PUC Exam: ದ್ವಿತೀಯ PUC ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ, ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.

PUC ಫೇಲ್ ಆದ ಮಕ್ಕಳ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಆಗಿದೆ.

PUC Supplementory Exam Time Table: ಈಗಾಗಲೇ ಪಿಯುಸಿ (PUC) ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪಿಯುಸಿ ಫಲಿತಾಂಶದಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಹೊಸ ಸುದ್ದಿ ಒಂದು ಹೊರ ಬಿದ್ದಿದೆ.

ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ದಿನಾಂಕ ನಿಗದಿಯಾಗಿದೆ. ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯ (PUC Supplementary Exam Time Table) ಬಗ್ಗೆ ಮಾಹಿತಿ ತಿಳಿಯೋಣ.

Secondary PUC Failed Children Supplementary Exam Schedule Released.
Image Credit: shemford

ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ
ಪಿಯುಸಿ ಫಲಿತಾಂಶದಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆ ಬರೆಯಲು ಹೊಸ ಮಾಹಿತಿ ಒಂದನ್ನು ತಿಳಿದುಕೊಳ್ಳಬೇಕು. ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆದ ವಿದ್ಯಾರ್ಥಿಗಳು ಸಿ ಇ ಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ಮಾಹಿತಿ ನೀಡಿದ್ದಾರೆ.

ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂಬ ಕಾರಣ ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಬೇಕು ಎಂದು ಪಿಯು ಬೋರ್ಡ್ ಸ್ಪಷ್ಟಪಡಿಸಿದೆ.

Supplementary examination schedule for second PUC failed students has been released.
Image Credit: livemint

ಅಲ್ಲದೆ ಸಿಇಟಿ ಪರೀಕ್ಷೆಗೆ ಹಾಜರಾದರೆ ಮಾತ್ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣನೆ ಮಾಡಲಾಗುತ್ತದೆ ಎಂದು ತಿಳಿಸಿದೆ.

Join Nadunudi News WhatsApp Group

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ http://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.

PUC ಪೂರಕ ಪರೀಕ್ಷೆ ದಿನಾಂಕ ಪ್ರಕಟ
ಇನ್ನು ಮೇ 23 ರಿಂದ ಜೂನ್ 3 ರವರೆಗೆ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.15 ರಿಂದ ಮದ್ಯಾಹ್ನ 1.30 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
*ಮೇ 23, ಮಂಗಳವಾರ-ಕನ್ನಡ, ಅರೇಬಿಕ್
*ಮೇ 24,ಬುಧವಾರ-ಐಚ್ಚಿಕ ಕನ್ನಡ, ರಸಾಯನಶಾಸ್ತ್ರ ಮೂಲ ಗಣಿತ
*ಮೇ 25, ಶುಕ್ರವಾರ-ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಹಣಕ ವಿಜ್ಞಾನ.

2nd PUC Supplementary Exam Schedule Information and Date Announced
Image Credit: financialexpress

*ಮೇ 27, ಶನಿವಾರ-ಇತಿಹಾಸ, ಸಂಖ್ಯಾಶಾಸ್ತ್ರ
*ಮೇ 29,ಸೋಮವಾರ-ಹಿಂದಿ
*ಮೇ 30, ಮಂಗಳವಾರ- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ.
*ಮೇ 31, ಬುಧವಾರ- ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
*ಜೂನ್ 1, ಗುರುವಾರ- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
*ಜೂನ್ 2, ಶುಕ್ರವಾರ- ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
* ಜೂನ್ 3 , ಶನಿವಾರ-ಅರ್ಥಶಾಸ್ತ್ರ, ಜೀವಶಾಸ್ತ್ರ.

Join Nadunudi News WhatsApp Group