದಿ ಸರ್ಕಾರ 6 ಸಾವಿರ ಉಚಿತವಾಗಿ ಹಣ ನೀಡುತ್ತದೆ. ಆದರೆ ಈ ಹಣ ಒಂದೇ ಬಾರಿ ಬರುವುದಿಲ್ಲ, ಬದಲಾಗಿ ನಾಲ್ಕು ತಿಂಗಳಿಗೊಮ್ಮೆ ವರ್ಷಕ್ಕೆ ಮೂರು ಬಾರಿ 2 ಸಾವಿರ ರೂಪಾಯಿಯಂತೆ 6 ಸಾವಿರ ದೊರೆಯಲಿದೆ. PM Kisan pmkisan.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.

PM Kisan ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಡಿ 14 ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ PM Kisan ಯೋಜನೆಯಲ್ಲಿ ರೈತರು 15 ನೇ ಕಂತಿನ ಹಣ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇದೀಗ 15 ನೇ ಕಂತಿನ ಹಣ ಪಡೆಯುವ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ.

Pradhan Mantri Kisan Samman Nidhi 15 Installment Release Date
Image Credit: India

ಪಿಎಂ ಕಿಸಾನ್ 15 ನೇ ಕಂತಿನ ಹಣ ವರ್ಗಾವಣೆಗೆ ದಿನಾಂಕ ಫಿಕ್ಸ್
PM Kisan ಯೋಜನೆಯ 15ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಸೇರಲಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತು ನವೆಂಬರ್ 27 ರಂದು ರೈತರ ಖಾತೆಗಳಿಗೆ ಸೇರಲಿದೆ. ಈ ಕಂತಿನಲ್ಲಿ ಪ್ರತಿ ರೈತರಿಗೆ 2000 ರೂ. ಗಳಂತೆ ಒಟ್ಟು 11 ಕೋಟಿಗೂ ಅಧಿಕ ರೈತರಿಗೆ 22,000 ಕೋಟಿ ರೂಪಾಯಿ ವರ್ಗಾವಣೆಯಾಗಲಿದೆ. ಕಂತಿನ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

Join Nadunudi News WhatsApp Group

ಪಿಎಂ ಕಿಸಾನ್ ಯೋಜನೆಗೆ ಇ-ಕೆವೈಸಿ ಅಗತ್ಯ
ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

Join Nadunudi News WhatsApp Group