PM Scholarship: ದೇಶದ ವಿದ್ಯಾರ್ಥಿಗಳಿಗೆ ಸಿಗಲಿದೆ 36000 ರೂ ವಿದ್ಯಾರ್ಥಿವೇತನ, PM ವಿದ್ಯಾರ್ಥಿವೇತನಕ್ಕೆ ಇಂದೇ ಅರ್ಜಿ ಹಾಕಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, PM ವಿದ್ಯಾರ್ಥಿ ವೇತನದಡಿ ಸಿಗಲಿದೆ 36000 ರೂ. ವಿದ್ಯಾರ್ಥಿವೇತನ .

PM Scholarship Scheme: ಕೇಂದ್ರದ ನರೇಂದ್ರ ಮೋದಿ (Narendra Modi) ಸರ್ಕಾರ ದೇಶದ ಜನತೆಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಚಯಿಸುತ್ತಿದೆ. ಜನರು ಮೋದಿ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಸದ್ಯ ಮೋದಿ ಸರ್ಕಾರ ವಿದ್ಯಾರ್ಥಿಗಳ ವಿಧ್ಯಾಭ್ಯಾಸದತ್ತ ಗಮನ ಹರಿಸುತ್ತಿದೆ. ಹೌದು, ಮೋದಿ ಸರ್ಕಾರ ಇದೀಗ ವಿದ್ಯಾರ್ಥಿಗಳ ಶಿಕ್ಷಣದ ಉತ್ತೇಜನಕ್ಕಾಗಿ ವಿಶೇಷ ವಿದ್ಯಾರ್ಥಿ ವೇತನವನ್ನು ಪರಿಚಯಿಸಲು ನಿರ್ಧರಿಸಿದೆ.

narendra modi scholarship 2023
Image Credit: Original Source

ಪ್ರಧಾನ್ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ
ಸದ್ಯ ಹೊಸ ವರ್ಷದ ಆರಂಭಕ್ಕೆ ಮೋದಿ ಸರ್ಕಾರ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳಿಗಾಗಿ “ಪ್ರಧಾನ್ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ”ಯನ್ನು (PM Scholarship Scheme- PMSS)  ಪ್ರಾರಂಭಿಸಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳು 30 ರಿಂದ 36 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ಪಡೆಯಬಹುದು. ಈ ವಿದ್ಯಾರ್ಥಿ ವೇತನದಡಿ ವಿದ್ಯಾಭ್ಯಾಸ ಮಾಡುತ್ತಿರುವ ಯುವಕ ಯುವತಿಯರು ಧನ ಸಹಾಯವನನ್ನು ಪಡೆಯಬಹುದು. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ತಮ್ಮ ಶಿಕ್ಷಣಕ್ಕೆ ಧನಸಹಾಯವನ್ನು ಪಡೆಯಬಹುದು. ಪ್ರಧಾನ್ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

PM ವಿದ್ಯಾರ್ಥಿ ವೇತನದಡಿ ಸಿಗಲಿದೆ 36000 ರೂ. ವಿದ್ಯಾರ್ಥಿವೇತನ
ಈ ವರ್ಷ PUC ಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳು ಪ್ರಧಾನ್ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುತ್ತಾರೆ. MBBS ,BDS ,BTECH MSC ಕೋರ್ಸ್ ಗಳಿಗೆ ಸೇರಿದಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

pradhan mantri scholarship for students
Image Credit: Original Source

ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಹೇಗೆ..?
ಜನವರಿ 1 2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 5 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆದುಕೊಳ್ಳಬಹುದು. www.ksb.gov.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳಿಗೆ PM ವಿದ್ಯಾರ್ಥಿ ವೇತನ ಯೋಜನೆಯಡಿ ಬಾಲಕರಿಗೆ 30000 ರೂ. ಬಾಲಕಿಯರಿಗೆ 36000 ರೂ. ವಿದ್ಯಾರ್ಥಿ ವೇತನವನ್ನು ಪಡೆಯಬಹುದು.

Join Nadunudi News WhatsApp Group

Join Nadunudi News WhatsApp Group