Exam Rules: 5, 8 ಮತ್ತು 9 ನೇ ತರಗತಿ ಮಕ್ಕಳಿಗೆ ಹೊಸ ಪರಿಕ್ಷಾ ನಿಯಮ, ಶಿಕ್ಷಣ ಇಲಾಖೆಯ ಘೋಷಣೆ.
5, 8 ಮತ್ತು 9 ನೇ ತರಗತಿ ಮಕ್ಕಳಿಗೆ ಹೊಸ ಪರಿಕ್ಷಾ ನಿಯಮ
Public Exam Latest Update: ಈ ಬಾರಿಯ ಶಿಕ್ಷಣ ನೀತಿ ಸಂಪೂರ್ಣ ಬದಲಾವಣೆ ಆಗಿದೆ. ಎನ್ನಬಹುದು. ಶಿಕ್ಷಣ ಇಲಾಖೆ ಹೊಸ ಹೊಸ ನಿಯಮವನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳು ಹೊಸ ಪಠ್ಯಕ್ರಮದ ಪ್ರಕಾರ ಶಿಕ್ಷಣ ಪಡೆಯಬೇಕಿದೆ.
ಇನ್ನು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ. 2023 -24 ಶೈಕ್ಷಣಿಕ ನೀತಿ ಸಂಪೂರ್ಣ ಬದಲಾಗಿದೆ ಎನ್ನಬಹುದು. ಇದೀಗ ಶಾಲಾ ಶಿಕ್ಷಣ ಇಲಾಖೆಯಿಂದ 5, 8 & 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.
5 ,8 ,9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಈಗಾಗಲೇ ಶಿಕ್ಷಣ ಇಲಾಖೆ ಮಕ್ಕಳ ವಾರ್ಷಿಕ ಪರೀಕ್ಷೆಯಲ್ಲಿ ಸಾಕಷ್ಟು ನಿಯಮವನ್ನು ಬದಲಿಸಿದೆ. ಸದ್ಯ ಶಾಲಾ ಶಿಕ್ಷಣ ಇಲಾಖೆಯಿಂದ 5 ,8 ,9 ನೇ ತರಗತಿಯ ವಿದ್ಯಾರ್ಥಿ ಗಳ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ವಿದ್ಯಾರ್ಥಿಗಳಿಗೆ ಯಾವಾಗಿನಿಂದ ವಾರ್ಷಿಕ ಪರೀಕ್ಷೆ ಜಾರಿಯಾಗಲಿದೆ ಎನ್ನುವ ಕುರಿತು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ವರ್ಷದಿಂದಲೇ 5 ,8 ,9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ
ಶಾಲಾ ಶಿಕ್ಷಣ ಇಲಾಖೆಯಿಂದ 5 ,8 ,9 ನೇ ತರಗತಿಯ ವಿದ್ಯಾರ್ಥಿಗಳಿಗೆ Public Exam ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಿಗದಿ ಪಡಿಸಿತ್ತು. ಸದ್ಯ ರಾಜ್ಯ ಸರ್ಕಾರ ಇದಕ್ಕೆ ಅನುಮತಿ ನೀಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆಯನ್ನು ನೀಡಿದೆ.
“ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಾಯ್ದೆ 1966 ರ ಕಲಾಂ 15 (ಎ) (iv ) ರಲ್ಲಿ ಇತರೆ ಪರೀಕ್ಷೆಯನ್ನು ನಡೆಸಲು ಅವಕಾಶವಿದ್ದು, ಅದರಂತೆ 2023 -24 ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 5 ,8 ,9 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ -2 (SA -2) ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಲಾಗಿದೆ” ಎಂದು ಗೆಜೆಟ್ ನಲ್ಲಿ ಅಧಿಕೃತ ಘೋಷಣೆ ಹೊರಡಿಸಲಾಗಿದೆ.