liquor Prohibition: ರಾಜ್ಯದಲ್ಲಿ 3 ದಿನ ಎಲ್ಲಾ ಮದ್ಯದ ಅಂಗಡಿ ಬಂದ್, ಸರ್ಕಾರದ ಆದೇಶ ಬೇಸರದಲ್ಲಿ ಎಣ್ಣೆ ಪ್ರಿಯರು

ರಾಜ್ಯದಲ್ಲಿ ಮೂರೂ ದಿನ ಎಣ್ಣೆ ಅಂಗಡಿ ಬಂದ್ ಮಾಡಲು ಸರ್ಕಾರದ ಆದೇಶ

Prohibition Of Sale Of Liquor: ಸದ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ನಿಯಮಗಳನ್ನು ಪರಿಚಯಿಸುತ್ತಿದೆ ಈಗಾಗಲೇ ರಾಜ್ಯ ಸರ್ಕಾರ ವಿವಿಧ ರೀತಿಯ ಹೊಸ ಹೊಸ ನಿಯಮವನ್ನು ಪರಿಚಯಿಸಿದೆ. ಸದ್ಯ ರಾಜ್ಯ ಸರ್ಕಾರ ರಾಜ್ಯದಲ್ಲಿ ಮಹತ್ವದ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದೆ. ಫೆ. 14 ರಿಂದ ರಾಜ್ಯದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಈ ಹೊಸ ನಿಯಮವು ಮದ್ಯ ಪ್ರಿಯರಿಗೆ ನೇರ ಪರಿಣಾಮ ಬೀರಲಿದೆ.

Prohibition Of Sale Of Liquor
Image Credit: The Economic Times

ಫೆ. 14 ರಿಂದ ಮೂರು ದಿನ ಮದ್ಯ ಮಾರಾಟ ನಿಷೇಧ
ಸದ್ಯ ರಾಜ್ಯ ಸರ್ಕಾರಾ ಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿಯನ್ನು ನೀಡಿದೆ. ಫೆ. 14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ-2024 ಹಿನ್ನೆಲೆಯಲ್ಲಿ ಚುನಾವಣೆ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ನಡೆಯಬೇಕು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಬೇಕು.

ಈ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ ನಿಯಮಗಳು, 1967ರ ನಿಯಮ-10(ಬಿ) ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 135(ಸಿ) ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಮತದಾನದ ಸಂದರ್ಭದಲ್ಲಿ ಫೆ. 14 ರಂದು ಸಂಜೆ 5.00 ರಿಂದ ಫೆಬ್ರವರಿ 17 ರಂದು ಬೆಳಿಗ್ಗೆ 6.00 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗಿದೆ. ಆದ್ದರಿಂದ ಜಿಲ್ಲೆಯಾದ್ಯಂತ ವಿವಿಧ ಮದ್ಯದ ವಹಿವಾಟುಗಳನ್ನು ನಿಷೇಸಧಿಸಿ ಶುಷ್ಕ ದಿನಗಳೆಂದು (Dry Day ) ಘೋಷಣೆ ಮಾಡಿದ್ದಾರೆ.

 Liquor sale banned in Bengaluru for three days from Lovers Day February 14.
Image Credit: Deccanherald

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ: 16.02.2024 ರಂದು ಮತದಾನ ನಡೆಯಲಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ (Right Hand Middle Finger) ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Nadunudi News WhatsApp Group

Join Nadunudi News WhatsApp Group