Congress Guarantees: ಮತ್ತೆ 7 ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರಸ್, ಪ್ರತಿ ಮಹಿಳೆಗೆ 10 ಸಾವಿರ ಮತ್ತು ಮಕ್ಕಳಿಗೆ ಲ್ಯಾಪ್ ಟಾಪ್.
ಚುನಾವಣೆಯ ಕಾರಣ ಮತ್ತೆ ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರೆಸ್.
Congress Govt Guarantee: ದೇಶದಲ್ಲಿ ವಿವಿಧ ರಾಜ್ಯಗಳು ಚುನಾವಣಾ ಸಮಯದಲ್ಲಿ ವಿವಿಧ ಯೋಜನೆಗಳನ್ನು ಘೋಷಿಸುತ್ತ ಇರುತ್ತವೆ. ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ಅಧಿಕಾರವನ್ನು ಪಡೆಯಲು ಉಚಿತ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು.
ಸದ್ಯ ದೇಶದ ವಿವಿಧ ರಾಜ್ಯದಲ್ಲಿ ಚುನಾವಣಾ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಸರ್ಕಾರ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಸದ್ಯ ಕಾಂಗ್ರೆಸ್ ಸರ್ಕಾರ ಮತ್ತೆ 7 ಯೋಜನೆಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರದ 7 ಯೋಜನೆಗಳು ಯಾವುವು…? ಎನ್ನುವ ಬಗ್ಗೆ ವಿವರ ತಿಳಿಯೋಣ.
ಮತ್ತೆ 7 ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರೆಸ್
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ವಿವಿಧ ಯೋಜನೆಯನ್ನು ಜನರಿಗಾಗಿ ಪರಿಚಯಿಸುತ್ತಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಲಾಟ್ ಟಾಪ್, ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ (OPS ) ಜಾರಿ, 15 ಲಕ್ಷ ವಿಮ ರಕ್ಷಣೆಯ ಬಗ್ಗೆ ಈಗಾಗಲೇ ಸರ್ಕಾರ ಘೋಷಣೆ ಮಾಡಿದೆ. ಇದೀಗ ರಾಜಸ್ಥಾನ್ ಮುಖ್ಯಮಂತ್ರಿ ಗೆಹ್ಲೋಟ್ ಹೊಸದಾಗಿ 7 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ 7 ಗ್ಯಾರಂಟಿ ಯೋಜನೆಗಳ ಸಂಪೂರ್ಣಮಾಹಿತಿ ಇಲ್ಲಿದೆ.
ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳು ಯಾವುವು..?
1. ರಾಜ್ಯ ಸರ್ಕಾರವು ಪ್ರತಿ ಕಿಲೋಗ್ರಾಮ್ ಗೆ 2 ರೂ. ನಂತೆ ಹಸುವಿನ ಸಗಣಿ ಖರೀದಿಸುತ್ತದೆ ಎಂದು ಘೋಷಣೆ ಹೊರಡಿಸಿದೆ.
2. ಇನ್ನು ರಾಜ್ಯದ 1 ಕೋಟಿ ಮಹಿಳೆಯರಿಗೆ ಮೂರು ವರ್ಷಗಳವೆರೆಗೆ ಉಚಿತ ಇಂಟರ್ನೆಟ್ ನೀಡುವುದಾಗಿ ಘೋಷಿಸಿದೆ.
3. ರಾಜ್ಯದ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಫೋನ್ ನೀಡುವುದಾಗಿ ಸರ್ಕಾರ ಘೋಷಿಸಿದೆ.
4. ರಾಜ್ಯದ ಪ್ರತಿ ವಿದ್ಯಾರ್ಥಿಗೆ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದೆ.
5. ಇನ್ನು 1.05 ಕೋಟಿ ಕುಟುಂಬಗಳಿಗೆ 500 ರೂ. ಗೆ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುವುದು ಎಂದು ಘೋಷಿಸಿದೆ.
6. ಹಾಗೆಯೆ ಅರ್ಹ ಮಹಿಳೆಯರಿಗೆ ವಾರ್ಷಿಕ 10 ಸಾವಿರ ಗೌರವ ಧನ ನೀಡುವುದಾಗಿ ಘೋಷಣೆ ಹೊರಡಿಸಿದೆ.
7. ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದೆ.