Congress Anna Bhagya Scheme Update: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಹೊಸ ಹೊಸ ಅಪ್ಡೇಟ್ ಗಳು ಹೊರ ಬೀಳುತ್ತಲೇ ಇದೆ. ಸರ್ಕಾರ ಅನ್ನಭಾಗ್ಯ ಯೋಜನೆಯ ಸಲುವಾಗಿ ಸಾಕಷ್ಟು ಮಾಹಿತಿಗಳನ್ನು ನೀಡುತ್ತಿದೆ. ಜನರಿಗೆ 5 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿಗೆ ಸರಿದೂಗುವ ಹಣ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂಪಾಯಿ ನೀಡಲಾಗುತ್ತದೆ. ಆದರೆ ಈ ಹಣ ಎಲ್ಲ ಕುಟುಂಬದವರಿಗೂ ಸಿಗುವುದಿಲ್ಲ. ಅನ್ನಭಾಗ್ಯ ಯೋಜನೆಗೆ ಏನಾದರೂ ನ್ಯೂನ್ಯತೆಗಳಿದ್ದಲ್ಲಿ ಜನರು ಇದರಿಂದ ಅನರ್ಹರಾಗಬೇಕಾಗುತ್ತದೆ.
ಅನ್ನಭಾಗ್ಯ ಯೋಜನೆ ಲಾಭ ಪಡೆಯಲು ಇರಬೇಕಾದ ಅರ್ಹತೆಗಳು
ಇನ್ನು ಬಿಪಿಎಲ್ ಹಾಗು ಅಂತ್ಯೋದಯ ಪಡಿತರ ಚೀಟಿಯಲ್ಲಿ ಯಾವುದೇ ತಪ್ಪಾದ ಮಾಹಿತಿ ಇರಬಾರದು. ಇನ್ನು ಪಡಿತರ ಚೀಟಿಯ ಸದಸ್ಯರ ಹೆಸರಿನಲ್ಲಿ ಬ್ಯಾಂಕ್ ಖಾತೆ ಇರಬೇಕಾಗುತ್ತದೆ. ಅನ್ನಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲು ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯಗೊಳಿಸಲಾಗಿದೆ. ಆಧಾರ್ ಲಿಂಕ್ ಬ್ಯಾಂಕ್ ಖಾತೆ ವಿವರ ಅನ್ನಭಾಗ್ಯ ಯೋಜನೆಯಡಿ ಹಣ ಪಡೆಯಲು ಮುಖ್ಯವಾಗಿದೆ.
ಇ-ಕೆವೈಸಿ ಮಾಡದಿದ್ದರೆ ಮುಂದಿನ ತಿಂಗಳು ಆಹಾರ ಧಾನ್ಯ ಹಾಗು ನಗದು ವರ್ಗಾವಣೆಯಿಂದ ವಂಚಿತರಾಗಬೇಕಾಗುತ್ತದೆ
ಈಗಾಗಲೇ ಆಧಾರ್ ಲಿಂಕ್ ಆಗದೆ ಇರುವ ಸಕ್ರಿಯ ಬ್ಯಾಂಕ್ ಖಾತೆ ಇಲ್ಲದೆ ಇರುವವ ಮತ್ತು ಬ್ಯಾಂಕ್ ಇ -ಕೆವೈಸಿ ಆಗದೆ ಇರುವ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಫಲಾನುಭವಿಗಳು ಜುಲೈ 20 ರೊಳಗಾಗಿ ಸರಿಪಡಿಸಿಕೊಳ್ಳಲು ಆಹಾರ ಇಲಾಖೆಯ ಉಪ ನಿರ್ದೇಶಕರು ಸೂಚನೆ ನೀಡಿದ್ದಾರೆ. ಎಎವೈ ಅಂತ್ಯೋದಯ ಅನ್ನಭಾಗ್ಯ ಯೋಜನೆಯಡಿ ಕಾಡುವಬದವರೆಂದು ಹೇಳಿ ಸರ್ಕಾರ ಈಗಾಗಲೇ 21 ಕೆಜಿ ಅಕ್ಕಿಯನ್ನು ಮತ್ತು 14 ಕೆಜಿ ಜೋಳವನ್ನು ಉಚಿತವಾಗಿ ನೀಡುತ್ತಿದೆ.
ಮೂರಕ್ಕಿಂತ ಹೆಚ್ಚು ಮಂದಿ ಇದ್ದಾರೆ ಮಾತ್ರ ಒಬ್ಬರಿಗೆ 170 ರೂಪಾಯಿ ಹಣ ಸಿಗುತ್ತದೆ. 3 ಕ್ಕಿಂತ ಎಷ್ಟೇ ಮಂದಿ ಇದ್ದರು ಪ್ರತಿಯೊಬ್ಬರಿಗೂ 170 ರೂಪಾಯಿ ನಗದು ಸಿಗುತ್ತದೆ ಎಂದು ಜಿಲ್ಲೆಯ ಆಧಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇ-ಕೆವೈಸಿಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎನ್ನಲಾಗಿದೆ.