Rashmika Mandanna: ನಾವಿಬ್ಬರು ಏನು ಎನ್ನುವುದು ನಮಗೆ ಗೊತ್ತಿದೆ, ಐಶ್ವರ್ಯ ರಾಜೇಶ್ ಜೊತೆ ಸ್ನೇಹಕ್ಕೆ ಕೈಚಾಚಿದ ನಟಿ ರಶ್ಮಿಕಾ.
ಈ ಎಲ್ಲ ವಿಷಯವನ್ನು ಗಮನಿಸಿದ ರಶ್ಮಿಕಾ ಮಂದಣ್ಣ ಕಾಲೆಳೆದ ನಾಟಿಗೆ ಸ್ನೇಹದ ಹಸ್ತ ಚಾಚಿ, ಫರ್ಹಾನ್ ಸಿನಿಮಾ ದಾಖಲೆ ರೀತಿಯಲ್ಲಿ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ.
Rashmika Mandanna And Aishwarya Rajesh: ಕನ್ನಡ ಚಿತ್ರರಂಗದಿಂದ ಪರಿಚಿತರಾದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಂತರ ಬಹುಭಾಷಾ ನಟಿಯಾಗಿ ಮಿಂಚಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಜನಪ್ರಿಯತೆ ಪಡೆದ ನಟಿ.
ನಂತರ ಬಹುಬೇಡಿಕೆಯ ನಟಿಯಾಗಿ ಬೇರೆ ಬೇರೆ ಭಾಷೆಯ ಸಿನಿಮಾದಲ್ಲಿ ನಟಿಸಿದರು. ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ನ್ಯಾಷನಲ್ ಕ್ರಶ್ ಆಗಿ ಮಿಂಚುತ್ತಿದ್ದಾರೆ.
ಶ್ರೀವಲ್ಲಿ ಪಾತ್ರದ ಬಗ್ಗೆ ಟ್ರೊಲ್ ಆದ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಐಶ್ವರ್ಯ ರಾಜೇಶ್
ಈ ನಡುವೆ ಟಾಲಿವುಡ್ ನಟಿ ಐಶ್ವರ್ಯ ರಾಜೇಶ್ (Aishwarya Rajesh) ಅವರು ಸಂದರ್ಶನ ಒಂದರಲ್ಲಿ ಪುಷ್ಪ ಸಿನಿಮಾದಲ್ಲಿ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣಕ್ಕಿಂತಲೂ ಚೆನ್ನಾಗಿ ಮಾಡುತ್ತಿದ್ದೆ ಎಂಬ ಮಾತನ್ನು ಆಡಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಟ್ರೊಲ್ ಸಹ ಆಗಿದ್ದರು. ಆದರೆ ಅವರು ಈ ಸುದ್ದಿಗಳಿಗೆ ಸ್ಪಷ್ಟನೆ ಸಹ ನೀಡಿದ್ದಾರೆ.
ನಿಮ್ಮ ನೆಚ್ಚಿನ ಪಾತ್ರ ಯಾವುದು, ಯಾವ ರೀತಿಯ ಪಾತ್ರದಲ್ಲಿ ಕಾಣಲು ಬಯಸುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಪುಷ್ಪ ಸಿನಿಮಾದ ಶ್ರೀವಲ್ಲಿ ರೀತಿಯ ಪಾತ್ರಗಳು ಎಂದರೆ ನನಗೆ ಇಷ್ಟ. ಆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇನೆ ಎಂದು ಹೇಳಿದ್ದೆ ಎಂದಿದ್ದಾರೆ.
ನಟಿ ಐಶ್ವರ್ಯ ರಾಜೇಶ್ ಜೊತೆ ಸ್ನೇಹಕ್ಕೆ ಕೈಚಾಚಿದ ನಟಿ ರಶ್ಮಿಕಾ
ಈ ಎಲ್ಲ ವಿಷಯವನ್ನು ಗಮನಿಸಿದ ರಶ್ಮಿಕಾ ಮಂದಣ್ಣ ಕಾಲೆಳೆದ ನಟಿಗೆ ಸ್ನೇಹದ ಹಸ್ತ ಚಾಚಿ, ಫರ್ಹಾನ್ ಸಿನಿಮಾ ದಾಖಲೆ ರೀತಿಯಲ್ಲಿ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಹಾಯ್ ಲವ್ ಯು ಎಂದು ಶುರು ಮಾಡಿ, ನಾವಿಬ್ಬರು ಏನು ಎನ್ನುವುದು ನಮಗೆ ಗೊತ್ತಿದೆ.
ನಿಮ್ಮ ಬಗ್ಗೆ ನನಗೆ ಪ್ರೀತಿ ಹಾಗು ಗೌರವವಿದೆ. ನೀವು ಏನು ಹೇಳಿದ್ದಿರಿ ಎನ್ನುವುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ನಿಮ್ಮ ಫರ್ಹಾನ್ ಚಿತ್ರಕ್ಕೆ ಶುಭವಾಗಲಿ ಎಂದು ಹೇಳುವ ಮೂಲಕ ನಟಿ ರಶ್ಮಿಕಾ ವಿವಾದಗಳಿಗೆ ಬ್ರೇಕ್ ಹಾಕಿದ್ದಾರೆ.