Job Recruitment: PUC ಆದವರಿಗೆ ಕಂದಾಯ ಇಲಾಖೆಯಲ್ಲಿ ಬಂಪರ್ ನೇಮಕಾತಿ ಮತ್ತು ಉತ್ತಮ ಸಂಬಳ, ಬೇಗ ಅರ್ಜಿ ಹಾಕಿ

PUC ಪಾಸ್ ಆದವರಿಗೆ ಕಂದಾಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

Revenue Department Recruitment: ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎನ್ನಬಹುದು. ಉನ್ನತ ವ್ಯಾಸಂಗವನ್ನು ಪೂರ್ಣಗೊಳಿಸಿದ್ದರೂ ಕೂಡ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗದ ಕಾರಣ ಅದೆಷ್ಟು ಜನ ವಿದ್ಯಾವಂತರು ಕೂಡ ಉದ್ಯೋಗವಿಲ್ಲದೆ ಖಾಲಿ ಕುಳಿತುಕೊಂಡಿದ್ದಾರೆ. ಇನ್ನು ಆಗಾಗ ವಿವಿಧ ಸಂಸ್ಥೆಗಳು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ನೀಡಲು ಕೆಲ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುತ್ತಿರುತ್ತದೆ.

ಸದ್ಯ Revenue Department PUC ವಿದ್ಯಾರ್ಥಿಗಳಿಗೆ ಉತ್ತಮ ಹುದ್ದೆಯನ್ನು ಪಡೆಯುವ ಅವಕಾಶವನ್ನು ನೀಡಿದೆ. ಹೌದು, PUC ಆದವರು ರಾಜ್ಯ ಕಂದಾಯ ಇಲಾಖೆಯಲ್ಲಿ ಹುದ್ದೆಯನ್ನು ಪಡೆದುಕೊಳ್ಳುವ ಸುವರ್ಣಾವಕಾಶ ಬಂದೊದಗಿದೆ. ಕಂದಾಯ ಇಲಾಖೆಯಲ್ಲಿ PUC ಪಾಸ್ ಆದವರಿಗೆ ನೇಮಕಾತಿ ಆರಂಭ ಆಗಲಿದ್ದು ಆದಷ್ಟು ಬೇಗ ಅರ್ಜಿ ಆರಂಭ ಆಗಲಿದೆ.

Revenue Department Recruitment
Image Credit: Studycafe

PUC ಆದವರಿಗೆ ಕಂದಾಯ ಇಲಾಖೆಯಲ್ಲಿ ಬಂಪರ್ ನೇಮಕಾತಿ
ರಾಜ್ಯ ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವು ದ್ವಿತೀಯ ಪಿಯುಸಿ ತೇರ್ಗಡೆಯಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಮಾರ್ಚ್ 4ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

State Revenue Department
Image Credit: Deccan Herald

ಅರ್ಜಿ ಸಲ್ಲಿಕೆಯ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಏಪ್ರಿಲ್ 3 ಕೊನೆಯ ದಿನಾಂಕವಾಗಿದೆ. ಶುಲ್ಕ ಪಾವತಿಗೆ ಏಪ್ರಿಲ್ 6ರವರೆಗೆ ಸಮಯಾವಕಾಶವನ್ನು ನೀಡಲಾಗಿದೆ. ನೀವು 2nd PUC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ KEA ಅಧಿಕೃತ ವೆಬ್‌ ಸೈಟ್ https://kea.kar.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

Join Nadunudi News WhatsApp Group