BPL Cards: ಸೆಪ್ಟೆಂಬರ್ 10 ಕೊನೆಯ ದಿನಾಂಕ, BPL ಕಾರ್ಡ್ ಇದ್ದವರಿಗೆ ಸರ್ಕಾರದ ಇನ್ನೊಂದು ಘೋಷಣೆ.
ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಇನ್ನೊಂದು ಬಿಗ್ ಅಪ್ಡೇಟ್ ನೀಡಿದ ರಾಜ್ಯ ಸರ್ಕಾರ.
Ration Card Update In Kranataka: ರಾಜ್ಯದಲ್ಲಿ ರೇಷನ್ ಕಾರ್ಡುಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಘೋಷಣೆಯನ್ನ ರಾಜ್ಯ ಸರ್ಕಾರ ಹೊರಡಿಸಿದೆ ಎಂದು ಹೇಳಬಹುದು. ಹೌದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೆಲವು ಯೋಜನೆಗಳ ಲಾಭವನ್ನ ತಗೆದುಕೊಳ್ಳಲು ರೇಷನ್ ಕಾರ್ಡ್ ಅತೀ ಅವಶ್ಯಕ ಎಂದು ಹೇಳಿದ್ದು ಸದ್ಯ ಸಾಕಷ್ಟು ಸಾಕಷ್ಟು ಜನರು ರೇಷನ್ ಕಾರ್ಡ್ (Ratsion Cards) ವಿಷಯವಾಗಿ ಸಮಸ್ಯೆಯನ್ನ ಅನುಭವಿಸುತ್ತಿದ್ದಾರೆ ಎಂದು ಹೇಳಬಹುದು.
ಇದರ ನಡುವೆ ಈಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯನ್ನ ರಾಜ್ಯದಲ್ಲಿ ಜಾರಿಗೆ ತಂದಿದ್ದು ಈ ಯೋಜನೆಯ ಲಾಭವನ್ನ ಪಡೆದುಕೊಳ್ಳಲು ರೇಷನ್ ಕಾರ್ಡ್ ಬಹಳ ಅಗತ್ಯ ಆಗಿದೆ. ಸದ್ಯ ರೇಷನ್ ಕಾರ್ಡ್ ವಿಷಯವಾಗಿ ರಾಜ್ಯ ಸರ್ಕಾರ ಇನ್ನೊಂದು ಆದೇಶವನ್ನ ಹೊರಡಿಸಿದ್ದು ಕೊನೆಯ ದಿನಾಂಕವನ್ನ ಕೂಡ ಘೋಷಣೆ ಮಾಡಿದೆ.
ಸೈಬರ್ ಸೆಂಟರ್ ಹಾಗು website ನಲ್ಲೂ ತಿದ್ದುಪಡಿಗೆ ಅವಕಾಶ
ಸೈಬರ್ ಸೆಂಟರ್ ಗಳಲ್ಲಿ ಬಿಪಿಎಲ್ (BPL), ಎಪಿಎಲ್ (APL) ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದ್ದು ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. Ration Card Website ನಲ್ಲೂ ಕೂಡ ನಾವೇ ಸ್ವತಃ BPL Card ಹಾಗು APL Card ಗೆ ಅರ್ಜಿ ಸಲ್ಲಿಸಿಕೊಳ್ಳಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿರುತ್ತದೆ.
ರೇಷನ್ ಕಾರ್ಡ್ ತಿದ್ದುಪಡಿಗೆ ಅಗತ್ಯವಿರುವ ದಾಖಲೆ
ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ನೀಡಬೇಕಾದ ದಾಖಲೆಗಳಲ್ಲಿ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ
ಆಹಾರ ಇಲಾಖೆ ಪಡಿತರ ಚೀಟಿಗೆ ಸಂಬಂಧಿಸಿದಂತೆ ಈ ಸಲ ಕಟ್ಟು ನಿಟ್ಟಿನ ಕ್ರಮ ವಹಿಸಿದೆ. ಪಡಿತರ ಚೀಟಿ ಕೆಲವು ಯೋಜನೆಗಳ ಫಲಾನುಭವಿಗಳಾಗಲು ಅವಶ್ಯಕತೆ ಇದ್ದು, ಆ ನಿಟ್ಟಿನಲ್ಲಿ ಬೇಗ ಬೇಗ ರೇಷನ್ ಕಾರ್ಡ್ ಅನ್ನು ಸರಿ ಮಾಡಿಸಿಕೊಳ್ಳುವುದು ಮುಖ್ಯ ಆಗಿದೆ. ರೇಷನ್ ಕಾರ್ಡ್ ಪ್ರಕ್ರಿಯೆ ಬಗ್ಗೆ ತಿಳಿಯಬೇಕಾದರೆ ಮೊದಲೆನೆದಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/ ಅನ್ನು ಭೇಟಿ ನೀಡಿಬೇಕು .
ಇ-ಸೇವೆಗಳನ್ನುಮುಖ್ಯ ಪುಟದಲ್ಲಿ ಆಯ್ಕೆ ಮಾಡಿ. ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ. ಹೊಸ ಪೇಜ್ ನ ಫಾರ್ಮ್ ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ. ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ. ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.