Prajwal Revanna: ಪೆನ್ ಡ್ರೈವ್ ಕೇಸ್ ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು…?

ಪೆನ್ ಡ್ರೈವ್ ಕೇಸ್ ನಡುವೆ ವೈರಲ್ ಆಗುತ್ತಿದೆ ಪ್ರಜ್ವಲ್ ರೇವಣ್ಣ ಒಟ್ಟು ಆಸ್ತಿ ಮೌಲ್ಯ

Prajwal Revanna Case: ಸದ್ಯ ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತ್ತಿದೆ. ಈ ಬಾರಿ ಕೇಂದ್ರದಲ್ಲಿ ಅಧಿಕಾರವನ್ನು ಪಡೆಯಲು ರಾಜಕೀಯ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದೆ. ಸದ್ಯ ಇದೀಗ ಲೋಕಸಭಾ ಚುನಾವಣೆಯ ಸಮಯದಲ್ಲಿಯೇ ಹಾಸನ ಸಂಸದ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಇದೀಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಅವರ ವಿರುದ್ಧ ಎಸ್‌ಐಟಿ ತನಿಖೆಗೆ ಆದೇಶಿಸಿದೆ.

Prajwal Revanna Case
Image Credit: Jagran

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿದ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ತನಿಖೆಗೆ ಒಳಪಟ್ಟಿದೆ. ಈ ಬಗ್ಗೆ ಚರ್ಚೆಗಳು ಹೆಚ್ಚಾಗಿದೆ. ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತ ಕೆಲವು ವಿಡಿಯೋ ತುಣುಕುಗಳು ವೈರಲ್ ಆಗಿವೆ. ಇದಾದ ಬಳಿಕ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಎಲ್ಲರಿಗೂ ಗೊತ್ತಿರುವಂತೆ ಪ್ರಜ್ವಲ್ ರೇವಣ್ಣ ರಾಜಕೀಯ ಹಿನ್ನೆಲೆಯಿಂದ ಬಂದವರು. ದೇವೇಗೌಡರ ಮನೆತನದವರು. ಮಾಜಿ ಸಚಿವ ಎಚ್.ಡಿ.ರೇವಣ್ಣ-ಭವಾನಿ ರೇವಣ್ಣ ಪುತ್ರ.

1990 ರಲ್ಲಿ ಜನಿಸಿದ ಪ್ರಜ್ವಲ್ ಗೆ ಈಗ 33 ವರ್ಷ. ಪ್ರಜ್ವಲ್ ರೇವಣ್ಣ ಅವರಿಗೆ ಇನ್ನೂ ಮದುವೆಯಾಗಿಲ್ಲ. ಇನ್ನು ಪ್ರಜ್ವಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ವಿದೇಶದಲ್ಲಿ ಎಂ.ಟೆಕ್ ಮಾಡಲು ಹೋಗಿ ಅರ್ಧದಲ್ಲೇ ಬಿಟ್ಟು ಬಂದಿದ್ದಾರೆ. ತಾತ ಎಚ್ ಡಿ ದೇವೇಗೌಡ ತಮ್ಮ ಸ್ವ ಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್ ಗೆ ಬಿಟ್ಟುಕೊಟ್ಟರು. 2019 ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಸಂಸದರಾಗಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು. ಕಳೆದ 8 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದಾರೆ. ಟಾಟಾ ಎಚ್.ಡಿ.ದೇವೇಗೌಡರು ತಮ್ಮ ಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್‌ ಗೆ ಬಿಟ್ಟುಕೊಟ್ಟಿದ್ದಾರೆ.

prajwal revanna video
Image Credit: Theprint

ಪೆಣ್ ಡ್ರೈವ್ ಕೇಸ್ ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು…?
2019ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಸಂಸದರಾಗಿ ಪ್ರಥಮ ಬಾರಿಗೆ ಸಂಸತ್ ಪ್ರವೇಶಿಸಿದ್ದರು. ಕಳೆದ 8 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ಹಾಸನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ವೇಳೆ ಅವರು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.

ಪ್ರಜ್ವಲ್ ಸುಮಾರು 40.84 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ಇನ್ನು 9.29 ಲಕ್ಷ ನಗದು ಮೌಲ್ಯದ ಆಸ್ತಿ ಹೊಂದಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ ಅವರ ಆಸ್ತಿ 10 ಕೋಟಿ ರೂ. ಎಂದು ಘೋಷಿಸಿದ್ದರು. ಈಗ 40 ಕೋಟಿ ರೂ.ಗೆ ಏರಿಕೆಯಾಗಿದೆ. ಹೊಳೆನರಸೀಪುರದಲ್ಲಿ ಕೃಷಿ ಭೂಮಿ, ಮೈಸೂರಿನಲ್ಲಿ ವಾಣಿಜ್ಯ ಮಳಿಗೆ, ನೆಲಮಂಗಲದಲ್ಲಿ ಕೃಷಿಯೇತರ ಜಮೀನು ಹೊಂದಿದ್ದಾರೆ. ಇದೀಗ ಲೈಂಗಿಕ ಹಗರಣದಲ್ಲಿ ಅವರ ಹೆಸರು ಕೇಳಿಬಂದಿದ್ದು, ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ. ಈ ಪ್ರಕರಣ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Join Nadunudi News WhatsApp Group

Prajwal Revanna Latest News
Image Credit: Livemint

Join Nadunudi News WhatsApp Group