Ration Card: ಆಗಸ್ಟ್ 31 ರ ಒಳಗೆ ಈ ಕೆಲಸ ಮಾಡದೆ ಇದ್ದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಬಂದ್, ಸರ್ಕಾರದ ದಿಡೀರ್ ನಿರ್ಧಾರ.
ಪಡಿತರ ಚೀಟಿದಾರರ ಗಮನಕ್ಕೆ, ಆಗಸ್ಟ್ 31 ರೊಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್.
Ration Card E-KYC Update Last Date: ಪ್ರಸ್ತುತ ರಾಜ್ಯದಲ್ಲಿ ರೇಷನ್ ಕಾರ್ಡ್ (Ration Card) ಸಂಬಂಧಿಸಿದಂತೆ ಅನೇಕ ಅಪ್ಡೇಟ್ ಗಳು ಹೊರಬೀಳುತ್ತಿದೆ. ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಗೆ ರೇಷನ್ ಕಾರ್ಡ್ ಅತ್ಯಗತ್ಯವಾಗಿದೆ. ರೇಷನ್ ಕಾರ್ಡ್ ನ ಜೊತೆಗೆ ಆಧಾರ್ ಕಾರ್ಡ್ ಕೂಡ ಮುಖ್ಯ ದಾಖಲೆಯಾಗಿದೆ.
ಆಧಾರ್ ಕಾರ್ಡ್ ಮೂಲಕ ನೀವು ಸರ್ಕಾರದ ಎಲ್ಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಇನ್ನು ಇತ್ತೀಚಿಗೆ ರೇಷನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕೇಂದ್ರ ಸರ್ಕಾರದಿಂದ ಮಾಹಿತಿ ಹೊರ ಬಿದ್ದಿದೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಸುದ್ದಿ ವೈರಲ್ ಆಗುತ್ತಿದ್ದಂತೆ ಸರ್ಕಾರ ಮತ್ತೆ ಗಡುವನ್ನು ಸೂಚಿಸಿದೆ.
ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್
ದೇಶದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ಸರ್ಕಾರ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ. ಹಾಗೆಯೆ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಕೆಲವು ಸಮಸ್ಯೆಗಳಿಂದ ಈಗ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಮಾಹಿತಿ ನೀಡಿದೆ.
ಈ ಬೆಳವಣಿಗೆ ಹಿನ್ನಲೆ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಹಲವು ಜನ ಕಾಯುತ್ತಿದ್ದಾರೆ. ಇನ್ನು ಅನರ್ಹ ವ್ಯಕ್ತಿಗಳು ಕೂಡ ಪಡಿತರ ವಿತರಣೆಯ ಲಾಭವನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ಗೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಿದೆ.
ಆಗಸ್ಟ್ 31 ರೊಳಗೆ ಈ ಕೆಲಸ ಮಾಡಿ
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. ಆಗಸ್ಟ್ 31 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕು. ಆದ್ದರಿಂದ ಕೇಂದ್ರ ಸರ್ಕಾರ ಜನರಿಗೆ ಆಧಾರ್ ಗೆ ಪಡಿತರ ಲಿಂಕ್ ಮಾಡುವಂತೆ ಪದೇಪದೇ ಹೇಳುತ್ತಿದೆ.
ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿದರೆ ಸರ್ಕಾರದಿಂದ ಸಿಗುವ ಉಚಿತ ಪಡಿತರವನ್ನು ಪಡೆಯಬಹುದು. ಉಚಿತ ಪಡಿತರವನ್ನು ಪಡೆಯಲು ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ನೀವು ಸರ್ಕಾರದಿಂದ ಸಿಗುವ ಉಚಿತ ರೇಷನ್ ನಿಂದ ವಂಚಿತರಾಗಬೇಕಾಗುತ್ತದೆ.