PUC Supplementory: ಮೇ 23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಹೀಗಿದೆ ವೇಳಾಪಟ್ಟಿ.
ಕರ್ನಾಟಕ PUC ಪುರಖ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಆಗಿದ್ದು ವಿದ್ಯಾರ್ಥಿಗಳು ಗಮನ ಕೊಡಬೇಕು.
PUC Supplementory Exam Time Table: ಪಿಯುಸಿ ಫಲಿತಾಂಶದಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಹೊಸ ಸುದ್ದಿ ಒಂದು ಹೊರ ಬಿದ್ದಿದೆ. ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ದಿನಾಂಕ ನಿಗದಿಯಾಗಿದೆ. ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯ (PUC Supplementary Exam Time Table) ಬಗ್ಗೆ ಮಾಹಿತಿ ತಿಳಿಯೋಣ.
ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ
ಪಿಯುಸಿ ಫಲಿತಾಂಶದಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆ ಬರೆಯಲು ಹೊಸ ಮಾಹಿತಿ ಒಂದನ್ನು ತಿಳಿದುಕೊಳ್ಳಬೇಕು. ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ http://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.
PUC ಪೂರಕ ಪರೀಕ್ಷೆ ದಿನಾಂಕ ಪ್ರಕಟ
ಇನ್ನು ಮೇ 23 ರಿಂದ ಜೂನ್ 3 ರವರೆಗೆ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.15 ರಿಂದ ಮದ್ಯಾಹ್ನ 1.30 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
*ಮೇ 23, ಮಂಗಳವಾರ-ಕನ್ನಡ, ಅರೇಬಿಕ್
*ಮೇ 24,ಬುಧವಾರ-ಐಚ್ಚಿಕ ಕನ್ನಡ, ರಸಾಯನಶಾಸ್ತ್ರ ಮೂಲ ಗಣಿತ
*ಮೇ 25, ಶುಕ್ರವಾರ-ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಹಣಕ ವಿಜ್ಞಾನ.
*ಮೇ 27, ಶನಿವಾರ-ಇತಿಹಾಸ, ಸಂಖ್ಯಾಶಾಸ್ತ್ರ
*ಮೇ 29,ಸೋಮವಾರ-ಹಿಂದಿ
*ಮೇ 30, ಮಂಗಳವಾರ- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ.
*ಮೇ 31, ಬುಧವಾರ- ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
*ಜೂನ್ 1, ಗುರುವಾರ- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
*ಜೂನ್ 2, ಶುಕ್ರವಾರ- ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
* ಜೂನ್ 3 , ಶನಿವಾರ-ಅರ್ಥಶಾಸ್ತ್ರ, ಜೀವಶಾಸ್ತ್ರ.