Prakash Raj: ಸನಾತನ ಧರ್ಮದ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ, ವೈರಲ್ ಆಗಿದೆ ಪ್ರಕಾಶ್ ರಾಜ್ ಪೋಸ್ಟ್.
ಸನಾತನ ಧರ್ಮದ ಕುರಿತು ಪ್ರಕಾಶ್ ರಾಜ್ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.
Prakash Raj Post About Sanatana Dharma: ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಸದಾ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಾಗುತ್ತಾರೆ.ಇನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಆಗಾಗ ಹೊಸ ಹೊಸ ವಿವಾದವನ್ನು ಸೃಷ್ಟಿಸುತ್ತಾರೆ.
ಪ್ರಕಾಶ್ ರಾಜ್ ಹಂಚಿಕೊಂಡಿರುವ ಸಾಕಷ್ಟು ಪೋಸ್ಟ್ ಗಳು ಈಗಾಗಲೇ ಸಾಕಷ್ಟು ವಿವಾದವನ್ನು ಹುಟ್ಟುಹಾಕಿದೆ. ವಿವಾದಗಳಿಂದಲೇ ಪ್ರಕಾಶ್ ರಾಜ್ ಸೋಶಿಯಲ್ ಮೀಡಿಯಾದಲ್ಲಿ ಹೈಲೈಟ್ ಆಗುತ್ತಾರೆ. ಇದೀಗ ಮತ್ತೆ ಪ್ರಕಾಶ್ ರಾಜ್ ವಿವಾದ ಹುಟ್ಟಿಹಾಕುವ ಮಾತುಗಳನ್ನಾಡಿದ್ದಾರೆ. ಪ್ರಕಾಶ್ ರಾಜ್ ಹೇಳಿಕೆ ಈ ಬಾರಿ ಹೆಚ್ಚು ಚರ್ಚೆಯನ್ನು ಹುಟ್ಟುಹಾಕಿದೆ.
ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಕೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಶನಿವಾರ ಸನಾತನ ಧರ್ಮವನ್ನು (Sanatana Dharma) ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿದ್ದಾರೆ. ಈ ಹೇಳಿಕೆ ಹೆಚ್ಚಿನ ವಿವಾದಕ್ಕೆ ಕಾರಣವಾಗಿದೆ. ಹಲವು ಸಂಘಟನೆಗಳು ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.
ಇನ್ನು ಅಯೋದ್ಯೆಯ ಸಂತ ಪರಮಹಂಸ ಆಚಾರ್ಯ ಅವರು ಉದಯನಿಧಿ ಸ್ಟಾಲಿನ್ ಅವರ ಸಾಂಕೇತಿಕ ಶಿರಚ್ಛೇದನ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಉದಯನಿಧಿ ಸ್ಟಾಲಿನ್ ಪೋಸ್ಟರ್ ಗೆ ಬೆಂಕಿ ಹಚ್ಚಿ, ಸ್ಟಾಲಿನ್ ಶಿರಚ್ಛೇದನ ಮಾಡಿದವರಿಗೆ 10 ಕೋಟಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ನಟ ಪ್ರಕಾಶ ರಾಜ್ (Prakash Raj) ಸನಾತನ ಧರ್ಮಕ್ಕೆ ವ್ಯಂಗ್ಯ ಮಾಡಿದ್ದಾರೆ. ಪ್ರಕಾಶ ರಾಜ್ X ನಲ್ಲಿ ಹಂಚಿಕೊಂಡ ಪೋಸ್ಟ್ ಇದೀಗ ಬಾರಿ ವೈರಲ್ ಆಗುತ್ತಿದೆ.
ಸನಾತನ ಧರ್ಮದ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ
ನಟ ಪ್ರಕಾಶ್ ರಾಜ್ X ನಲ್ಲಿ ಸನಾತನ ಧರ್ಮದ ಬಗ್ಗೆ ವ್ಯಂಗ್ಯ ಹೇಳಿಕೆಯನ್ನು ನೀಡಿದ್ದಾರೆ. ಅಂಬೇಡ್ಕರ್ ಮತ್ತು ಪೆರಿಯಾರ್ ಫೋಟೋಗಳನ್ನು ಶೇರ್ ಮಾಡುವುದರ ಜೊತೆಗೆ ಹಿಂದೂಗಳು ತಾನಾತನಿಸ್ ಅಲ್ಲ, ತನಟನಿಸ್ ಮಾನವ ವಿರೋಧಿಗಳು ಎಂದು ಬರೆದುಕೊಂಡಿದ್ದಾರೆ.
ಇನ್ನು ಕಾರ್ಯಕ್ರಮವೊಂದರಲ್ಲಿ ಮಾತನಾಡುವ ಪ್ರಕಾಶ್ ರಾಜ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. “ನಾನು ಟ್ವಿಟರ್ ನಲ್ಲಿ ಸನಾತನಿ ಸಂಸತ್ ಎಂದು ಪೋಸ್ಟ್ ಮಾಡಿದ್ದೆ. ಅದಕ್ಕೆ ನೀನು ಸನಾತನ ಧರ್ಮ ಅಲ್ವ ಎಂದು ಒಬ್ಬ ಪ್ರಶ್ನೆ ಕೇಳಿದ. ‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ’ ನಾನು ನಮ್ಮ ಅಮ್ಮ , ಅಪ್ಪನಿಗೆ ಹುಟ್ಟಿದ್ದೇನೆ” ಎಂದು ಉತ್ತರ ನೀಡಿದೆ ಎಂದಿದ್ದಾರೆ.
ನಾನು ಧರ್ಮದ ವಿರುದ್ಧ ಅಲ್ಲ. ಆದರೆ ಪ್ರಧಾನಿ ಮೋದಿ ವಿರುದ್ಧ. ಅವರು ಸಂಸತ್ ಭವನದಲ್ಲಿ ಉದ್ಘಾಟನೆ ವೇಳೆ ಹೋಮ ಹವಾನ ಮಾಡಿಸಿದರು. ಅದು ನಮ್ಮ ಸಂಸತ್ ಭವನ. ಅದರಲ್ಲಿ ಹೋಮ ಹವನ ಮಾಡಬಾರದು. ಯಾವುದನ್ನು ಸಹ ನಮ್ಮ ಮೇಲೆ ಬಲವಂತವಾಗಿ ಹೇರಬಾರದು. ಆದರೆ ಮೋದಿಯಿಂದ ಅದು ಆಗುತ್ತಿದೆ. ಅದಕ್ಕೆ ನನ್ನ ವಿರೋಧವಿದೆ ಎಂದು ಪ್ರಕಾಶ ರಾಜ್ ಹೇಳಿದ್ದಾರೆ.