Rishabh Shetty Daughter Birthday: ಮಗಳ ಹುಟ್ಟು ಹಬ್ಬವನ್ನ ಸರಳವಾಗಿ ಆಚರಿಸಿದ ರಿಷಬ್ ಶೆಟ್ಟಿ, ವಿಡಿಯೋ ವೈರಲ್.

Rishabh Shetty Daughter Birthday Celebration: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ (Rishabh Shetty) ಇದೀಗ ತಮ್ಮ ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ರಿಷಬ್ ಶೆಟ್ಟಿ ಅವರು ಇದೀಗ ಕಾಂತಾರ 2 ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ.

ಇದೀಗ ರಿಷಬ್ ಶೆಟ್ಟಿ ತಮ್ಮ ಮಗಳ ಹುಟ್ಟುಹಬ್ಬದ ಸಲುವಾಗಿ ಇನ್ಸ್ಟಾಗ್ರಾಮ್ (Rishabh Shetty Instagram) ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಳ್ಳುವ ಮೂಲಕ ತಮ್ಮ ಮಗಳಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Rishabh Shetty Daughter Birthday Celebration
Image Source: India Today

ಮಗಳ ಹುಟ್ಟು ಹಬ್ಬದ ಸಂಭ್ರಮದಲ್ಲಿ ರಿಷಬ್- ಪ್ರಗತಿ
ನಟ ರಿಷಬ್ ಶೆಟ್ಟಿ ಅವರು ಕನ್ನಡದಲ್ಲಿ ಸಾಕಷ್ಟು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಇನ್ನು ನಿರ್ದೇಶನದ ಜೊತೆಗೆ ನಾಯಕ ನಟನಾಗಿ ಕೂಡ ರಿಷಬ್ ಮಿಂಚಿದ್ದಾರೆ. ಇತ್ತೀಚೆಗಷ್ಟೇ ತೆರೆ ಕಂಡ ಕಾಂತಾರ ಚಿತ್ರ ರಿಷಬ್ ಶೆಟ್ಟಿ ಅವರಿಗೆ ದೇಶದೆಲ್ಲೆಡೆ ಖ್ಯಾತಿ ತಂದು ಕೊಟ್ಟಿದೆ.

ಕಾಂತಾರ ಯಶಸ್ಸಿನ ಬಳಿಕ ರಿಷಬ್ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇದೀಗ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ತಮ್ಮ ಮಗಳ ಮೊದಲನೆಯ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Rishabh Shetty Daughter Birthday Celebration
Image Source: Instagram

ಮಗಳ ಹುಟ್ಟುಹಬ್ಬದ ಸಲುವಾಗಿ ದಂಪತಿಗಳು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಮಗಳಿಗೆ ಮೊದಲ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

Join Nadunudi News WhatsApp Group

ಮಗಳ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಡಿಯೋ ಹಂಚಿಕೊಂಡ ರಿಷಬ್
ಕಾಂತಾರ ಸ್ಟಾರ್ ರಿಷಬ್ ಅವರ ಮಗಳು ರಾಧ್ಯ ಗೆ ಒಂದು ವರ್ಷದ ಹುಟ್ಟು ಹಬ್ಬದ ಸಂಭ್ರಮ. ತಮ್ಮ ಮಗಳ ಹುಟ್ಟುಹಬ್ಬದ ಸಲುವಾಗಿ ಮಗಳ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

Rishabh Shetty Daughter Birthday Celebration
Image Source: Instagram

ಬಿಳಿ ಹಾಗೂ ಹಸಿರು ಬಣ್ಣದ ಡ್ರೆಸ್ ನಲ್ಲಿ ರಾಧ್ಯಳ ಫೋಟೋಶೂಟ್ ಬಹಳ ಅದ್ಭುತವಾಗಿ ಮೂಡಿ ಬಂದಿದೆ. ಅವರ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ರಿಷಬ್ ಅಭಿಮಾನಿಗಳು ರಾದ್ಯಾಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

Rishabh Shetty Daughter Birthday Celebration
Image Source: Instagram

Join Nadunudi News WhatsApp Group