Rohit Sharma: ಶರ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ, T20 ವಿಶ್ವಕಪ್ ನಲ್ಲಿ ಶರ್ಮ ಆಡುವುದು ಡೌಟ್.

T20 ವಿಶ್ವಕಪ್ ನಲ್ಲಿ ಶರ್ಮ ಆಡುವುದು ಡೌಟ್.

Rohit Sharma Latest Update: ICC World Cup 2024 ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗುತ್ತದೆ. T20 ಗಾಗಿ ಅನೇಕ ಜನರು ಕಾಯುತ್ತಿದ್ದಾರೆ. ಇನ್ನು ಈಗಾಗಲೇ T20 ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಟಗಾರರ ಆಯ್ಕೆ ಕೂಡ ನಡೆದಿದೆ. ICC Team India ದಲ್ಲಿ ಆಡುವ ಆಟಗಾರರನ್ನು ಈಗಾಗಲೇ ಆಯ್ಕೆ ಮಾಡಿದೆ. USA ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯ ವಹಿಸುವ ICC T20 ಪಂದ್ಯಾವಳಿಯು ಜೂನ್ 2 ರಂದು ಪ್ರಾರಂಭವಾಗಲಿದೆ.

ಇನ್ನು T20 ಪಂದ್ಯದ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿರುವ ರೋಹಿತ್ ಶರ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರಬಿದ್ದಿದೆ. ಹೌದು, ಈ ಬಾರಿಯ T20 ಪಂದ್ಯದಲ್ಲಿ ರೋಹಿತ್ ಶರ್ಮ ಆಡುವ ಬಗ್ಗೆ ಪ್ರಶ್ನೆಗಳು ಹುಟ್ಟುತ್ತಿದೆ. ಇದರ ಬಗ್ಗೆ ಮಾಹಿತಿ ಇಲ್ಲಿದೆ.

Rohit Sharma Latest Update
Image Credit: Indianexpress

T20 ವಿಶ್ವಕಪ್ ನಲ್ಲಿ ಶರ್ಮ ಆಡುವುದು ಡೌಟ್
ಶುಕ್ರವಾರ ಮೇ 3 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 12 ವರ್ಷಗಳ ನಂತರ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ 2024 ರ 51 ನೇ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಗೆದ್ದುಕೊಂಡಿತು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವ 11 ರ ಭಾಗವಾಗಿರಲಿಲ್ಲ. ಬೆನ್ನು ನೋವಿನಿಂದಾಗಿ ರೋಹಿತ್ ಆಡುವ 11 ರ ಬಳಗದಿಂದ ಹೊರಗುಳಿದಿದ್ದರು.

ರೋಹಿತ್ ಬೆನ್ನು ನೋವು ಮತ್ತು ಬಿಗಿತದಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಮೈದಾನದಲ್ಲಿ ಫೀಲ್ಡಿಂಗ್ ಮಾಡಲು ಸಾಧ್ಯವಾಗಲಿಲ್ಲ. ಆದಾಗ್ಯೂ, ರೋಹಿತ್ ಮುಂಬೈಗೆ ಇನ್ನಿಂಗ್ಸ್ ಆರಂಭಿಸಲು ಬಂದರು. ಆದರೆ ರೋಹಿತ್ ಶರ್ಮಾ ಅವರಿಂದ ಹೆಚ್ಚು ರನ್ ಗಳಿಸಲು ಸಾಧ್ಯವಾಗದೆ ಕೇವಲ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ 11 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಹೀಗಾಗಿ ರೋಹಿತ್ ಶರ್ಮಾ ಮುಂದಿನ ಪಂದ್ಯದಲ್ಲಿ ಮುಂಬೈ ಪರ ಆಡುತ್ತಾರೋ ಇಲ್ಲವೋ ಕಾದು ನೋಡಬೇಕಿದೆ.

Rohit Sharma T20 World Cup
Image Credit: Timesnownews

ಶರ್ಮ ಅಭಿಮಾನಿಗಳಿಗೆ ಬೇಸರದ ಸುದ್ದಿ
ಮುಂಬೈನ ಅನುಭವಿ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ರೋಹಿತ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದ ನಂತರ ರೋಹಿತ್ ಶರ್ಮಾ ಅವರ ಬೆನ್ನಿನಲ್ಲಿ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

Join Nadunudi News WhatsApp Group

ಫೆಬ್ರವರಿ ಮತ್ತು ಮಾರ್ಚ್‌ ನಲ್ಲಿ ಇಂಗ್ಲೆಂಡ್ ವಿರುದ್ಧದ 5-ಟೆಸ್ಟ್ ಸರಣಿಯ ಸಂದರ್ಭದಲ್ಲಿ ರೋಹಿತ್ ಶರ್ಮಾ ಬೆನ್ನುನೋವಿನ ಸಮಸ್ಯೆಗೆ ಒಳಗಾಗಿದ್ದರು. ಬೆನ್ನು ನೋವಿನಿಂದಾಗಿ ರೋಹಿತ್ ಶರ್ಮಾ ಧರ್ಮಶಾಲಾ ಟೆಸ್ಟ್‌ ನ ಮೂರನೇ ದಿನದಂದು ಆಟದಿಂದ ಹೊರಗುಳಿದಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ರೋಹಿತ್ ಶರ್ಮ ಆದಷ್ಟು ಬೇಗ ಚೇತರಿಸಿಕೊಂಡು T20 ರಾಲಿ ಆಡಳಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

Rohit Sharma Latest News Update
Image Credit: News 18

Join Nadunudi News WhatsApp Group