Ration Card: ರೇಷನ್ ಕಾರ್ಡ್ ಇದ್ದವರಿಗೆ ಕೊನೆಯ ಎಚ್ಚರಿಕೆ, ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ಕಾರ್ಡ್.

ಸೆಪ್ಟೆಂಬರ್ 30 ರೊಳಗೆ ಈ ಕೆಲಸ ಮಾಡದಿದ್ದರೆ ನೀವು ಸರ್ಕಾರದಿಂದ ಸಿಗುವ ಉಚಿತ್ ರೇಷನ್ ನಿಂದ ವಂಚಿತರಾಗಬೇಕಾಗುತ್ತದೆ.

Ration Card Update: ಭಾರತೀಯರಿಗೆ ಆಧಾರ್ ಕಾರ್ಡ್ ಅಗತ್ಯವಾದ ದಾಖಲೆಯಾಗಿದೆ. ಆಧಾರ್ ಕಾರ್ಡ್ ಮೂಲಕ ನೀವು ಎಲ್ಲ ಸರ್ಕಾರದ ಸೌಲಭ್ಯವನ್ನು ಪಡೆಯಬಹುದಾಗಿದೆ. ಆಧಾರ್ ಕಾರ್ಡ್ ಇಲ್ಲದೆ ಈಗಿನ ಕಾಲದಲ್ಲಿ ಹೆಚ್ಚಿನ ಕೆಲಸ ನಡೆಯುವುದಿಲ್ಲ. ಅದರಲ್ಲಿ ಇತ್ತೀಚಿಗೆ ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕೇಂದ್ರ ಸರ್ಕಾರದಿಂದ ಮಾಹಿತಿ ಹೊರ ಬಿದ್ದಿದೆ.

ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್
ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಕೆಲವು ಸಮಸ್ಯೆಗಳಿಂದ ಈಗ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಈ ಬೆಳವಣಿಗೆ ಹಿನ್ನಲೆ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಹಲವು ಜನ ಕಾಯುತ್ತಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಸಹ ಮಹತ್ವದ ಮಾಹಿತಿ ನೀಡಿದ್ದು, ರೇಷನ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಲಿಂಕ್‌ಗೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಿದೆ.

New information for ration card holders
Image Credit: Navi

ಪಡಿತರ ಚೀಟಿದಾರರಿಗೆ ಹೊಸ ಮಾಹಿತಿ
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. ಸೆಪ್ಟೆಂಬರ್ 30 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕು.

ಆದ್ದರಿಂದ ಕೇಂದ್ರ ಸರ್ಕಾರ ಜನರಿಗೆ ಆಧಾರ್ ಗೆ ಪಡಿತರ ಲಿಂಕ್ ಮಾಡುವಂತೆ ಪದೇ ಪದೇ ಹೇಳುತ್ತಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿದರೆ ಸರ್ಕಾರದಿಂದ ಸಿಗುವ ಉಚಿತ ಪಡಿತರವನ್ನು ಪಡೆಯಬಹುದು.

Join Nadunudi News WhatsApp Group

New information for ration card holders
Image Credit: Economictimes

ಉಚಿತ ಪಡಿತರವನ್ನು ಪಡೆಯಲು ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ನೀವು ಸರ್ಕಾರದಿಂದ ಸಿಗುವ ಉಚಿತ್ ರೇಷನ್ ನಿಂದ ವಂಚಿತರಾಗಬೇಕಾಗುತ್ತದೆ.

ಅವ್ಯವಹಾರವನ್ನು ತಡೆಯುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಯಾಕೆಂದರೆ ಈ ಮೊದಲು ಒಂದೇ ಕುಟುಂಬದಲ್ಲಿ ಹಲವು ಕಾರ್ಡ್ ಗಳನ್ನೂ ಬಳಕೆ ಮಾಡಲಾಗುತ್ತಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗುತ್ತಿತ್ತು. ಅದರಲ್ಲೂ ಅನರ್ಹರು ಸಹ ಪಡಿತರ ಚೀಟಿ ಪಡೆಯುತ್ತಿರುವ ಹಿನ್ನಲೆ ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

Join Nadunudi News WhatsApp Group