Scholarship: SSLC ಮತ್ತು PUC ಪಾಸ್ ಆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಬಿಡುಗಡೆ, ಇಂದೇ ಅರ್ಜಿ ಸಲ್ಲಿಸಿ.

ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 % ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Pratibha Puraskar For SSLC And PUC Passed Children: ಕಳೆದ ಎರಡು ತಿಂಗಳಿನಲ್ಲಿ ಎಸ್ ಎಸ್ ಎಲ್ ಸಿ (SSLC) ಹಾಗೂ ಪಿಯುಸಿ (PUC)  ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಮೇ 8 ರಂದು ಹಾಗೂ ಪಿಯುಸಿ ಫಲಿತಾಂಶ ಏಪ್ರಿಲ್ 21 ರಂದು ಪ್ರಕಟವಾಗಿದೆ. ಸಾಕಷ್ಟು ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇದೀಗ ಎಸ್ ಎಸ್ ಎಲ್ ಸಿ ಹಾಗು ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು ಷರತ್ತುಗಳ ಅಡಿಯಲ್ಲಿ ಅರ್ಜಿಯನ್ನ ಹಾಕಲು ಅನುಮತಿಯನ್ನ ನೀಡಲಾಗಿದೆ. ಇನ್ನು SSLC ಮತ್ತು PUC ಪಾಸ್ ಆದ ಮಕ್ಕಳು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

Pratibha Puraskar For SSLC And PUC Passed Children
Image Credit: starofmysore

SSLC ಮತ್ತು PUC ಪಾಸ್ ಆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಬಿಡುಗಡೆ
ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 % ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಧಾರವಾಡ ಜಿಲ್ಲಾ ಅಧ್ಯಕ್ಷ ಎಸ್ .ಎಫ್ ಸಿದ್ದನಗೌಡ ಮಾಹಿತಿ ನೀಡಿದ್ದಾರೆ.

ಪ್ರತಿಭಾ ಪುರಸ್ಕರ ಪಡೆಯಲು ಬೇಕಾಗಿರುವ ಅರ್ಹತೆ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೂ ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು. ನಿಗಮ ಮಂಡಲದಲ್ಲಿ, ಪ್ರಾಧಿಕಾರ, ಸ್ಥಳೀಯ ಸಂಸ್ಥೆ, ವಿಶ್ವ ವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕಗೊಂಡ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ.

SSLC and PUC students
Image Credit: governmentjobsinkarnataka

ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅರ್ಹ ವಿದ್ಯಾರ್ಥಿಗಳು ಮೇ 31 ರ ಒಳಗೆ ಅರ್ಜಿ ಸಲ್ಲಿಸಬೇಕು. https://bit.ly/ksgeapp2023 ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Join Nadunudi News WhatsApp Group