Anna Bhagya Rule: ಈ ತಪ್ಪು ಮಾಡಿದರೆ ದಂಡದ ಜೊತೆ ಕಾರ್ಡ್ ರದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಪಡೆಯುತ್ತಿರುವವರಿಗೆ ಹೊಸ ನಿಯಮ.

ಅನ್ನಭಾಗ್ಯ ಯೋಜನೆಯ ಅಕ್ಕಿ ಪಡೆಯುತ್ತಿರುವವರಿಗೆ ಜಾರಿಗೆ ಬಂತು ಹೊಸ ರೂಲ್ಸ್.

Anna Bhagya Yojana Rules In Karnataka: ಸದ್ಯ ಕರ್ನಾಟಕದಲ್ಲಿ BPL Ration Card ಗೆ ಬೇಡಿಕೆ ಹೆಚ್ಚಿದೆ. ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ ದಾಖಲೆಯಾಗಿದೆ. BPL ರೇಷನ್ ಕಾರ್ಡ್ ಹೊಂದಿರದ ಕುಟುಂಬಗಳು ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎನ್ನುವುದು ಎಲ್ಲರಿಗು ತಿಳಿದೇ ಇದೆ.

ಈ ಕಾರಣಕ್ಕೆ ಕಳೆದ ನಾಲ್ಕೈದು ತಿಂಗಳಿಂದ ಸರಿಸುಮಾರು 3 ಲಕ್ಷಕ್ಕೂ ಅಧಿಕ ಮಂದಿ BPL Ration Card ಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಆಹಾರ ಇಲಾಖೆ ಅರ್ಜಿದಾರರ ಪ್ರತಿ ಅರ್ಜಿಯನ್ನು ಕೂಡ ಕೂಲಂಕುಷವಾಗಿ ಪರಿಶೀಲಿಸುತ್ತಿದೆ. ಅನರ್ಹರು ಅರ್ಜಿ ಸಲ್ಲಿಕೆ ಮಾಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.

ration card latest update
Image Credit: DNA India

ರೇಷನ್ ಕಾರ್ಡ್ ದಾರರು ಇಂತಹ ತಪ್ಪನ್ನು ಮಾಡಬೇಡಿ
ಇನ್ನು ರಾಜ್ಯದಲ್ಲಿ BPL Card ಹೊಂದಿರುವ ಅದೆಷ್ಟೋ ಕುಟುಂಬಗಳು ಉಚಿತ ಪಡಿತರ ಲಾಭವನ್ನು ಸದುಪಯೋಗ ಪಡಿಸಿಕೊಳ್ಳುತ್ತಿಲ್ಲ. ಪ್ರತಿ ತಿಂಗಳು ತಿಂಗಳು ನ್ಯಾಯಬೆಲೆ ಅಂಗಡಿಗೆ ಬಂದು ಪಡಿತರನ್ನು ಪಡೆಯುತ್ತಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ 6 ತಿಂಗಳಿನಿಂದ ಯಾವ ಕುಟುಂಬವು ಪಡಿತರನ್ನು ಪಡೆಯುತ್ತಿಲ್ಲವೋ ಅಂತಹ ಕುಟುಂಬದ ಪಡಿತರ ಚೀಟಿಯನ್ನು ರದ್ದು ಮಾಡುವುದಾಗಿ ಆದೇಶ ಹೊರಡಿಸಿದೆ. ಇದಲ್ಲೆ ಸರ್ಕಾರ ನೀಡುತ್ತಿರುವ ಉಚಿತ ಪಡಿತರನ್ನು ದುರುಪಯೋಗ ಪಡಿಸಿಕೊಂಡರು ಕೂಡ ಅಂತವರ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ.

ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿದರೆ ರದ್ದಾಗಲಿದೆ ರೇಷನ್ ಕಾರ್ಡ್
ಇನ್ನು ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ ಉಚಿತ 5KG ಅಕ್ಕಿ ಹಾಗು 5KG ಅಕ್ಕಿಯ ಬದಲಾಗಿ ಹಣವನ್ನು ನೀಡುತ್ತಿದೆ. ಪಡಿತರ ಚೀಟಿದಾರರು 5KG ಅಕ್ಕಿಯನ್ನು ಪಡೆಯುತ್ತಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದೆ.

ಇನ್ನು ಕೆಲವರು ಅನ್ನ ಭಾಗ್ಯ ಯೋಜನೆಯಡಿ ಸಿಗುವ ಅಕ್ಕಿಯನ್ನು ಮಾರಾಟ ಮಾಡಿಕೊಂಡಿರುವ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಯಾರು ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಹಣಕ್ಕೆ ಮಾರಾಟ ಮಾಡುತ್ತಾರೋ ಅಂತಹ ಕುಟುಂಬದ ರೇಷನ್ ಕಾರ್ಡ್ ರದ್ದು ಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

Join Nadunudi News WhatsApp Group

Ration Card Delete Update
Image Credit: Original Source

ಡಿಸೆಂಬರ್ ಅಂತ್ಯದೊಳಗೆ ಈ ಕೆಲಸ ಪೂರ್ಣಗೊಳಿಸಿ
ಇನ್ನು ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. December 31 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕಿದೆ. ಇನ್ನು ಡಿಸೆಂಬರ್ 31 ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನೀವು ರಾಜ್ಯ ಸರ್ಕಾರದ ಉಚಿತ ಯೋಜನೆಗಳಿಂದ ವಂಚಿತರಾಗುತ್ತೀರಿ ಎನ್ನುವುದರ ಬಗ್ಗೆ ಅರಿವಿರಲಿ.

Join Nadunudi News WhatsApp Group