PUC Exam: ದ್ವಿತೀಯ PUC ಮಕ್ಕಳಿಗೆ ಹೊಸ ಪರೀಕ್ಷಾ ನಿಯಮ ಜಾರಿಗೆ, ರಾಜ್ಯದ ಶಿಕ್ಷಣ ಇಲಾಖೆಯ ಮಹತ್ವದ ನಿರ್ಧಾರ.
ಇದೀಗ ಶಿಕ್ಷಣ ಸಚಿವಾಲಯದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮ ಜಾರಿಗೆ ಬಂದಿದೆ.
PUC Board Exam: ಹೊಸ ಶೈಕ್ಷಣಿಕ ವರ್ಷದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿದೆ. ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ನಿಗಾ ವಹಿಸುತ್ತಿದೆ. ಈ ಬಾರಿಯ ಶೈಕ್ಷಣಿಕ ಅವಧಿಗೆ ಹೊಸ ಹೊಸ ಪಠ್ಯಕ್ರಮವನ್ನು ಶಿಕ್ಷಣ ಇಲಾಖೆ ಅನುಸರಿಸುತ್ತಿದೆ.
ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಲಾಗುತ್ತಿದೆ. ಇನ್ನು ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾಭ್ಯಾಸ ಮುಖ್ಯವಾಗಿರುತ್ತದೆ. ಪಿಯುಸಿ ಹಾಗು ಎಸ್ ಎಸ್ ಎಲ್ ಸಿಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದರೆ ಬಹಳ ಬೇಗ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹದು.
ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಇನ್ನು ಇತ್ತೀಚಿಗೆ ಪಿಯುಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಸಾಕಷ್ಟು ಬದಲಾವಣೆಯನ್ನು ತರಲಾಗಿದೆ. ಪಿಯುಸಿ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಕೂಡ ಅನೇಕ ವಿಷಯಗಳನ್ನು ಸೇರಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲಿ ಎನ್ನುವ ಶಿಕ್ಷಣ ಇಲಾಖೆಯ ಉದ್ದೇಶವಾಗಿದೆ.
ಇನ್ನು ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಕೂಡ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಪರೀಕ್ಷೆ ನಡೆಯುವ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ಇದೀಗ ಶಿಕ್ಷಣ ಸಚಿವಾಲಯದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮ ಜಾರಿಗೆ ಬಂದಿದೆ. ಪಿಯುಸಿ ವಿದ್ಯಾರ್ಥಿಗಳು ಈ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದು ಉತ್ತಮ.
ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮ ಅನುಸರಣೆ
2024 ರ ಶೈಕ್ಷಣಿಕ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಯನ್ನು ತರಲಾಗಿದೆ. ಹೊಸ ಪಠ್ಯಕ್ರಮದ ಚೌಕಟ್ಟನ್ನು ಶಿಕ್ಷಣ ಸಚಿವಾಲಯ ಪ್ರಕಟಿಸಿದೆ. 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ಭಾಷೆಗಳನ್ನು ಅಧ್ಯಯನ ಮಾಡಬೇಕಾಗಿದೆ. ಮತ್ತು ಅವುಗಳಲ್ಲಿ ಒಂದು ಭಾರತಾಯಿಯವಾಗಿರಬೇಕು ಎಂದು ಹೇಳಲಾಗಿದೆ.
ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ
ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಗಳಿಸಲು ಅನುವು ಮಾಡಿಕೊಡುವ ಸಲುವಾಗಿ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬೋರ್ಡ್ ಪರೀಕ್ಷೆಗಳು ತಿಳಿವಳಿಕೆಯನ್ನು ಮೌಲ್ಯಮಾಪನ ಮಾಡುತ್ತದೆ.
11 ಮತ್ತು 12 ನೇ ತರಗತಿಗಳಲ್ಲಿನ ವಿಷಯಗಳ ಆಯ್ಕೆಯು ಸ್ಟ್ರೀಮ್ ಗಳಿಗೆ ಸೀಮಿತವಾಗಿರುವುದಿಲ್ಲ. 11 ಮತ್ತು 12 ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳು ಎರಡು ಭಾಷೆಗಳನ್ನು ಕಲಿಯಬೇಕಿದೆ. ಇನ್ನು 2024 ರ ಶೈಕ್ಷಣಿಕ ಅವಧಿಗೆ ಹೊಸ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಮಾಹಿತಿ ನೀಡಿದೆ.