Ration Card: ಸೆಪ್ಟೆಂಬರ್ 30 ರ ಒಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ BPL ರೇಷನ್ ಕಾರ್ಡ್, ಸರ್ಕಾರದ ಆದೇಶ.

ಸೆಪ್ಟೆಂಬರ್ 30 ರೊಳಗೆ ಈ ಕೆಲಸ ಮಾಡದಿದ್ದರೆ, ಸರ್ಕಾರದಿಂದ ಸಿಗುವ ಉಚಿತ ರೇಷನ್ ನಿಂದ ವಂಚಿತರಾಗಬೇಕಾಗುತ್ತದೆ.

Ration Card And Aadhaar Card Link Update: ಪ್ರಸ್ತುತ ರಾಜ್ಯದಲ್ಲಿ ರೇಷನ್ ಕಾರ್ಡ್ (Ration Card) ಸಂಬಂಧಿಸಿದಂತೆ ಅನೇಕ ಅಪ್ಡೇಟ್ ಗಳು ಹೊರಬೀಳುತ್ತಿದೆ. ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಗೆ ರೇಷನ್ ಕಾರ್ಡ್ ಅತ್ಯಗತ್ಯವಾಗಿದೆ. ರೇಷನ್ ಕಾರ್ಡ್ ನ ಜೊತೆಗೆ ಆಧಾರ್ ಕಾರ್ಡ್ ಕೂಡ ಮುಖ್ಯ ದಾಖಲೆಯಾಗಿದೆ. ಆಧಾರ್ ಕಾರ್ಡ್ ಮೂಲಕ ನೀವು ಸರ್ಕಾರದ ಎಲ್ಲ  ಸೌಲಭ್ಯವನ್ನು ಪಡೆಯಬಹುದಾಗಿದೆ.

ಆಧಾರ್ ಕಾರ್ಡ್ ಇಲ್ಲದೆ ಯಾವುದೇ ರೀತಿಯ ಕೆಲಸ ಪೂರ್ಣಗೊಳ್ಳುವುದಿಲ್ಲ. ಆಧಾರ್ ಜೊತೆ ಇನ್ನಿತರ ವೈಯಕ್ತಿಕ ದಾಖಲೆಯನ್ನು ಲಿಂಕ್ ಮಾಡಲು ಸರ್ಕಾರ ಈಗಾಗಲೇ ಆದೇಶ ನೀಡಿದೆ. ಇನ್ನು ಇತ್ತೀಚಿಗೆ ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕೇಂದ್ರ ಸರ್ಕಾರದಿಂದ ಮಾಹಿತಿ ಹೊರ ಬಿದ್ದಿದೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಸುದ್ದಿ ವೈರಲ್ ಆಗುತ್ತಿದ್ದಂತೆ ಸರ್ಕಾರ ಮತ್ತೆ ಗಡುವನ್ನು ಸೂಚಿಸಿದೆ.

Ration Card And Aadhaar Card Link Update
Image Credit: News18

ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್
ದೇಶದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ಸರ್ಕಾರ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ. ಹಾಗೆಯೆ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.

ಆದರೆ ಕೆಲವು ಸಮಸ್ಯೆಗಳಿಂದ ಈಗ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಮಾಹಿತಿ ನೀಡಿದೆ. ಈ ಬೆಳವಣಿಗೆ ಹಿನ್ನಲೆ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಹಲವು ಜನ ಕಾಯುತ್ತಿದ್ದಾರೆ. ಇನ್ನು ಅನರ್ಹ ವ್ಯಕ್ತಿಗಳು ಕೂಡ ಪಡಿತರ ವಿತರಣೆಯ ಲಾಭವನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ರೇಷನ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಲಿಂಕ್‌ಗೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಿದೆ.

How to Link Aadhaar Card to Ration Card
Image Credit: Informalnewz

ಸೆಪ್ಟೆಂಬರ್ 30 ರೊಳಗೆ ಈ ಕೆಲಸ ಮಾಡಿ
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. ಸೆಪ್ಟೆಂಬರ್ 30 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕು. ಆದ್ದರಿಂದ ಕೇಂದ್ರ ಸರ್ಕಾರ ಜನರಿಗೆ ಆಧಾರ್ ಗೆ ಪಡಿತರ ಲಿಂಕ್ ಮಾಡುವಂತೆ ಪದೇ ಪದೇ ಹೇಳುತ್ತಿದೆ.

Join Nadunudi News WhatsApp Group

ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿದರೆ ಸರ್ಕಾರದಿಂದ ಸಿಗುವ ಉಚಿತ ಪಡಿತರವನ್ನು ಪಡೆಯಬಹುದು. ಉಚಿತ ಪಡಿತರವನ್ನು ಪಡೆಯಲು ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ನೀವು ಸರ್ಕಾರದಿಂದ ಸಿಗುವ ಉಚಿತ ರೇಷನ್ ನಿಂದ ವಂಚಿತರಾಗಬೇಕಾಗುತ್ತದೆ.

Ration card and Aadhar card link updates
Image Credit: Pipanews

ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ
* ಮೊದಲು ಆಹಾರ ಇಲಾಖೆಯ ವೆಬ್ ಸೈಟ್ ಗೆ ಭೇಟಿ ನೀಡಬೇಕು.

* ಅದರ ನಂತರ ಲಿಂಕ್ ಆಧಾರ್ ವಿತ್ ರೇಷನ್ ಕಾರ್ಡ್ ಆಯ್ಕೆಯನ್ನು ಸೆಲೆಕ್ಟ್ ಮಾಡಬೇಕು.

* ನಂತರ ನಿಮ್ಮ ಪಡಿತ ಚೀಟಿ ಸಂಖ್ಯೆಯನ್ನು ಸೇರಿಸಿ.

* ಲಿಂಕ್ ಆಧಾರ್ ಮತ್ತು ಮೊಬೈಲ್ ಸಂಖ್ಯೆ ಆಯ್ಕೆಯನ್ನು ಆರಿಸಿ.

* ಈಗ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು.

* ನಂತರ ನಿಮ್ಮ ಫೋನ್ ಗೆ ಬರುವ ಓಟಿಪಿ ನಮೂದಿಸಬೇಕು.

* ನಂತರ ಪಡಿತ ಚೀಟಿಯೊಂದಿದೆ ಆಧಾರ್ ಲಿಂಕ್ ಮಾಡಿ. ಇದಾದ ನಂತರ ನಿಮ್ಮ ಮೊಬೈಲ್ ಗೆ ತಕ್ಷಣಲಿಂಕ್ ಆದ ಮೆಸೇಜ್ ಬರುತ್ತದೆ.

Join Nadunudi News WhatsApp Group