Ads By Google

PMUY Update: ಇಂತಹ ಮಹಿಳೆಯರಿಗೆ ಕೇಂದ್ರದಿಂದ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್, ಇಂದೇ ಅರ್ಜಿ ಸಲ್ಲಿಸಿ

Pradhan Mantri Ujjwala Yojana 2024

Image Credit: Original Source

Ads By Google

Pradhan Mantri Ujjwala Yojana Apply 2024: ಸದ್ಯ ಏರಿಕೆಯಾಗುತ್ತಿರುವ Gas Cylinder ಬೆಲೆಗೆ ಬ್ರೇಕ್ ಹಾಕಲು ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ದೇಶದ ಬಡ ಜನರಿಗಾಗಿ Gas Cylinder Subsidy ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಮೋದಿ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಯೋಜನೆಯ ಲಾಭ ಪಡೆಯಬಹುದು. ಮೋದಿ ಸರ್ಕಾರದ Gas Cylinder Subsidy ಯೋಜನೆ ಯಾವುದು? ಅರ್ಜಿ ಸಲ್ಲಿಕೆಯ ವಿಧಾನ ಹೇಗೆ? ಯಾರು ಯಾರು ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಲು ಅರ್ಹರಾಗಿದ್ದಾರೆ..? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Image Credit: Timesnowhindi

Pradhan Mantri Ujjwala Yojana
ಕೇಂದ್ರ ಸರ್ಕಾರ ದೇಶದ ಜನತೆಗೆ ಇದೀಗ ಗ್ಯಾಸ್ ಸಿಲಿಂಡರ್ ವಿಚಾರವಾಗಿ ಸಿಹಿಸುದ್ದಿ ನೀಡಿದೆ. ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಗಳ ಮೇಲೆ 200 ರೂ. ಸಬ್ಸಿಡಿಯನ್ನು ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಈ ಯೋಜನೆಯಡಿ ಕೇಂದ್ರವು ದೇಶದಲ್ಲಿ 75 ಲಕ್ಷ ಹೊಸ ಎಲ್ ಪಿಜಿ ಸಂಪರ್ಕವನ್ನು ಘೋಷಿಸಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 75 ಲಕ್ಷ ಬಡ ಕುಟುಂಬಗಳಿಗೆ ಉಚಿತ LPG ಸಂಪರ್ಕ ನೀಡುವಂತೆ ಕೇಂದ್ರದ ಮೋದಿ ಸರ್ಕಾರ ನಿರ್ಧರಿಸಿದೆ. ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಈ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ಸಿಗಲಿದೆ.

Image Credit: Aaj Tak

ಯಾರು ಯಾರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್..?
•ಬಡತನ ರೇಖೆಗಿಂತ ಕೆಳಗಿರುವವರು ಅಂದರೆ BPL Ration card ಹೊಂದಿರುವವರು.

•ಭಾರತೀಯ ಮಹಿಳೆಯರು.

•ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.

•ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ, ನಗರ ಪ್ರದೇಶದಲ್ಲಿ 2 ಲಕ್ಷಕ್ಕಿಂತ ಕಡಿಮೆ ಇರಬೇಕು.

•ಅರ್ಜಿದಾರರ ಕುಟುಂಬವು ಇಲ್ಲಿಯವರೆಗೆ ಯಾವುದೇ ಗ್ಯಾಸ್ ಸಂಪರ್ಕವನ್ನು ಪಡೆದಿರಬಾರದು.

Image Credit: Wikimedia

PM Ujjwala ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ..?
*https://www.pmuy.gov.in/index.aspx ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

*ವೆಬ್ ಸೈಟ್ ಓಪನ್ ಆದ ತತ್ಕ್ಷಣ HP, Inden ಅಥವಾ Bharat Gas ನಂತಹ ಗ್ಯಾಸ್ ವಿತರಕರನ್ನು ಆಯ್ಕ ಮಾಡಬೇಕು. ಹೆಸರು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ನೀ ಅರ್ಜಿಯನ್ನು ಭರ್ತಿ ಮಾಡಬೇಕು.

*ದಾಖಲೆಗಳ ಸಾಫ್ಟ್ ಕಾಪಿಯನ್ನು ವೆಬ್ ಸೈಟ್ ಗೆ ಅಪ್ಲೋಡ್ ಮಾಡಬೇಕುತ್ತದೆ.

*ದಾಖಲೆಗಳನ್ನು ಪರಿಶೀಲಿಸಿದ ನಂತರ ಹೊಸ ಗ್ಯಾಸ್ ಸಂಪರ್ಕವನ್ನು ನೀಡಲಾಗುತ್ತದೆ.

*ಅರ್ಜಿ ಸಲ್ಲಿಕೆಗೆ Aadhaar card , ಹೆಸರು, ಮೊಬೈಲ್ ಸಂಖ್ಯೆ ಸೇರಿದಂತೆ ಇನ್ನಿತರ ಅನೇಕ ವೈಯಕ್ತಿಕ ದಾಖಲೆಗಳ ಮಾಹಿತಿ ಅಗತ್ಯವಿದೆ.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in