Job Alert: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್, ಭಾರತೀಯ ರೈಲ್ವೆ ಇಲಾಖೆಯಲ್ಲಿ 9000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯಲ್ಲಿ 9000 ಹುದ್ದೆಗಳಿಗೆ ಅರ್ಜಿ ಆಹ್ವಾನ

Railway Recruitment 2024: ದೇಶದಲ್ಲಿ ವಿವಿಧ ಸಂಸ್ಥೆಗಳು ಆಗಾಗ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಮಾಡುತ್ತಿರುತ್ತದೆ. ನಿರುದ್ಯೋಗಿಗಳು ಈ ಅವಕಾಶವನ್ನು ಬಳಸಿಕೊಂಡು ಉದ್ಯೋಗವನ್ನು ಕಂಡುಕೊಳ್ಳಬಹುದು. ಸದ್ಯ ಭಾರತೀಯ ರೈಲ್ವೆ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಕಂಡುಕೊಳ್ಳಲು ಒಂದೊಳ್ಳೆ ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ರೈಲ್ವೆ ಇಲಾಖೆಯು ನಿರುದ್ಯೋಗಿಗಳಿಗಾಗಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗವನ್ನು ಕಂಡುಕೊಳ್ಳಬಹುದು. ಈ ಬಾರಿ ರೈಲ್ವೆ ಇಲಾಖೆಯು ಗರಿಷ್ಟ ಸಂಖ್ಯೆಯಲ್ಲಿ ಅರ್ಜಿ ಆಹ್ವಾನ ಮಾಡಿದೆ. ಹೆಚ್ಚಿನ ನಿರುದ್ಯೋಗಿಗಳು ಇಲ್ಲಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ರೈಲ್ವೆ ಇಲಾಖೆಯ ಅರ್ಜಿ ಆಹ್ವಾನದ ಬಗ್ಗೆ ಮಾಹಿತಿ ಇಲ್ಲಿದೆ.

Railway Recruitment 2024
Image Credit: India

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್
ಸದ್ಯ ಭಾರತೀಯ ರೈಲ್ವೆ 9000 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಆದಷ್ಟು ಬೇಗ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಅರ್ಜಿ ಆಹ್ವಾನದ ಜೊತೆಗೆ ಇಲಾಖೆಯು ಅರ್ಜಿದಾರರ ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಿದೆ. ರೈಲ್ವೆ ನೇಮಕಾತಿ ಮಂಡಳಿ 9,000 Technician ಗಳಿಗೆ ಅಧಿಸೂಚನೆ ಹೊರಡಿಸಿದೆ.

ಭಾರತೀಯ ರೈಲ್ವೆ ಇಲಾಖೆಯಲ್ಲಿ 9000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ರೈಲ್ವೆ 9,000 ಹುದ್ದೆಗಳಿಗೆ ನೀವು ಮಾರ್ಚ್ 9 ರಿಂದ ಏಪ್ರಿಲ್ 8 ರವರೆಗೆ RRB Website ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ರೈಲ್ವೇ ನೇಮಕಾತಿ ಮಂಡಳಿ (RRB) ದೇಶಾದ್ಯಂತ ವಿವಿಧ ವಲಯಗಳಲ್ಲಿ ಒಟ್ಟು 9,000 ಹುದ್ದೆಗಳನ್ನು ನೇಮಿಸಿಕೊಳ್ಳಲಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ವಿವರ ತಿಳಿಯಲು ರೈಲ್ವೆ ಇಲಾಖೆಯ ಅಧಿಕೃತ Website ಗೆ ಭೇಟಿ ನೀಡಬಹುದು.

Indian Railway New Updates
Image Credit: Zeebiz

ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ಅರ್ಜಿ ಸಲ್ಲಿಸಲು ನೀವು http://www.recruitmentrrb.in/ ಅಧಿಕೃತ Website ಗೆ ಭೇಟಿ ನೀಡಬಹುದು. ಇಲ್ಲಿ ಕೇಳದಾದ ಎಲ್ಲ ಅಗತ್ಯ ಮಾಹಿತಿಯನ್ನು ನೀಡಿ Online ನಲ್ಲಿ ಅರ್ಜಿ ಸಲ್ಲಿಸಬಹುದು. ಇನ್ನು RRB Technician ಗ್ರೇಡ್ 1 ಸಿಗ್ನಲ್ ಅರ್ಜಿದಾರರ ವಯ್ಸ್ಸು 18 ರಿಂದ 36 ವರ್ಷವಾಗಿದೆ ಹಾಗೂ RRB Technician ಗ್ರೇಡ್ 3 ಸಿಗ್ನಲ್ ಅರ್ಜಿದಾರರ ವಯಸ್ಸು 18 ರಿಂದ 33 ವರ್ಷ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಪಂಗಡವರು ಅರ್ಜಿ ಶುಲ್ಕ 250 ರೂ. ಆಗಿದ್ದು, ಇನ್ನಿತರ ಅಭ್ಯರ್ಥಿಗಳು ರೂ. 500 ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Join Nadunudi News WhatsApp Group