Rohit Sharma T20: ರೋಹಿತ್ ಶರ್ಮಾ ಅಭಿಮಾನಿಗಳಿಗೆ ಹೊಸ ವರ್ಷದ ಗುಡ್ ನ್ಯೂಸ್, ಮೈದಾನದಲ್ಲಿ ಸಿಕ್ಸರ್ ಸುರಿಮಳೆ ಖಂಡಿತ

ಹೊಸ ವರ್ಷದ ಆರಂಭದಲ್ಲಿಯೇ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್

Rohit Sharma Latest T20 Update: ಕ್ರಿಕೆಟ್ ಮೇಲೆ ಎಲ್ಲರೂ ಆಸಕ್ತಿ ತೋರುತ್ತಾರೆ. ಕ್ರಿಕೆಟ್ ಆಟದ ಜೊತೆಗೆ ಭಾರತೀಯ ತಂಡದ ಪ್ರತಿ ಆಟಗಾರ ಕೂಡ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಕೆಲವೊಂದು ಪಂದ್ಯಗಳಲ್ಲಿ ಕೆಲ ಆಟಗಾರರು ಅನಿವಾರ್ಯ ಕಾರಣಗಳಿಂದ ಆಡಲು ಸಾಧ್ಯವಾಗುವುದಿಲ್ಲ.

ಇನ್ನು ನಿಮಗೆ ತಿಳಿದಿರುವ ಹಾಗೆ ಕಳೆದ ಟಿ20 ವಿಶ್ವಕಪ್ ನಂತರ ರೋಹಿತ್ ಶರ್ಮ ಭಾರತದ ಪರ ಈವರೆಗೆ ಯಾವುದೇ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿಲ್ಲ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೋಹಿತ್ ಶರ್ಮ (Rohit Sharma) ಇಲ್ಲದಿರುವ ಅವರ ಅಭಿಮಾನಿಗಳಿಗೆ ಬೇಸರದ ಸಂಗತಿಯಾಗಿತ್ತು. ಸದ್ಯ BCCI ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. ಹೊಸ ವರ್ಷದ ಆರಂಭದಲ್ಲಿ ಭಾರತೀಯ ಕ್ರಿಕೆಟ್ ನಲ್ಲಿ ಮಹತ್ವದ ಬದಲಾವಣೆ ಆಗಲಿದೆ.

Rohit Sharma Latest News Updates
Image Credit: 7criccricket

ಹೊಸ ವರ್ಷದ ಆರಂಭದಲ್ಲಿ ಭಾರತೀಯ ಕ್ರಿಕೆಟ್ ನಲ್ಲಿ ಮಹತ್ವದ ಬದಲಾವಣೆ
ಹೊಸ ವರ್ಷದ ಆರಂಭದಲ್ಲಿ ಇದೀಗ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಈ ಬಾರಿ ಟೀಮ್ ಇಂಡಿಯಾದಲ್ಲಿ ಬಾರಿ ಬದಲಾವಣೆ ಆಗಲಿದೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ ಒಂದು ವರ್ಷದ ಬಳಿಕ ಟಿ20 ತಂಡಕ್ಕೆ ಮರಳಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ. ಹೊಸ ವರ್ಷದ ಆರಂಭದಲ್ಲಿಯೇ ರೋಹಿತ್ ಅಭಿಮಾನಿಗಳಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇದರಿಂದಾಗಿ ರೋಹಿತ್ ಶರ್ಮ ಅಭಿಮಾನಿಗಳು ಬಾರಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಒಂದು ವರ್ಷದ ಬಳಿಕ ಟಿ20 ತಂಡಕ್ಕೆ ಮರಳಿದ ರೋಹಿತ್ ಶರ್ಮ
ವರದಿಗಳ ಪ್ರಕಾರ ಅಫ್ಘಾನಿಸ್ತಾನ ಮತ್ತು ಭಾರತ ನಡುವಿನ ಟಿ20 ಸರಣಿಗೆ ರೋಹಿತ್ ತಂಡಕ್ಕೆ ಮರಳಲಿದ್ದಾರೆ. ನಾಯಕತ್ವದ ಹೊಣೆಯನ್ನೂ ಅವರೇ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಸರಣಿಗೆ ರೋಹಿತ್ ಭಾರತ ಕ್ರಿಕೆಟ್ ತಂಡಕ್ಕೆ ಮರಳಿದರೆ ಟಿ20 ವಿಶ್ವಕಪ್‌ ನಲ್ಲಿ ಟೀಂ ನಾಯಕನಾಗಿ ಇಂಡಿಯಾವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ. ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Rohit Sharma Latest T20 Update
Image Credit: Cricketaddictor

ರೋಹಿತ್ ಶರ್ಮಾ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದು, ಅವರು T20 ವಿಶ್ವಕಪ್‌ ಗೆ ನಾಯಕತ್ವವನ್ನು ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿ ಮುಗಿದ ಕೂಡಲೇ ಭಾರತ ತಂಡವು ಅಪಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಟಿ20 ವಿಶ್ವಕಪ್ ಗೂ ಮುನ್ನ ಟೀಮ್ ಇಂಡಿಯಾದ ಕೊನೆಯ ಟಿ20 ಸರಣಿ ಇದಾಗಿದೆ.

Join Nadunudi News WhatsApp Group

Join Nadunudi News WhatsApp Group