Rahul Gandhi: ಮೋದಿಯನ್ನ ಕಂಡರೆ ದೇವರಿಗೂ ಕನ್ಫ್ಯೂಸ್ ಆಗುತ್ತದೆ, ಹೀಗಂದಿದ್ದೇಕೆ ರಾಹುಲ್ ಗಾಂಧಿ.

ನರೇಂದ್ರ ಮೋದಿಯವರನ್ನ ನೋಡಿದರೆ ದೇವರಿಗೂ ಕೂಡ ಗೊಂದಲ ಆಗುತ್ತದೆ ಎಂದು ಹೇಳಿಕೆ ನೀಡಿದ ರಾಹುಲ್ ಗಾಂಧಿ.

Rahul Gandhi About Narendra Modi: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (Rahul Gandhi)  ಅವರು ಯಾವಾಗಲೂ ಟೀಕೆಯ ಮಾತುಗಳನ್ನು ಆಡುತ್ತಾ ಇರುತ್ತಾರೆ. ಇದೀಗ ಮತ್ತೊಂದು ಮಾತನ್ನು ಆಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ದೇವರೊಂದಿಗೆ ಚರ್ಚೆಗೆ ಕೂರಿಸಿದರೆ ಅವರು ಬ್ರಹ್ಮಾಂಡ ಕಾರ್ಯನಿರ್ವಹಿಸುವ ಬಗ್ಗೆ ಮಾಡುವ ವಿವರಣೆಗೆ ದೇವರು ನಾನೇನು ಸೃಷ್ಟಿ ಮಾಡಿದ್ದೇನೆ ಎಂಬ ಗೊಂದಲಕ್ಕೆ ಒಳಗಾಗುತ್ತಾನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

Rahul Gandhi said that even God gets confused if he sees Narendra Modi.
Image Credit: thehansindia

ನರೇಂದ್ರ ಮೋದಿ ಬಗ್ಗೆ ಟೀಕೆಯ ಮಾತಾಡಿದ ರಾಹುಲ್ ಗಾಂಧಿ
ನಿನ್ನೆ ಸ್ಯಾನ್ ಫ್ರಾನ್ಸಿಸ್ಕೊದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು ಬಿಜೆಪಿಗರು ವಿಜ್ಞಾನಿಗಳಿಗೆ ವಿಜ್ಞಾನವನ್ನು ವಿವರಿಸುತ್ತಾರೆ. ಇತಿಹಾಸಕಾರರಿಗೆ ಇತಿಹಾಸವನ್ನು ವಿವರಿಸುತ್ತಾರೆ. ಅಲ್ಲದೆ ಸೈನ್ಯ ಹಾಗು ವಾಯುಪಡೆಗೂ ಪಾಠ ಮಾಡಲು ಹೋಗುತ್ತಾರೆ. ಆದರೆ ಅವರಿಗೆ ಯಾವ ವಿಷಯದ ಬಗ್ಗೆಯೂ ತಿಳುವಳಿಕೆ ಇಲ್ಲ ಎಂದು ಕುಟುಕಿಸಿದ್ದಾರೆ.

ಬಿಜೆಪಿ ಪಕ್ಷದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ
ದೇಶದಲ್ಲಿ ಆರ್ ಎಸ್ ಎಸ್ ಹಾಗು ಬಿಜೆಪಿ ಸೇರಿಕೊಂಡು ಸಂವಿಧಾನದ ಮೇಲೆ ದಾಳಿ ನಡೆಸುತ್ತಿವೆ. ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲ ಶಕ್ತಿಯನ್ನು ಬಳಸಿತ್ತು. ಅಲ್ಲದೆ ಜನರಿಗೆ ಬೆದರಿಕೆ ಹಾಕುವ ಮೂಲಕ ಸರ್ಕಾರೀ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿತ್ತು. ಆದರೂ ಇದರಿಂದ ಏನು ಪ್ರಯೋಜನವಾಗಲಿಲ್ಲ. ಯಾತ್ರೆಯ ಪ್ರಭಾವ ಇನ್ನು ಹೆಚ್ಚಾಯಿತು ಎಂದಿದ್ದಾರೆ.

Rahul Gandhi said that even God gets confused if he sees Narendra Modi.
Image Credit: thewire

ಇನ್ನು ಭಾರತ್ ಜೋಡೋ ಯಾತ್ರೆಯು ವಾತ್ಸಲ್ಯ, ಗೌರವ ಮತ್ತು ನಮ್ರತೆಯ ಮನೋಭಾವದಿಂದ ಆರಂಭಗೊಂಡಿತು. ಗುರುನಾನಕ್, ಗುರು ಬಸವಣ್ಣ, ನಾರಾಯಣ ಗುರು ಸೇರಿದಂತೆ ಎಲ್ಲ ಆಧ್ಯಾತ್ಮಿಕ ನಾಯಕರ ಇತಿಹಾಸ ಓದಬೇಕು. ಅವರು ಸಹ ಇದೆ ರೀತಿಯಲ್ಲಿ ರಾಷ್ಟ್ರವನ್ನು ಒಂದು ಗೂಡಿಸಿದ್ದಾರೆ. ಆದರೆ ಬಿಜೆಪಿ ಮತ್ತು ಆರ್ ಎಸ್ ಎಸ್ ದೇಶವನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

Join Nadunudi News WhatsApp Group

Join Nadunudi News WhatsApp Group