Radhika Pandit: 5 ವರ್ಷಗಳ ನಂತರ ಮತ್ತೆ ಖುಷಿ ಸುದ್ದಿ ಹಂಚಿಕೊಂಡ ರಾಧಿಕಾ ಪಂಡಿತ್, ವಿಶ್ ಮಾಡಿದ ಅಭಿಮಾನಿಗಳು.
ಐದು ವರ್ಷಗಳ ಹಿಂದೆ ಪೋಸ್ಟ್ ಮತ್ತೆ ರಾಧಿಕಾ ಪಂಡಿತ್ ಹಂಚಿಕೊಂಡಿದ್ದು ಮತ್ತೆ ಚಿತ್ರರಂಗಕ್ಕೆ ಬರುವ ಬಗ್ಗೆ ಅನುಮಾನ ಮೂಡಿಸಿದ್ದಾರೆ.
Radhika Pandit Latest Post: ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಾಧಿಕಾ ಪಂಡಿತ್ (Radhika Pandit) ಇದೀಗ ಸುದ್ದಿಯಲ್ಲಿದ್ದಾರೆ. ನಟಿ ರಾಧಿಕಾ ಪಂಡಿತ್ ತಮ್ಮ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದಿದ್ದಾರೆ.
ಮದುವೆಯ ನಂತರ ನಟಿ ರಾಧಿಕಾ ಪಂಡಿತ್ ಸಿನಿಮಾರಂಗದಿಂದ ದೂರ ಉಳಿದಿದ್ದಾರೆ. ಮಕ್ಕಳು, ಗಂಡ ಸಂಸಾರ ನಟ ನಟಿ ರಾಧಿಕಾ ಪಂಡಿತ್ ದಾಂಪತ್ಯ ಜೀವನದಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.
ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿ ಬರಲಿದ್ದಾರೆ ನಟಿ ರಾಧಿಕಾ ಪಂಡಿತ್
ನಟಿ ರಾಧಿಕಾ ಪಂಡಿತ್ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದ್ದಾರೆ. ಸಾಂಸಾರಿಕ ಜೀವನದಲ್ಲಿ ಬ್ಯುಸಿಯಾಗಿರುವ ನಟಿ ರಾಧಿಕಾ ಪಂಡಿತ್ ಅವರು ಅಭಿಮಾನಿಗಳ ಜೊತೆ ವಯಕ್ತಿಕ ವಿಚಾರಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ಪಂಡಿತ್ 5 ವರ್ಷದ ಹಿಂದಿನ ಫೋಟೋ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದು ತಾವು ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟಿರುವ ಬಗ್ಗೆ ಮೆಲುಕು ಹಾಕಿದ್ದಾರೆ.
View this post on Instagram
ಈ ಫೋಟೋ ನೋಡಿದ ಅಭಿಮಾನಿಗಳು ನಟಿ ರಾಧಿಕಾ ಮತ್ತೆ ನಟನೆಗೆ ಮರಳಿ ಬರಲಿದ್ದಾರೆ ಎಂದು ತಿಳಿದುಕೊಂಡಿದ್ದಾರೆ. ಅಲ್ಲದೆ ಪ್ರಶ್ನೆಗಳ ಸುರಿಮಳೆ ಫೋಟೋಗೆ ಕಾಮೆಂಟ್ ಮಾಡುವ ಮೂಲಕ ಕೇಳಿದ್ದಾರೆ.
ನಟಿ ರಾಧಿಕಾ ಪಂಡಿತ್
ನಟಿ ರಾಧಿಕಾ ಪಂಡಿತ್ ಮೊಗ್ಗಿನ ಮನಸ್ಸು ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ತಮ್ಮ ಮೊದಲ ಸಿನಿಮಾದ ಮೂಲಕವೇ ನಟಿ ರಾಧಿಕಾ ಪಂಡಿತ್ ಅವರು ಜನರ ಮನ ಗೆದ್ದಿದ್ದಾರೆ. ನಂತರ ಹಲವು ಸಿನಿಮಾದಲ್ಲಿ ನಾಯಕಿ ಪಾತ್ರಕ್ಕೆ ಜೀವ ತುಂಬುವ ಮೂಲಕ ಕೋಟಿ ಕೋಟಿ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಇನ್ನು ನಟಿ ರಾಧಿಕಾ ಪಂಡಿತ್ ಮತ್ತೆ ಸಿನಿಮಾಗಳಲ್ಲಿ ನಟಿಸಬೇಕು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.