Bank Facility: ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಬಿಗ್ ರಿಲೀಫ್, ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ RBI.

ಬ್ಯಾಂಕ್ ಖಾತೆದಾರರಿಗೆ RBI ಹೊಸ ಮಾರ್ಗಸೂಚಿ ಹೊರಡಿಸಿದೆ.

RBI New Order For All Banks: Reserve Bank Of India ಇತ್ತೀಚಿಗೆ ಹೊಸ ಹೊಸ ನಿಯಮವನ್ನು ಪರಿಚಯಿಸುತ್ತಿದೆ. RBI ಬ್ಯಾಂಕ್ ಖಾತೆದಾರರಿಗೆ ಹೆಚ್ಚಿನ ಸೌಲಭ್ಯವನ್ನು ನೀಡಲು ಮುಂದಾಗಿದೆ. ಗ್ರಾಹಕರಿಗೆ ವಿವಿಧ ಸೌಲಭ್ಯವನ್ನು ನೀಡುವುದರ ಜೊತೆಗೆ ಗ್ರಾಹಕರ ಭದ್ರತೆಗಾಗಿ ಹೆಚ್ಚಿನ ಕ್ರಮ ಕೈಗೊಳ್ಳುತ್ತಿದೆ. ಗ್ರಾಹಕರು ಯಾವುದೇ ನಷ್ಟವನ್ನು ಅನುಭವಿಸಬಾರದು ಎನ್ನುವ ಕಾರಣಕ್ಕೆ RBI ಬ್ಯಾಂಕುಗಳಿಗೆ ವಿವಿಧ ನಿಯಮವನ್ನು ವಿದಿಸುತ್ತಿದೆ.

ಇನ್ನು ಇತ್ತೀಚಿಗೆ RBI ಬ್ಯಾಂಕುಗಳು ಗ್ರಾಹಕರಿಗೆ ನೀಡುತ್ತಿರುವ ಸಾಲದ ಬಗ್ಗೆ ಸಾಕಷ್ಟು ಬದಲಾವಣೆ ತಂದಿತ್ತು. ಇದೀಗ ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಬಿಗ್ ರಿಲೀಫ್ ಲಭಿಸಿದೆ. ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಿ RBI ಹೊಸ ಮಾರ್ಗಸೂಚಿ ಹೊರಡಿಸಿದೆ.

rbi new order
Image Credit: Businessleague

ಬ್ಯಾಂಕ್ ಖಾತೆ ಇದ್ದವರಿಗೆ RBI ನಿಂದ ಬಿಗ್ ರಿಲೀಫ್
Banking ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ನಂಬಿಕೆಯನ್ನು ಬಲಪಡಿಸುವ ಸಲುವಾಗಿ RBI ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಗ್ರಾಹಕರ ಬ್ಯಾಂಕಿಂಗ್ ವ್ಯವಸ್ಥೆಯ ಉತ್ತಮ ನಿರ್ವಹಣೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆರ್‌ಬಿಐ ಡೆಪ್ಯುಟಿ ಗವರ್ನರ್ ಸ್ವಾಮಿನಾಥನ್ ಜೆ. ಅವರು ಸಭೆಯಲ್ಲಿ ಮಹತ್ವದ ಘೋಷಣೆ ಹೊರಡಿಸಿದ್ದಾರೆ.

ಮಂಡಳಿಯ ಕಸ್ಟಮ್ಸ್ ಸೇವಾ ಸಮಿತಿಯ ಮುಖ್ಯಸ್ಥರು, ವ್ಯವಸ್ಥಾಪಕ ನಿರ್ದೇಶಕರು, ಕಸ್ಟಮ್ ಸೇವಾ ಪ್ರದೇಶಗಳ ಉಸ್ತುವಾರಿ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಪ್ರಮುಖ ಬ್ಯಾಂಕ್‌ ಗಳ ಪ್ರಮುಖ ನೋಡಲ್ ಅಧಿಕಾರಿಗಳೊಂದಿಗೆ ಮುಂಬೈನಲ್ಲಿ ಡೆಪ್ಯುಟಿ ಗವರ್ನರ್ ಅವರು ಸಭೆ ನಡೆಸಿದ್ದಾರೆ. ಈ ವೇಳೆ ಗ್ರಾಹಕರು ಹೆಚ್ಚಿನ ಅನುಕೂಲ ನೀಡುವ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.

Big relief from RBI for bank account holders
Image Credit: Newindianexpress

ಇನ್ನುಮುಂದೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಸೌಲಭ್ಯ
ಗ್ರಾಹಕರ ದೂರುಗಳ ತ್ವರಿತ ಪರಿಹಾರ, ಕುಂದುಕೊರತೆ ನಿವಾರಣಾ ಕಾರ್ಯವಿಧಾನಗಳನ್ನು ಸುಗಮಗೊಳಿಸುವುದು, ಗ್ರಾಹಕರ ಅನುಭವಗಳನ್ನು ಸುಧಾರಿಸಲು ತಂತ್ರಜ್ಞಾನದ ಬಳಕೆ, ವಂಚನೆಗಳನ್ನು ತಡೆಗಟ್ಟುವುದು ಮತ್ತು ನಷ್ಟವನ್ನು ಕಡಿಮೆಗೊಳಿಸುವುದು, ಮತ್ತು ಗ್ರಾಹಕ ಸೇವೆಯಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಜವಾಬ್ದಾರಿಯುತ ನೀತಿಗಳನ್ನು ಜಾರಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

Join Nadunudi News WhatsApp Group

Join Nadunudi News WhatsApp Group