PUC: PUC ಓದುತ್ತಿರುವ ಎಲ್ಲಾ ಮಕ್ಕಳಿಗೆ ಹೊಸ ನಿಯಮ, ಪರೀಕ್ಷೆ ನಿಯಮದಲ್ಲಿ ದೊಡ್ಡ ಬದಲಾವಣೆ.
ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಕ್ಕಳಿಗೆ ಆಂತರಿಕ ಮೌಲ್ಯ ಮಾಪನ ಪರೀಕ್ಷೆ ನಡೆಸಲು ಆದೇಶ ನೀಡಿದ ರಾಜ್ಯ ಸರ್ಕಾರ.
PUC Exam Rules Changes: ರಾಜ್ಯ ಶಿಕ್ಷಣ ಇಲಾಖೆಯಿಂದ ಇದೀಗ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಹೊರ ಬಿದ್ದಿದೆ. 2023-24 ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಕ್ಕಳಿಗೆ ಲಿಖಿತ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
ರಾಜ್ಯ ಸರ್ಕಾರದಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಪ್ರಾಯೋಗಿಕ ತರಗತಿ ಹಾಗು ಪರೀಕ್ಷೆ ಯಾವ ಯಾವ ವಿಷಯಗಳಿಗೆ ಇಲ್ಲವೋ ಅಂದರೆ ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಭಾಷಾ ವಿಷಯಗಳು ಹಾಗು ಕಲಾ ವಾಣಿಜ್ಯ ವಿಭಾಗದ ಐಚ್ಛಿಕ ವಿಷಯಗಳು ಇನ್ನಿತರೇ ಕೋರ್ ವಿಷಯಗಳಿಗೆ ಇನ್ನುಮುಂದೆ 80:20 ಅನುಪಾತದಲ್ಲಿ ಅಂದರೆ 80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯ ಮಾಪನಕ್ಕೆ ಅವಕಾಶ ನೀಡಲಾಗಿದೆ.
ಪಿಯು ಮಂಡಳಿಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅದರಲ್ಲಿ ಪಿಯುಸಿಯಲ್ಲಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ಭಾಷಾ ವಿಷಯಗಳು ಹಾಗು ಕಲಾ ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗೆ 2023-24 ನೇ ಸಾಲಿನಿಂದ 20 ಅಂಕಗಳಿಗೆ ಅಂಕರಿಕ ಮೌಲ್ಯ ಮಾಪನ ಪರೀಕ್ಷೆ ನಡೆಸಲು ಅವಕಾಶ ಕೇಳಿತ್ತು. ಇದಕ್ಕೆ ಸರ್ಕಾರ ಒಪ್ಪಿಗೆ ಸಹ ಸೂಚಿಸಿದೆ.
ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನುಮುಂದೆ ಆಂತರಿಕ ಮೌಲ್ಯಮಾಪನ ಪರೀಕ್ಷೆ
ಈ ಹಿನ್ನಲೆಯಲ್ಲಿ ಇನ್ನುಮುಂದೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಷಾ ಹಾಗು ಕೋರ್ ವಿಷಯಗಳಲ್ಲಿ ಕಾಲೇಜು ಹಂತದಲ್ಲೇ ಬರೆಯುವ ಎರಡು ಕಿರು ಪರೀಕ್ಷೆಗಳು ಮತ್ತು ಅರ್ಥವಾರ್ಷಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳಲ್ಲಿ ಉತ್ತಮವಾದ ಎರಡನ್ನು 10 ಅಂಕಗಳಿಗೆ ಪರಿವರ್ತಿಸಿ ಅವುಗಳ ಸರಾಸರಿ ಅಂಕಗಳನ್ನು ತೆಗೆದುಕೊಳ್ಳಲಾಗುತ್ತದೆ.
ಅದೇ ರೀತಿ ಪ್ರಾಜೆಕ್ಟ್ ಹಾಗು ಅಸೈನ್ ಮೆಂಟ್ ಪ್ರಸ್ತುತಪಡಿಸುವಿಕೆಗೆ ತಲಾ 5 ರಂತೆ ಒಟ್ಟು 10 ಅಂಕ ಪರಿಗಣಿಸಿ ಫಲಿತಾಂಶ ನೀಡುವಾಗ 80 ಅಂಕಕ್ಕೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನವನ್ನು ಮಾಡಲಾಗುತ್ತದೆ.