Raita Vidya Nidhi: ರೈತರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ “ರೈತ ವಿದ್ಯಾನಿಧಿ” ವಿದ್ಯಾರ್ಥಿವೇತನ ಬಿಡುಗಡೆ, ಈ ರೀತಿ ಅರ್ಜಿ ಸಲ್ಲಿಸಿ.

ರೈತರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ ಬಿಡುಗಡೆ

Raita Vidya Nidhi Scholarship For Farmers Children’s: ಸದ್ಯ ರಾಜ್ಯ ಸರ್ಕಾರ ರೈತರ ಕೃಷಿ ಬೆಳವಣಿಗಾಗಿ ಸಾಕಷ್ಟು ಸೌಲಭ್ಯವನ್ನು ನೀಡುವುದರ ಜೊತೆಗೆ ರೈತರಿಗೆ ಆರ್ಥಿಕವಾಗಿ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಕೂಡ ಜಾರಿಗೊಳಿಸಿದೆ. ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಒಂದು ಹೆಜ್ಜೆ ಮುಂದೆ ಇಟ್ಟು ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲು ನಿರ್ಧರಿಸಿದೆ.

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ ನೀಡಲು ವಿಶೇಷ ಯೋಜನೆಯನ್ನೇ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ರಾಜ್ಯದ ರೈತರ ಮಕ್ಕಳು ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿಕೊಳ್ಳಬಹುದು. ರಾಜ್ಯ ಸರ್ಕಾರ ಹೊಸ ಯೋಜನೆಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ವಿವರ ಇದೆ.

Raita Vidya Nidhi Scholarship for Students
Image Credit: Japaship

ರೈತರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ “ರೈತ ವಿದ್ಯಾನಿಧಿ” ವಿದ್ಯಾರ್ಥಿವೇತನ ಬಿಡುಗಡೆ
ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿಗಳ Raita Vidyanidhi ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ Raita Vidyanidhi ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ಮಾಹಿತಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನ ಪಡೆಯುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ ರೂ. 2.5 ಲಕ್ಷ ಮೀರಬಾರದು. ಸಾಮಾನ್ಯ ವರ್ಗದ ಅಡಿಯಲ್ಲಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ವಿದ್ಯಾರ್ಥಿಗಳ ಲಾಗಿನ್‌ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಇನ್ನು ವಿದ್ಯಾರ್ಥಿಗಳು ಪ್ರಮಾಣಪತ್ರವನ್ನು ಫೆಬ್ರವರಿ 29 ರೊಳಗೆ Upload ಮಾಡುವುದು ಅಗತ್ಯವಾಗಿದೆ.

Raita Vidyanidhi Scholarship
Image Credit: Easemywatch

ಇಂತಹ ವಿದ್ಯಾರ್ಥಿಗಳು ರೈತ ವಿದ್ಯಾನಿಧಿ ಯೋಜನೆಯ ಲಾಭ ಪಡೆಯಲು ಅರ್ಹರಲ್ಲ
2023-24ನೇ ಸಾಲಿನಲ್ಲಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಯಡಿಯಲ್ಲಿ ಸ್ಕಾಲರ್‌ ಶಿಪ್ ಪಡೆಯುವ ವಿದ್ಯಾರ್ಥಿಗಳು “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಕಾರ್ಯಕ್ರಮ ಮತ್ತು “ಭೂರಹಿತ ಕೃಷಿ ಕಾರ್ಮಿಕರ ವಿದ್ಯಾರ್ಥಿವೇತನ”ವನ್ನು ಪಡೆಯಲು ಅರ್ಹರಾಗಿರುವುದಿಲ್ಲ.

Join Nadunudi News WhatsApp Group

Join Nadunudi News WhatsApp Group